LS Election; ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿಲ್ಲ: ಹೆಬ್ಬಾಳ್ಕರ್ ಸ್ಪಷ್ಟನೆ
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು... ನನಗೆ ಚುನಾವಣೆ ಎದುರಿಸುವುದು ಹೇಗೆ ಎಂಬುದು ಗೊತ್ತು
Team Udayavani, Mar 20, 2024, 6:17 PM IST
ಬೆಳಗಾವಿ: ಮನೆಯ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಚುನಾವಣ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಿದ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದು”ನಾನು ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿಲ್ಲ, ಕೆಲಸದ ಒತ್ತಡ ಕಡಿಮೆ ಮಾಡಲು ಮನವಿ ಸಲ್ಲಿಸಲು ಬಂದಿದ್ದರು’ ಎಂದು ಹೇಳಿದ್ದಾರೆ.
ನೀತಿ ಸಂಹಿತೆ ಉಲ್ಲಂಘಿಸಿ ಸಚಿವರು ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ‘ಚುನಾವಣ ನೀತಿ ಸಂಹಿತೆ ಉಲ್ಲಂಘಿಸಿಲ್ಲ.ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಇತ್ತೀಚೆಗೆ ಪಲ್ಸ್ ಪೋಲಿಯೋ, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ವೆ ಮಾಡಿದ್ದರು. ಈಗ ಬಿಎಲ್ಒ ಆಗಿ ಕೆಲಸ ಮಾಡ್ತಿದ್ದಾರೆ. ಬಿಎಲ್ಒ ಆಗಲು ನಮಗೆ ತೊಂದರೆ ಆಗುತ್ತಿದೆ ಎಂದು ನನಗೆ ಹೇಳಲು ಬಂದಿದ್ದಾರೆ. ಆದರೆ, ನಾನೇ ಅವರಿಗೆ ತಿಳಿ ಹೇಳಿ ಕೆಲಸ ಮಾಡಲು ಸೂಚಿಸಿದೆ’ ಎಂದರು.
‘ಚುನಾವಣೆ ವೇಳೆ ದೂರು ನೀಡುವುದು ಸರ್ವೆ ಸಾಮಾನ್ಯ. ದೂರು ಕೊಡಲಿ, ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ನಾನು ನಿಯಮ ಉಲ್ಲಂಘಿಸಿಲ್ಲ. ನಾನು ದೇಶದ ಕಾನೂನಿಗೆ ಗೌರವ ಕೊಡುತ್ತೇನೆ. ನನಗೆ ಇದು ಐದನೇ ಚುನಾವಣೆ. ನನಗೆ ಚುನಾವಣೆ ಎದುರಿಸುವುದು ಹೇಗೆ ಎಂಬುದು ಗೊತ್ತು’ ಎಂದರು.
ಬುಧವಾರ ಬೆಳಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸುಮಾರು 500 ಮಂದಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿದ್ದರು.ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಚಿತ್ರೀಕರಿಸಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರನ್ನು ಅಲ್ಲಿಂದ ಕಳಿಸಿ ಪ್ರಕರಣ ದಾಖಲಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.