ನಮ್ಮವರ ಒಳಸಂಚಿನಿಂದಲೇ ವಿಧಾನಸಭೆಯಲ್ಲಿ ಸೋಲು: ಸಿದ್ದು ಸವದಿ

ಲೋಕಸಭಾ ಚುನಾವಣೆಯಲ್ಲಿ 405ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿಗೆ ಬರಲಿವೆ

Team Udayavani, Mar 21, 2024, 4:25 PM IST

ನಮ್ಮವರ ಒಳಸಂಚಿನಿಂದಲೇ ವಿಧಾನಸಭೆಯಲ್ಲಿ ಸೋಲು: ಸಿದ್ದು ಸವದಿ

ಉದಯವಾಣಿ ಸಮಾಚಾರ
ಬೀಳಗಿ: ನಮ್ಮವರ ಒಳ ಸಂಚಿನಿಂದ ನಾವು ವಿಧಾನಸಭಾ ಚುನಾವಣೆಯಲ್ಲಿ ಸೋಲಬೇಕಾಯಿತೇ ಹೊರತು ಕಾಂಗ್ರೆಸ್‌ನಿಂದಲ್ಲ ಎನ್ನುವುದನ್ನು ಅರಿತುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಣ್ಣಪುಟ್ಟ ಮನಸ್ತಾಪಗಳಿದ್ದರೆ ಅವುಗಳನ್ನು ಬದಿಗೊತ್ತಿ ದೇಶದ ಅಭಿವೃದ್ಧಿಗೋಸ್ಕರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಬಾಗಲಕೋಟೆ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಅಭಿವೃದ್ಧಿ ಮತ್ತು ಸುರಕ್ಷತೆ ದೃಷ್ಟಿಯಿಂದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ಮೂಲಕ ದೇಶ
ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ಆದ್ದರಿಂದ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಗೆಲುವಿಗೆ ಶ್ರಮಿಸಬೇಕು ಎಂದರು.

ಸ್ವಾತಂತ್ರ್ಯ ನಂತರ ಕೇಂದ್ರದಲ್ಲಿ ಬಿಜೆಪಿ ಅಧಿ ಕಾರಕ್ಕೆ ಬಂದ ನಂತರ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. ದೇಶ ವಿರೋಧಿ  ಶಕ್ತಿಗಳನ್ನು ನಿಗ್ರಹಿಸುವ ಶಕ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗಿದೆ ಎಂದರು.

ಕಾಂಗ್ರೆಸ್‌ನವರ ಗ್ಯಾರಂಟಿ ಕೆಲವರಿಗೆ ಮುಟ್ಟಿದ್ದು, ಇನ್ನೂ ಕೆಲವರಿಗೆ ಮುಟ್ಟಿಲ್ಲ. ಮೋದಿ ಅವರೇ ದೇಶದ ಜನತೆಯ ಗ್ಯಾರಂಟಿಯಾಗಿದ್ದು, ದೇಶ ಮತ್ತು ದೇಶದ ಭವಿಷ್ಯಕ್ಕಾಗಿ ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿಯಾಗಬೇಕು. ಬೀಳಗಿ ಮತಕ್ಷೇತ್ರದಲ್ಲಿ 40 ಸಾವಿರ ಮತ ಲೀಡ್‌ ಬರುವಂತೆ ಕಾರ್ಯಕರ್ತರು ತಮ್ಮ ಬೂತ್‌ ಮಟ್ಟದಲ್ಲಿ ಶ್ರಮಿಸಬೇಕು ಎಂದರು.

ಲೋಕಸಭಾ ಚುನಾವಣೆಯಲ್ಲಿ 405ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿಗೆ ಬರಲಿವೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ನೂರಕ್ಕೆ ನೂರರಷ್ಟು ಸತ್ಯ. ಬಾಗಲಕೋಟೆ ಮತಕ್ಷೇತ್ರದ ಜನರ ಮೇಲಿನ ಪ್ರೀತಿ, ವಿಶ್ವಾಸದಿಂದ ಮತ್ತೂಮ್ಮೆ ಪಿ.ಸಿ. ಗದ್ದಿಗೌಡರ ಅವರಿಗೆ ಟಿಕೆಟ್‌ ನೀಡಿದ್ದಾರೆ ಎಂದ ಅವರು, ಲೋಕಸಭಾ ಚುನಾವಣೆ ಮುಗಿದ ನಂತರ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ. ಮತ್ತೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದರು.

ಸಭೆಯಲ್ಲಿ ಬಾಗಲಕೋಟೆ ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಲಿಂಗರಾಜ ಪಾಟೀಲ, ಸಂಸದ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ| ಮುರುಗೇಶ ನಿರಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್‌ ಸದಸ್ಯರಾದ ಹಣಮಂತ ನಿರಾಣಿ, ಪಿ.ಎಚ್‌. ಪೂಜಾರ, ಬಿಜೆಪಿ ಬೆಳಗಾವಿ ವಿಭಾಗದ ಸಹ ಪ್ರಭಾರಿ ಬಸವರಾಜ ಯಂಕಂಚಿ, ಅಶೋಕ ಲಿಂಬಾವಳಿ, ಬಿಜೆಪಿ ತಾಲೂಕು ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಮೋಹನ ಜಾಧವ, ಎಂ.ಎಂ. ಶಂಭೋಜಿ, ಮಲ್ಲಿಕಾರ್ಜುನ ಅಂಗಡಿ, ಕೆ.ವಿ. ಪಾಟೀಲ, ಭರತ ಬಾರಕೇರ, ಹೂವಪ್ಪ ರಾಠೊಡ, ಹೊಳೆಬಸು ಬಾಳಶೆಟ್ಟಿ ಇತರರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

festcide

Feticide: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಪತ್ತೆ

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

1-MLP

BJP:ಮಹಾಲಿಂಗಪುರ ಪುರಸಭೆಯ 4 ಸದಸ್ಯರು, 3 ಮುಖಂಡರು ಪಕ್ಷದಿಂದ ಉಚ್ಛಾಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.