Rahul Gandhi: ದೆಹಲಿ ಸಿಎಂ ಬಂಧನ… ಇಂದು ಕೇಜ್ರಿವಾಲ್ ಕುಟುಂಬ ಭೇಟಿ ಮಾಡಲಿರುವ ರಾಹುಲ್
Team Udayavani, Mar 22, 2024, 8:31 AM IST
ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ಬಂಧಿಸಿದ ಹಿನ್ನೆಲೆಯಲ್ಲಿ ಇಂದು ಕೇಜ್ರಿವಾಲ್ ಕುಟುಂಬವನ್ನು ಕಾಂಗ್ರೆಸ್ ನಾಯಕ ಭೇಟಿ ಮಾಡಿ ಅಗತ್ಯ ಕಾನೂನು ನೆರವು ನೀಡುವ ಭರವಸೆಯನ್ನು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೇಜ್ರಿವಾಲ್ ಬಂಧನದಿಂದ ಹೊರ ಬರಲು ಕಾನೂನಿನ ನೆರವು ನೀಡುವ ಸಲುವಾಗಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಲು ಇಂದು ದೆಹಲಿಯ ನಿವಾಸಕ್ಕೆ ಭೇಟಿ ಧೈರ್ಯ ತುಂಬಲಿದ್ದಾರೆ ಎನ್ನಲಾಗಿದೆ. ಅಷ್ಟು ಮಾತ್ರವಲ್ಲದೆ ಕೇಜ್ರಿವಾಲ್ ಬಂಧನ ಸುದ್ದಿ ತಿಳಿಯುತ್ತಿದ್ದಂತೆ ರಾಹುಲ್ ಕೇಜ್ರಿವಾಲ್ ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಪಕ್ಷ ನಿಮ್ಮೊಂದಿಗಿದೆ ಎಂದು ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ ಎನ್ನಲಾಗಿದ್ದು ಇಂದು ದೆಹಲಿ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಈ ಕುರಿತು ಕಿಡಿಕಾರಿದ ಆಮ್ ಆದ್ಮಿ ಪಕ್ಷದ ನಾಯಕ ಬಿಜೆಪಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ತನ್ನ ಕೈಗೊಂಬೆಯಂತೆ ಕುಣಿಸುವ ಮೂಲಕ ಪ್ರಜಾಪ್ರಭುತ್ವದ ಕೊಲೆ ಮಾಡುತ್ತಿದೆ ಇದನ್ನು ಬಿಜೆಪಿಯವರು ಮೊದಲು ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಈಗಾಗಲೇ ಜಾರ್ಖಂಡ್ ಮುಖ್ಯಮಂತ್ರಿಯನ್ನು ಜೈಲಿಗೆ ಅಟ್ಟಿದ ಬಿಜೆಪಿ ಇದೀಗ ದೆಹಲಿ ಮುಖ್ಯಮಂತ್ರಿಯನ್ನು ಜೈಲಿಗೆ ಅಟ್ಟಲು ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ,
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಲು ಮತ್ತು ಶೋಧ ನಡೆಸಲು ಜಾರಿ ನಿರ್ದೇಶನಾಲಯದ ತಂಡವು ಅವರ ನಿವಾಸಕ್ಕೆ ಆಗಮಿಸಿದ ನಂತರ ನಾಟಕೀಯ ಸನ್ನಿವೇಶಗಳ ನಡುವೆ ಗುರುವಾರ ಅವರನ್ನು ಬಂಧಿಸಲಾಯಿತು. ನಂತರ ಅವರನ್ನು ಏಜೆನ್ಸಿಯ ಪ್ರಧಾನ ಕಚೇರಿಗೆ ಕರೆದೊಯ್ಯಲಾಯಿತು ಮತ್ತು ವೈದ್ಯಕೀಯ ತಂಡವೂ ಇಡಿ ಕಚೇರಿಗೆ ಆಗಮಿಸಿತು.
ಇದನ್ನೂ ಓದಿ: Daily Horoscope: ಶತ್ರುಭಾದೆಯ ಕಾರಣ ಸಹಾಯ ವಿಳಂಬ, ಉದ್ಯೋಗದಲ್ಲಿ ಮೆಚ್ಚುಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.