Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
Team Udayavani, Mar 20, 2024, 5:05 PM IST
ಅಯೋಧ್ಯೆ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತನ್ನ ಪತಿ ನಿಕ್ ಜೋನಾಸ್ ಜೊತೆ ಬುಧವಾರ ಉತ್ತರ ಪ್ರದೇಶದ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ.
ಮದುವೆಯ ಬಳಿಕ ಅಮೆರಿಕಾದಲ್ಲಿ ನೆಲೆಸಿರುವ ಪ್ರಿಯಾಂಕಾ ಭಾರತಕ್ಕೆ ಅಪರೂಪಕ್ಕೊಮ್ಮೆ ಬರುತ್ತಾರೆ. ಹಾಲಿವುಡ್ ಸಿನಿಮಾದಲ್ಲೂ ಬ್ಯುಸಿಯಾಗಿರುವ ಅವರು, ಮಾರ್ಚ್ 15 ರಂದು ಭಾರತಕ್ಕೆ ಬಂದಿದ್ದಾರೆ.
ಪ್ರಿಯಾಂಕಾ ಬಲ್ಗರಿ ಈವೆಂಟ್ ನಲ್ಲಿ ಭಾಗವಹಿಸಿ, ಅಮೇಜಾನ್ ಪ್ರೈಮ್ ನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಹೋಳಿ ಹಬ್ಬದವೆರಗೂ ಭಾರತದಲ್ಲಿ ಅವರು ಇರಲಿದ್ದಾರೆ ಎನ್ನಲಾಗಿದೆ.
ಈ ನಡುವೆ ಅವರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಸಾಂಪ್ರದಾಯಿಕ ಉಡುಗೆಯಲ್ಲಿ ಪ್ರಿಯಾಂಕಾ ಕಾಣಿಸಿಕೊಂಡಿದ್ದಾರೆ. ಪ್ರಿಯಾಂಕಾ, ನಿಕ್ ಬಾಲರಾಮನ ಆಶೀರ್ವಾದವನ್ನು ಕೋರುತ್ತಿರುವ ಹಲವಾರು ಫೋಟೋಗಳನ್ನು ದೇವಾಲಯದ ಅರ್ಚಕ ಪ್ರದೀಪ್ ದಾಸ್ ಅವರು ಪೋಸ್ಟ್ ಮಾಡಿದ್ದಾರೆ.
ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ತಾರೆಯರಾದ ಅಮಿತಾಭ್ ಬಚ್ಚನ್, ಆಯುಷ್ಮಾನ್ ಖುರಾನಾ, ಕಂಗನಾ ರನೌತ್, ವಿಕ್ಕಿ ಕೌಶಲ್, ಕತ್ರಿನಾ ಕೈಫ್, ರಣಬೀರ್ ಕಪೂರ್, ಆಲಿಯಾ ಭಟ್, ಮಾಧುರಿ ದೀಕ್ಷಿತ್ ಸೇರಿದಂತೆ ಹಲವರು ಭಾಗವಹಿಸಿದ್ದರು.
Actor Priyanka Chopra Jonas, husband and singer Nick Jonas and their daughter Maltie Marie Jonas offered prayers at Ram Janmabhoomi Temple in Ayodhya, Uttar Pradesh.
(Source: Temple priest Pradeep Das) pic.twitter.com/WdWmcrXkwg
— ANI (@ANI) March 20, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.