Lok Sabha Polls; ಮಂಡ್ಯದಿಂದ ಸ್ಪರ್ಧಿಸೋದಿಲ್ಲ: ನಿಖಿಲ್ ಕುಮಾರಸ್ವಾಮಿ
Team Udayavani, Mar 20, 2024, 11:19 PM IST
ರಾಮನಗರ: ಮಂಡ್ಯದಿಂದ ನಾನು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿ ಅವರಿಗೆ ಆರೋಗ್ಯ ಸರಿ ಇಲ್ಲ. ಇನ್ನು 35 ದಿನ ಚುನಾವಣೆಗೆ ಸಮಯ ಇದೆ. ಮಂಡ್ಯ ಕ್ಷೇತ್ರಕ್ಕೆ ಇಬ್ಬರು ಅಭ್ಯರ್ಥಿಗಳ ಹೆಸರು ಕುಮಾರಸ್ವಾಮಿ ಅವರ ಮನಸ್ಸಿನಲ್ಲಿದೆ. ನಾವು ರಾಷ್ಟ್ರ ನಾಯಕರ ಅಭಿಪ್ರಾಯದ ಜತೆಗೆ ಸ್ಥಳೀಯ ಕಾರ್ಯಕರ್ತರ ಮಾತಿಗೂ ಮನ್ನಣೆ ನೀಡಬೇಕಾಗುತ್ತದೆ. ಎಲ್ಲವನ್ನೂ ಕ್ರೋಢೀಕರಿಸಿ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಸುಮಲತಾ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ. ಮೈತ್ರಿ ಧರ್ಮಕ್ಕೆ ನಮ್ಮ ಪಕ್ಷ ಬದ್ಧವಾಗಿದ್ದು, ಎರಡೂ ಪಕ್ಷದ ಮುಖಂಡರನ್ನು ಒಗ್ಗೂಡಿಸಿಕೊಂಡು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇವೆ ಎಂದರು.
10 ಲಕ್ಷ ಕುಕ್ಕರ್ ಹಂಚಲು ಕೈ ಸಿದ್ಧತೆ: ನಿಖಿಲ್ ಆರೋಪ
ರಾಮನಗರ: ಕಾಂಗ್ರೆಸ್ ನವರು ಕಳೆದ 20 ದಿನಗಳಿಂದ ಮತದಾರರಿಗೆ ಗಿಫ್ಟ್ ಗಳನ್ನು ನೀಡುತ್ತಿದ್ದಾರೆ. ಹಾರೋಹಳ್ಳಿಯ ಸ್ಟೌವ್ ಕ್ರಾಪ್ಟ್ ಕಾರ್ಖಾನೆಯಲ್ಲಿ 10 ಲಕ್ಷ ಕುಕ್ಕರ್, ತವಾಗಳನ್ನು ಸಿದ್ಧಪಡಿಸಿದ್ದು, ಈ ಪೈಕಿ 5 ಲಕ್ಷ ಹಂಚಿಕೆಯಾಗಿವೆ. ಕ್ಷೇತ್ರದಲ್ಲಿ ಚುನಾವಣ ಅಕ್ರಮ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ವಶಪಡಿಸಿಕೊಂಡಿರುವ ಸೀರೆಗಳು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್‌ಗೆ ಸೇರಿದ್ದಾಗಿದೆ. ನಗರದ ಗೋದಾಮಿನಲ್ಲಿ 3,600 ಸೀರೆ ಮತ್ತು ಚೂಡಿದಾರ್‌ಗಳನ್ನು ವಶಪಡಿಸಿಕೊಂಡಿದ್ದು, ಇವುಗಳನ್ನು ಸೂರತ್‌ನಿಂದ ಖರೀದಿಸಿದ್ದು. ಇದನ್ನು ಎ.ಎಂ. ಗ್ರಾನೈಟ್ ಕಂಪೆನಿ ಖರೀದಿ ಮಾಡಿರುವ ದಾಖಲೆಗಳು ಲಭ್ಯವಾಗಿವೆ. ಈ ಗ್ರಾನೈಟ್ ಕಂಪೆನಿಯ ಮಾಲಕರು ಇಕ್ಬಾಲ್ ಹುಸೇನ್ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.