ಸಾಮಾನ್ಯ ಸಂಗ್ರಹಣ ನಿಧಿಗೆ ಹುಂಡಿ ಹಣ: ಸರಕಾರಕ್ಕೆ ಮಸೂದೆ ವಾಪಸ್‌ ಕಳುಹಿಸಿದ ರಾಜ್ಯಪಾಲರು

Team Udayavani, Mar 20, 2024, 11:49 PM IST

ಸಾಮಾನ್ಯ ಸಂಗ್ರಹಣ ನಿಧಿಗೆ ಹುಂಡಿ ಹಣ: ಸರಕಾರಕ್ಕೆ ಮಸೂದೆ ವಾಪಸ್‌ ಕಳುಹಿಸಿದ ರಾಜ್ಯಪಾಲರು

ಬೆಂಗಳೂರು: ಮುಜರಾಯಿ ಇಲಾಖೆಯಡಿ ಬರುವ ಎ ಮತ್ತು ಬಿ ದರ್ಜೆ ದೇವಸ್ಥಾನಗಳ ಆದಾಯದಲ್ಲಿ ಸಾಮಾನ್ಯ ಸಂಗ್ರಹಣ ನಿಧಿಗೆ ಪಾಲು ಕೊಡಬೇಕೆನ್ನುವ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ಮಸೂದೆ-2024ವನ್ನು ರಾಜ್ಯಪಾಲರು ರಾಜ್ಯ ಸರಕಾರಕ್ಕೆ ವಾಪಸ್‌ ಕಳುಹಿಸಿದ್ದಾರೆ.

ಇತ್ತೀಚೆಗೆ ನಡೆದಿದ್ದ ಅಧಿವೇಶನದ ಸಂದರ್ಭ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿ ಹೋಗಿದ್ದ ಮಸೂದೆಗೆ ವಿಧಾನಪರಿಷತ್ತಿನಲ್ಲಿ ಹಿನ್ನಡೆಯುಂಟಾಗಿತ್ತು. 10 ಲಕ್ಷ ರೂ.ಗಳಿಂದ 1 ಕೋಟಿ ರೂ.ವರೆಗಿನ ವರಮಾನದಲ್ಲಿ ಶೇ. 5 ರಷ್ಟನ್ನು ಹಾಗೂ 1 ಕೋಟಿ ರೂ.ಗೂ ಅಧಿಕ ವರಮಾನವಿರುವ ದೇಗುಲಗಳ ಹುಂಡಿಯಿಂದ ಶೇ.10 ರಷ್ಟು ಹಣವನ್ನು ಸಾಮಾನ್ಯ ಸಂಗ್ರಹಣಾ ನಿಧಿಗೆ ಸಲ್ಲಿಸಬೇಕು ಎಂಬುದು ಈ ತಿದ್ದುಪಡಿ ಮಸೂದೆಯಲ್ಲಿ ಉಲ್ಲೇಖವಾಗಿತ್ತು.

ವಿಧಾನಪರಿಷತ್ತಿನಲ್ಲಿ ತಿರಸ್ಕೃತ ಗೊಂಡಿದ್ದ ಇದನ್ನು ವಿಧಾನಸಭೆಯಲ್ಲಿ ಮರುಮಂಡಿಸಿ ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು. ಇದೇ ರೀತಿ ಕಳುಹಿಸಿದ್ದ ಸುಮಾರು 12 ಮಸೂದೆಗಳಿಗೆ ಮಾ. 7 ರಂದು ರಾಜ್ಯಪಾಲರು ಅಂಕಿತ ಹಾಕಿದ್ದರು. ಆದರೆ, ಇದೊಂದು ಮಸೂದೆಯನ್ನು ಮಾ. 14ರಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಸರಕಾರಕ್ಕೆ ಹಿಂದಿರುಗಿಸಿದ್ದು, ಎರಡು ಪ್ರಮುಖ ಸ್ಪಷ್ಟನೆಗಳನ್ನು ಕೇಳಿದ್ದಾರೆ.

ಹೈಕೋರ್ಟ್‌ ತಡೆ ನೀಡಿದೆ
1997ರ ಈ ಕಾಯ್ದೆಗೆ 2011 ಮತ್ತು 2012ರಲ್ಲಿ ಅಂದಿನ ರಾಜ್ಯ ಸರಕಾರ ತಂದಿದ್ದ ತಿದ್ದುಪಡಿಗೆ ಧಾರವಾಡ ಹೈಕೋರ್ಟ್‌ ತಡೆ ನೀಡಿದೆ. ಇದನ್ನು ರಾಜ್ಯ ಸರಕಾರವೇ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಪ್ರಕರಣವು ಅಂತಿಮ ಹಂತದ ವಿಚಾರಣೆಯಲ್ಲಿದೆ.

ಇಡೀ ಕಾಯ್ದೆಗೇ ಹೈಕೋರ್ಟ್‌ ತಡೆ ನೀಡಿರುವುದು ಒಂದೆಡೆಯಾದರೆ, ಸುಪ್ರೀಂ ಕೋರ್ಟ್‌ ಮುಂದೆ ಇನ್ನೂ ವಿಚಾರಣೆಗೆ ಬಾಕಿ ಇರುವ ಈ ಹಂತದಲ್ಲಿ ತಿದ್ದುಪಡಿ ತರಬಹುದೇ ಎಂಬ ವಿಚಾರದಲ್ಲಿ ಹೆಚ್ಚಿನ ಸ್ಪಷ್ಟತೆ ಪಡೆಯುವ ಆವಶ್ಯಕತೆ ಇದೆ.

ಮತ್ತೆ ರಾಜ್ಯಪಾಲರಿಗೆ
ಇತರ ಧಾರ್ಮಿಕ ಸಂಸ್ಥೆಗಳಿಗೂ ಇದೇ ಮಸೂದೆ ರೀತಿಯಲ್ಲಿ ಯಾವುದಾದರೂ ಶಾಸನ ರಚಿಸುವ ಯೋಚನೆ ರಾಜ್ಯ ಸರಕಾರಕ್ಕಿದೆಯೇ? ಸ್ಪಷ್ಟನೆಗಳೊಂದಿಗೆ ಕಡತವನ್ನು ಮರುಸಲ್ಲಿಕೆ ಮಾಡುವಂತೆ ನಿರ್ದೇ ಶನ ನೀಡಿ ರಾಜ್ಯ ಸರಕಾರಕ್ಕೆ ವಾಪಸ್‌ ಕಳುಹಿಸಿದ್ದಾರೆ. ಈ ಕಡತವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರ ಇಲಾಖೆಗೆ ಕಳುಹಿಸಲಾಗಿದ್ದು, ಸೂಕ್ತ ಸ್ಪಷ್ಟನೆಗಳೊಂದಿಗೆ ರಾಜ್ಯಪಾಲರಿಗೆ ಮತ್ತೆ ಕಳುಹಿಸುವುದಾಗಿ ಸರಕಾರದ ಮೂಲಗಳು ಸ್ಪಷ್ಟಪಡಿಸಿವೆ.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.