BJP-JDS ಮೈತ್ರಿಯಲ್ಲಿ ಸಮಸ್ಯೆ ಇಲ್ಲ ಮೆತ್ತಗಾದ ಕುಮಾರಸ್ವಾಮಿ
ಎನ್ಡಿಎ ಗೆಲುವಿಗಾಗಿ ಒಗ್ಗಟ್ಟಾಗಿ ಶ್ರಮಿಸುವೆವು: ಎಚ್ಡಿಕೆ
Team Udayavani, Mar 20, 2024, 12:31 AM IST
ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿಯೂ ಎನ್ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ ಕಮಿಟಿ ಯಲ್ಲಿ ನಮ್ಮ ಪಕ್ಷದ ಮುಖಂಡರು ವ್ಯಕ್ತಪಡಿಸಿದ ಭಾವನೆಗಳನ್ನು ನಾನು ಹೇಳಿದ್ದೇನೆ ಅಷ್ಟೇ. ಈ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ಮಾಡಿದ್ದೇನೆ. ನಾನು ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನ್ನೈಗೆ ಹೋಗುತ್ತಿದ್ದೇನೆ. ನಾನು ಬರುವವರೆಗೂ ಒಮ್ಮತವಾಗಿ ಮೈತ್ರಿ ಧರ್ಮಕ್ಕೆ ಬದ್ಧರಾಗಿ ಚುನಾ ವಣೆ ಕೆಲಸ ಮಾಡಿಕೊಂಡು ಹೋಗುವಂತೆ ನನ್ನ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದೇನೆ. ಅದೇ ರೀತಿ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಬಯಸುತ್ತೇನೆ ಎಂದರು.
ಕೋಲಾರ ಗೊಂದಲ ನಿವಾರಣೆ
ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಕೋಲಾರ ಕ್ಷೇತ್ರದ ಬಗ್ಗೆ ಗೊಂದಲ ನಿವಾರಣೆ ಆಗಿದೆ. ಆಸ್ಪತ್ರೆಯಿಂದ ಬಂದ ಕೂಡಲೆ ಮೂರೂ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡುತ್ತೇವೆ. ಮಂಡ್ಯ ಜಿಲ್ಲೆಯ ಕಾರ್ಯಕರ್ತರು ನಿರಾಶೆ ಪಡಬೇಕಿಲ್ಲ. ಅವರಿಗೆ ಒಪ್ಪಿಗೆಯಾಗುವ ಒಳ್ಳೆಯ ನಿರ್ಧಾರವನ್ನೇ ಪ್ರಕಟಿಸುತ್ತೇನೆ. ಇಂದಿನಿಂದಲೇ ಎಲ್ಲರೂ ಚುನಾ ವಣೆ ಕೆಲಸ ಆರಂಭಿಸಬೇಕು ಎಂದು ಮಂಡ್ಯ ಕಾರ್ಯಕರ್ತರಿಗೆ ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.