Naxals: ಮತ್ತೆ ನಕ್ಸಲರು ಪ್ರತ್ಯಕ್ಷ: ಆತಂಕಕಾರಿ ಬೆಳವಣಿಗೆ


Team Udayavani, Mar 20, 2024, 7:30 AM IST

Naxals: ಮತ್ತೆ ನಕ್ಸಲರು ಪ್ರತ್ಯಕ್ಷ: ಆತಂಕಕಾರಿ ಬೆಳವಣಿಗೆ

ದೇಶಾದ್ಯಂತ ಲೋಕಸಭೆ ಚುನಾವಣೆ ಘೋಷಣೆಯಾಗಿದೆ. ಕರ್ನಾಟಕದಲ್ಲೂ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಕಾನೂನು ಸುವ್ಯವಸ್ಥೆಗೆ ಹೆಸರಾಗಿ, ಶಾಂತಿಪ್ರಿಯ ರಾಜ್ಯ ಎಂದೇ ಕರೆಯಿಸಿಕೊಂಡಿದ್ದ ಕರ್ನಾಟಕದಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಇಲ್ಲದ ನಕ್ಸಲರು ಚುನಾವಣೆ ಸಂದರ್ಭದಲ್ಲಿ ಕಾಣಿಸಿ ಕೊಂಡಿರುವುದು ಸಹಜವಾಗಿ ಆತಂಕ ಮೂಡಿಸಿದೆ.

ಕೊಡಗು- ದಕ್ಷಿಣ ಕ್ನನಡ ಜಿಲ್ಲೆಯ ಗಡಿಯಲ್ಲಿರುವ ಸುಳ್ಯ ಸಮೀಪದ ಕೂಜಿಮಲೆ ಬಳಿ ನಕ್ಸಲರ ಪತ್ತೆಯಾಗಿದೆ. ಅಲ್ಲಿನ ಅಂಗಡಿಯೊಂದರಲ್ಲಿ ದಿನಸಿ ಪದಾರ್ಥಗಳನ್ನು ಖರೀದಿಸಿದ ನಾಲ್ವರನ್ನು ಅರಣ್ಯ ಇಲಾಖೆ ಸಿಬಂದಿ ಎಂದೇ ಎಲ್ಲರೂ ತಿಳಿದಿದ್ದರು. ಆದರೆ ಮರುದಿನ ಅರಣ್ಯ ಇಲಾಖೆಯ ಸಿಬಂದಿ ಅದೇ ಅಂಗಡಿಗೆ ಹೋದಾಗ ವಿಚಾರ ತಿಳಿಯಿತು. ಸ್ಥಳೀಯ ಪೊಲೀಸರು, ನಕ್ಸಲ್‌ ನಿಗ್ರಹ ದಳದ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಂಧ್ರಪ್ರದೇಶ ಸೇರಿದಂತೆ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾಕಷ್ಟು ಕುಕೃತ್ಯ ಎಸಗಿದ್ದ ನಕ್ಸಲರನ್ನು ಬಗ್ಗುಬಡಿಯಲಾಗಿದೆ. ಅನೇಕರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದು ಅವರಿಗೆ ಅಗತ್ಯ ಪ್ಯಾಕೇಜ್‌ ತಂದು ನಕ್ಸಲ್‌ ಚಟುವಟಿಕೆಯಿಂದ ವಿಮುಕ್ತಗೊಳಿಸಲಾಗಿದೆ. ಅದರಲ್ಲೂ ಕಳೆದ ನಾಲ್ಕೈದು ವರ್ಷಗಳಿಂದ ಇವರ ಹಾವಳಿ ಇಲ್ಲದೆ, ಜನತೆ ಹಾಗೂ ಸರಕಾರಗಳು ನೆಮ್ಮದಿಯಿಂದ ಇದ್ದವು.

ಲೋಕಸಭೆ ಚುನಾವಣೆ ಬೆನ್ನಲ್ಲೇ ಕಾಣಿಸಿಕೊಂಡಿರುವುದು ಆತಂಕ ಮೂಡಿರು ವುದಷ್ಟೆ ಅಲ್ಲದೆ, ಪೊಲೀಸರು, ಚುನಾವಣ ಆಯೋಗಕ್ಕೂ ತಲೆನೋವಾಗಿ ಪರಿಣ ಮಿಸಿದೆ. ಹೀಗಾಗಿ ಹೆಚ್ಚಿನ ಬಂದೋಬಸ್ತ್ ಕೂಡ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೂ ಆಸ್ಪದ ಕೊಡಬಾರದು ಎಂಬ ನಿಟ್ಟಿನಲ್ಲಿ ನಿಗಾ ಇಡಲಾಗಿದೆ.

ಇಂಥ ಚಟುವಟಿಕೆಗಳ ಬಗ್ಗೆ ಕಠಿನ ನಿಗ್ರಹಕ್ಕೆ ಸರಕಾರ ಅಗತ್ಯ ಕ್ರಮ ಕೈಗೊಳ್ಳುವುದು ಸೂಕ್ತ. ಪ್ರಸಕ್ತ ರಾಜ್ಯದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮಾತ್ರ ನ್ಸಕಲ್‌ ನಿಗ್ರಹ ಪಡೆ ಇದ್ದು, ನೆರೆಯ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂಥ ಘಟನೆಗಳು ನಡೆದಾಗ ಎಎನ್‌ಎಫ್ ಸಿಬಂದಿ ತತ್‌ಕ್ಷಣ ಧಾವಿಸುವುದು ಕಷ್ಟವಾಗಬಹುದು. ಈ ನಿಟ್ಟಿನಲ್ಲಿ ಪಡೆಯ ಶಾಖೆಗಳನ್ನು ಅಲ್ಲಲ್ಲಿ ಕ್ರಿಯಾಶೀಲವಾಗಿಸುವತ್ತ ಚಿಂತಿಸುವುದು ಒಳಿತು.

ನಾಗರಿಕ ಸಮಾಜದಲ್ಲಿ ಸಂವಿಧಾನದಡಿ ಹೋರಾಡಲಾಗದೆ ಸಾರ್ವಜನಿಕರನ್ನು ಆತಂಕಕ್ಕೆ ದೂಡುವುದು, ಕೂಲಿ-ಕಾರ್ಮಿಕರು, ಕಾಡಂಚಿನ ಜನರನ್ನು ಒತ್ತೆಯಾಳು ಗಳಾಗಿ ಇಟ್ಟುಕೊಳ್ಳುವುದು, ಸರಕಾರಗಳಿಗೆ ಸವಾಲೊಡ್ಡುವುದು ಸಾಮಾಜಿಕ ಸಂಘರ್ಷಕ್ಕೆ ಕಾರಣವಾಗಬಲ್ಲದೇ ಹೊರತು, ಮತಾöವ ಪ್ರಯೋಜನವನ್ನೂ ತಂದು ಕೊಡುವುದಿಲ್ಲ. ಜನರಿಗಿಂದು ಎಲ್ಲರಿಂದಲೂ ನೆಮ್ಮದಿಯ ಜೀವನವಷ್ಟೇ ಬೇಕಿರುವುದು. ಸಾಮಾಜಿಕ ವ್ಯವಸ್ಥೆಯನ್ನು ಅಲ್ಲಾಡಿಸುತ್ತೇವೆ ಎಂದುಕೊಳ್ಳುವುದು ಇಂದಿನ ನಾಗರಿಕ ಸಮಾಜದಲ್ಲಿ ಸುಲಭವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹೋರಾಟದ ಹೆಸರಿನಲ್ಲಿ ಜನರ ನೆಮ್ಮದಿ ಕೆಡಿಸಿದರೆ, ಜನರೇ ನಕ್ಸಲರ ವಿರುದ್ಧ ತಿರುಗಿ ಬೀಳುವ ಕಾಲವಿದು. ಹೋರಾಟ ಮಾಡುವುದೇ ಆದರೆ ಮುಖ್ಯವಾಹಿನಿಗೆ ಬಂದು ಹಕ್ಕೊತ್ತಾಯಗಳನ್ನು ಮಂಡಿಸಲು ಅವಕಾಶವಿದೆ. ಇದನ್ನು ಬಳಸಿಕೊಂಡು ನ್ಯಾಯ ಪಡೆದ ಅನೇಕರು ನಕ್ಸಲ್‌ ಚಟುವಟಿಕೆಯಿಂದ ಹೊರಬಂದಿರುವುದೂ ಉಂಟು. ಈ ಬಗ್ಗೆ ಸರಕಾರ ಕೂಡ ಸಾಕಷ್ಟು ಜಾಗೃತಿಗಳನ್ನು ಮೂಡಿಸಿರುವುದೂ ಅಲ್ಲದೆ ಮುಖ್ಯವಾಹಿನಿಗೆ ಬರುವ ಅವಕಾಶಗಳನ್ನೂ ಮಾಡಿಕೊಟ್ಟಿದೆ.

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.