![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 22, 2024, 6:05 AM IST
ಬೆಂಗಳೂರು: ವಿಧಾನಪರಿಷತ್ತಿನ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಕೂಡ ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾಗಿದ್ದು, ಜೂನ್ ತಿಂಗಳಲ್ಲಿ ಅವರ ವಿಧಾನಪರಿಷತ್ ಸದಸ್ಯ ಸ್ಥಾನದ ಅವಧಿಯೂ ಮುಕ್ತಾಯಗೊಳ್ಳುತ್ತಿದೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಅಥವಾ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದ ಅವರು ಎರಡೂ ಕ್ಷೇತ್ರಗಳ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿಸಿದ್ದ ತೇಜಸ್ವಿನಿ, ಕನಕಪುರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಸೋಲಿಸಿ ಮುನ್ನೆಲೆಗೆ ಬಂದಿದ್ದರು.
ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಅವರನ್ನೇ ರಾಜಕೀಯ ಗುರುಗಳೆಂದಿದ್ದ ತೇಜಸ್ವಿನಿ, ಕಾಂಗ್ರೆಸ್ ತೊರೆದು ಬಿಜೆಪಿ ಸೇರುವಾಗ ಡಿಕೆಶಿ ಸಹೋದರರ ವಿರುದ್ಧ ಕಟು ಶಬ್ದ ಬಳಸಿದ್ದರು. ಈಗ ಮತ್ತೆ ಕಾಂಗ್ರೆಸ್ ಸೇರುವ ಇಂಗಿತವನ್ನು ಆಪ್ತವಲಯದಲ್ಲಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಬಚ್ಚೇಗೌಡ ರಾಜೀನಾಮೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬಿ.ಎನ್. ಬಚ್ಚೇಗೌಡ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಿಂದೆಯೇ ಚುನಾವಣ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದ ಅವರು ಪಕ್ಷದ ಚಟುವಟಿಕೆಗಳಿಂದಲೂ ದೂರ ಉಳಿದಿದ್ದರು. ಮುಂದಿನ ದಾರಿ ಏನೆಂಬುದು ನಿಗೂಢವಾಗಿದೆ.
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರಿಗೆ ರಾಜೀನಾಮೆ ಪತ್ರ ರವಾನಿ ಸಿದ್ದು, ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ. ಇದನ್ನು ಅಂಗೀಕರಿಸಬೇಕೆಂದು ಕೋರಿದ್ದಾರೆ.
2008ರಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕ, ಸಚಿವನಾಗಿ, 2019ರಲ್ಲಿ ಸಂಸದನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಬಿಜೆಪಿ ಹಾಗೂ ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ಎಂದೂ ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮೊಲಿ ಅವರನ್ನು ಸೋಲಿಸಿ ಸಂಸದರಾಗಿದ್ದರು. ಆದರೆ ವಯಸ್ಸಿನ ಕಾರಣ ಹಾಗೂ ಬಿಜೆಪಿಗೆ ಎಂಟಿಬಿ ನಾಗರಾಜ್ ಸೇರಿಕೊಂಡ ಬಳಿಕ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಇತ್ತ ಪಕ್ಷೇತರರಾಗಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರಿದ್ದು, ಬಚ್ಚೇಗೌಡರೂ ಕಾಂಗ್ರೆಸ್ ಸೇರುತ್ತಾರಾ ಎಂಬ ಚರ್ಚೆಗಳಿವೆ. ಬಚ್ಚೇಗೌಡರ
ನಿವೃತ್ತಿ ಘೋಷಣೆ ಬಳಿಕ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ| ಕೆ. ಸುಧಾಕರ್, ಅಲೋಕ್ ವಿಶ್ವನಾಥ್, ಸುಮಲತಾ ಸಹಿತ ಹಲವರ ಹೆಸರು ಬಿಜೆಪಿಯಿಂದ ಕೇಳಿಬರುತ್ತಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.