ED ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ
ನಿವಾಸದ ಸುತ್ತ ವ್ಯಾಪ್ಯಾಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ...
Team Udayavani, Mar 21, 2024, 8:33 PM IST
ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲು ಜಾರಿ ನಿರ್ದೇಶನಾಲಯದ (ಇ.ಡಿ.) ತಂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ಬಂಧಿಸಿದೆ.
ನಿವಾಸಕ್ಕೆ ಗುರುವಾರ ಸಂಜೆ ಆಗಮಿಸಿದ ತನಿಖಾ ಸಂಸ್ಥೆಯ ತಂಡವು ಮನಿ ಲಾಂಡರಿಂಗ್ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50 ರ ಅಡಿಯಲ್ಲಿ ದೆಹಲಿ ಮುಖ್ಯಮಂತ್ರಿಯ ಹೇಳಿಕೆಯನ್ನು ದಾಖಲಿಸಿಕೊಂಡು ಬಂಧನ ಮಾಡಿದೆ.
ಅರವಿಂದ್ ಕೇಜ್ರಿವಾಲ್ ಅವರ ಕಾನೂನು ತಂಡವು ತತ್ ಕ್ಷಣವೇ ಈ ವಿಷಯದ ತುರ್ತು ವಿಚಾರಣೆಯನ್ನು ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಇ.ಡಿ. ತನ್ನ ವಿರುದ್ಧ ಯಾವುದೇ ಬಲವಂತದ ಕ್ರಮ ಕೊಳ್ಳುವುದರ ವಿರುದ್ಧ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಆಲಿಸಿದ ದೆಹಲಿ ಹೈಕೋರ್ಟ್‌ನ ವಿಭಾಗೀಯ ಪೀಠ, “ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ, ಈ ಹಂತದಲ್ಲಿ ಮಧ್ಯಂತರ ಪರಿಹಾರವನ್ನು ನೀಡಲು ನಾವು ಒಲವು ಹೊಂದಿಲ್ಲ ಎಂದು ಹೇಳಿದ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ. ನಿವಾಸದ ಸುತ್ತ ವ್ಯಾಪ್ಯಾಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಕೇಜ್ರಿವಾಲ್ ನಿವಾಸದ ಮುಂದೆ ಆಪ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಸದ ಹೊರಗೆ ರಾಪಿಡ್ ಆಕ್ಷನ್ ಫೋರ್ಸ್ (RAF) ಕೂಡ ಹಾಜರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ
Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.