Test Match; ಭಾರತದ ಆಸ್ಟ್ರೇಲಿಯ ಪ್ರವಾಸ; ಪರ್ತ್‌ನಲ್ಲಿ ಮೊದಲ ಟೆಸ್ಟ್
1991-92ರ ಬಳಿಕ ಮೊದಲ ಸಲ 5 ಪಂದ್ಯ
Team Udayavani, Mar 20, 2024, 12:02 AM IST
ಮೆಲ್ಬರ್ನ್: ಟೀಮ್ ಇಂಡಿಯಾದ ಈ ಬಾರಿಯ ವರ್ಷಾಂ ತ್ಯದ ಪ್ರವಾಸ ತಾಣ ಆಸ್ಟ್ರೇಲಿಯ. ಈ ವೇಳೆ 5 ಪಂದ್ಯಗಳ ಸುದೀರ್ಘ ಟೆಸ್ಟ್ ಸರಣಿಯಲ್ಲಿ ಭಾರತ ಪಾಲ್ಗೊಳ್ಳಲಿದೆ. ಇದಕ್ಕೆ ಸಂಬಂಧಿಸಿದಂತೆ “ಸಿಡ್ನಿ ಮಾರ್ನಿಂಗ್ ಹೆರಾಲ್ಡ್’ ಸಂಭಾವ್ಯ ವೇಳಾಪಟ್ಟಿಯೊಂದನ್ನು ಪ್ರಕಟಿಸಿದ್ದು, ಇದರಂತೆ ಪರ್ತ್‌ನಲ್ಲಿ ಮೊದಲ ಟೆಸ್ಟ್ ನಡೆಯಲಿದೆ.
ಉಳಿದಂತೆ ಅಡಿಲೇಡ್, ಬ್ರಿಸ್ಬೇನ್, ಮೆಲ್ಬರ್ನ್ ಮತ್ತು ಸಿಡ್ನಿಯಲ್ಲಿ ಉಳಿದ 4 ಟೆಸ್ಟ್‌ಗಳನ್ನು ಆಡಲಾಗುವುದು. ಅಡಿಲೇಡ್ ಓವಲ್‌ನಲ್ಲಿ ದ್ವಿತೀಯ ಟೆಸ್ಟ್ ನಡೆಯಲಿದ್ದು, ಇದು ಹಗಲು-ರಾತ್ರಿ ಪಂದ್ಯ ಆಗಿರಲಿದೆ. ಬ್ರಿಸ್ಬೇನ್‌ನಲ್ಲಿ 3ನೇ ಟೆಸ್ಟ್ ನಡೆಯಲಿದೆ. ಸಂಪ್ರದಾಯದಂತೆ ಬಾಕ್ಸಿಂಗ್ ಡೇ ಟೆಸ್ಟ್ ಹಾಗೂ ನ್ಯೂ ಇಯರ್ ಟೆಸ್ಟ್ ಪಂದ್ಯಗಳ ಆತಿಥ್ಯ ಮೆಲ್ಬರ್ನ್ ಮತ್ತು ಸಿಡ್ನಿ ಪಾಲಾಗಿದೆ. 2020-21ರ ಭಾರತ ಪ್ರವಾಸದ ವೇಳೆ ಪರ್ತ್‌ಗೆ ಟೆಸ್ಟ್ ಆತಿಥ್ಯ ನೀಡದಿದ್ದುದು ಅಚ್ಚರಿಗೆ ಕಾರಣವಾಗಿತ್ತು.
ಹೀಗಾಗಿ ಈ ಬಾರಿ ಪರ್ತ್‌ಗೆ ಮೊದಲ ಆದ್ಯತೆ ನೀಡಿರುವ ಸಾಧ್ಯತೆ ಇದೆ.
ಆದರೆ “ಕ್ರಿಕೆಟ್ ಆಸ್ಟ್ರೇಲಿಯ’ ಈ ವೇಳಾಪಟ್ಟಿಯನ್ನಿನ್ನೂ ಅಧಿಕೃತಗೊಳಿ ಸಿಲ್ಲ. ಈ ತಿಂಗಳ ಅಂತ್ಯದೊಳಗೆ ಪ್ರಕಟ ಗೊಳ್ಳಲಿದೆ ಎಂದು ವರದಿಯಾಗಿದೆ. ಟೆಸ್ಟ್ ಸರಣಿ ನವೆಂಬರ್ ಕೊನೆಯ ವಾರ ಆರಂಭವಾಗುವ ನಿರೀಕ್ಷೆ ಇದೆ.
ಭಾರತ 1991-92ರ ಬಳಿಕ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯದಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಅಂದು ಆಸ್ಟ್ರೇಲಿಯ 4-0 ಅಂತರದ ಗೆಲುವು ಸಾಧಿಸಿತ್ತು.
ಭಾರತಕ್ಕೆ ಸತತ 4 ಸರಣಿ
ಇತ್ತಂಡಗಳ ನಡುವೆ ನಡೆದ ಕಳೆದ 4 ಸರಣಿಗಳಲ್ಲಿ ಭಾರತವೇ ಗೆದ್ದು ಬಂದಿರುವುದು ವಿಶೇಷ. 2016-17ರಲ್ಲಿ 2-1 (ತವರಿನ ಸರಣಿ), 2018-19ರಲ್ಲಿ 2-1 (ಆಸ್ಟ್ರೇಲಿಯದಲ್ಲಿ), 2020- 21ರಲ್ಲಿ 2-1 (ಆಸ್ಟ್ರೇಲಿಯದಲ್ಲಿ) ಹಾಗೂ 2022-23ರಲ್ಲಿ 2-1 (ತವರಿನ ಸರಣಿ) ಅಂತರದಿಂದ ಭಾರತ ಜಯ ಸಾಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.