Apology: ಸುಳ್ಳು ಜಾಹಿರಾತು… ಸುಪ್ರೀಂ ಕೋರ್ಟ್ ಮುಂದೆ ಕ್ಷಮೆಯಾಚಿಸಿದ ಪತಂಜಲಿ
Team Udayavani, Mar 21, 2024, 12:24 PM IST
ನವದೆಹಲಿ: ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಗುರುವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪುದಾರಿಗೆಳೆಯುವ ಜಾಹೀರಾತುಗಳಿಗಾಗಿ ಕ್ಷಮೆಕೋರಿದ್ದಾರೆ.
ಆಯುರ್ವೇದದ ಮೂಲಕ ಜೀವನಶೈಲಿ ಸಂಬಂಧಿತ ವೈದ್ಯಕೀಯ ತೊಡಕುಗಳಿಗೆ ಪರಿಹಾರಗಳನ್ನು ಒದಗಿಸುವ ಮೂಲಕ ದೇಶದ ಆರೋಗ್ಯ ಮೂಲಸೌಕರ್ಯದ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ಪತಂಜಲಿಯ ಅನ್ವೇಷಣೆಯಾಗಿದೆ ಎಂದು ಸ್ಪಷ್ಟಪಡಿಸಿದ ಅವರು ಭವಿಷ್ಯದಲ್ಲಿ ಇಂತಹ ಜಾಹೀರಾತುಗಳನ್ನು ನೀಡುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಕಂಪನಿಯು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಸಾರ ಮಾಡುತ್ತಿರುವ ಕುರಿತು ಸುಪ್ರೀಂ ಕೋರ್ಟ್ ನೀಡಿದ ಶೋಕಾಸ್ ನೋಟಿಸ್ ನೀಡಿದ್ದು ಅಲ್ಲದೆ ಎರಡು ವಾರಗಳ ಒಳಗೆ ಖುದ್ದು ಹಾಜರಾಗುವಂತೆ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ನ್ಯಾಯಾಲಯ ಸೂಚಿಸಿದ ಎರಡು ದಿನಗಳ ಬಳಿಕ ಈ ವಿದ್ಯಮಾನ ನಡೆದಿದೆ.
ತನ್ನ ತಪ್ಪಿನ ಕುರಿತು ಸುಪ್ರೀಂ ಕೋರ್ಟ್‌ಗೆ ಪತಂಜಲಿ “ಬೇಷರತ್ ಕ್ಷಮೆಯಾಚಿಸಿದೆ,
ಫೆಬ್ರವರಿ 27 ರಂದು, ರಕ್ತದೊತ್ತಡ, ಮಧುಮೇಹ, ಸಂಧಿವಾತ, ಅಸ್ತಮಾ ಮತ್ತು ಬೊಜ್ಜು ಮುಂತಾದ ಕಾಯಿಲೆಗಳಿಗೆ ಪತಂಜಲಿ ಆಯುರ್ವೇದ್ ಉತ್ಪಾದಿಸುವ ಔಷಧಿಗಳ ಜಾಹೀರಾತುಗಳನ್ನು ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ನಿರ್ಬಂಧಿಸಿದೆ. ಅಲ್ಲದೆ ಈ ವಿಚಾರವಾಗಿ ಪತಂಜಲಿ ಆಯುರ್ವೇದ್ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.
ಇದಾದ ಬಳಿಕ ನವೆಂಬರ್ 2023 ರಲ್ಲಿ, ಕಂಪನಿಯು ವೈದ್ಯಕೀಯ ಪರಿಣಾಮಕಾರಿತ್ವದ ಬಗ್ಗೆ ಅಥವಾ ಔಷಧದ ವ್ಯವಸ್ಥೆಯನ್ನು ಟೀಕಿಸುವ ಬಗ್ಗೆ ಯಾವುದೇ ಹೇಳಿಕೆಗಳನ್ನು ಅಥವಾ ಆಧಾರರಹಿತ ಹಕ್ಕುಗಳನ್ನು ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿತು. ಆದರೆ ಕಂಪನಿ ಮತ್ತೆ ದಾರಿತಪ್ಪಿಸುವ ಜಾಹೀರಾತುಗಳನ್ನು ನೀಡುತ್ತಲೇ ಬರುತ್ತಿತ್ತು.
ಸಂಸ್ಥೆಯ ಉತ್ಪನ್ನಗಳ ಜಾಹೀರಾತುಗಳು ಮತ್ತು ಅವುಗಳ ಔಷಧೀಯ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆಗೆ ನೀಡಲಾದ ನೋಟಿಸ್‌ಗೆ ಪ್ರತಿಕ್ರಿಯಿಸಲು ವಿಫಲವಾದ ನಂತರ ಸುಪ್ರೀಂ ಕೋರ್ಟ್ ಮಂಗಳವಾರ ಯೋಗ ಗುರು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಖುದ್ದು ಹಾಜರಾಗುವಂತೆ ಸೂಚಿಸಿತ್ತು.
ಇದನ್ನೂ ಓದಿ: Electoral Bonds: 1600 ಕೋಟಿ ರೂ. ಯಾರಿಂದ ವಸೂಲಿ ಮಾಡಿದ್ದು? ರಾಹುಲ್ ಗೆ ಶಾ ತಿರುಗೇಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.