Vitla; ಎರಡು ಅಂಗಡಿಗಳಿಗೆ ನುಗ್ಗಿದ ಕಳ್ಳರು; ಸಿಸಿ ಕ್ಯಾಮರಾದಲ್ಲಿ ಚಹರೆ ಪತ್ತೆ
Team Udayavani, Mar 23, 2024, 12:12 PM IST
ವಿಟ್ಲ: ವಿಟ್ಲ ಮೇಗಿನಪೇಟೆಯ ಎರಡು ಅಂಗಡಿಗಳಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಗ್ರಿ ಕದ್ದೊಯ್ದಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ ಹಿಂಭಾಗ, ವಶ ಪಡಿಸಿಕೊಂಡ ವಾಹನಗಳನ್ನು ಸಂಗ್ರಹಿಸಿಡುವ ಸ್ಥಳವಿದ್ದು, ಅದಕ್ಕೆ ಹೋಗುವ ರಸ್ತೆಯಲ್ಲೇ ಮಹಮ್ಮದ್ ಹಾಜಿ ಮಾಲಿಕತ್ವದ ದಿನಸಿ ಅಂಗಡಿಯಿದ್ದು, ಅದಕ್ಕೆ ಕಳ್ಳರು ಕನ್ನ ಹಾಕಿದ್ದಾರೆ. ದಿನಸಿ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಕಳ್ಳರ ಕೃತ್ಯ ಹಾಗೂ ಮುಖ ಚಹರೆ ಪತ್ತೆಯಾಗಿದೆ. ಸಿಸಿ ಟಿವಿಯಲ್ಲಿ ಇಬ್ಬರು ಕಳ್ಳರು ಕೃತ್ಯ ಎಸಗಿರುವುದು ಕಾಣಿಸುತ್ತಿದೆ. ದಿನಸಿ ಅಂಗಡಿಯ ಹಿಂಭಾಗದಲ್ಲಿ ಛಾವಣಿಯ ಹಂಚು ತೆಗೆದು ಒಳ ನುಗ್ಗಿರುವ ಕಳ್ಳರು, ಕ್ಯಾಶ್ ಕೌಂಟರ್ ನಲ್ಲಿದ್ದ ರೂ 8000 ಮತ್ತು ಕಟ್ಟಿಟ್ಟಿದ್ದ ದಿನಸಿ ಸಾಮಗ್ರಿಗಳನ್ನು ಅಪಹರಿಸಿದ್ದಾರೆ.
ಬಳಿಕ ಪಕ್ಕದ ದೀಪಕ್ ಬೀಡಿ ಕಂಟ್ರಾಕ್ಟರ್ ನಿಸಾರ್ ವಿ.ಎಸ್. ಅವರಿಗೆ ಸೇರಿದ ಬೀಡಿ ಬ್ರ್ಯಾಂಚ್ ಹಿಂಬದಿ ಬಾಗಿಲು ಮುರಿದು, ಒಳ ನುಗ್ಗಿದ ಕಳ್ಳರು, ಸಂಪೂರ್ಣ ಜಾಲಾಡಿ ಅಲ್ಲಿದ್ದ ಚಿಲ್ಲರೆ ಹಣವನ್ನು ಕದ್ದಿದ್ದಾರೆ. ಬಳಿಕ ಠಾಣೆಯಿಂದ ತುಸು ದೂರವಿರುವ ಮೇಗಿನ ಪೇಟೆಯಲ್ಲಿರುವ ಫೆಲಿಕ್ಸ್ ಪಾಯಸ್ ಅವರ ಕೋಳಿಯ ಅಂಗಡಿಯ ಕಿಟಕಿ ಕಿತ್ತು ತೆಗೆದು ಒಳ ನುಗ್ಗಿದ ಕಳ್ಳರು, ಅಲ್ಲಿ ಕೂಡ ಒಂದಷ್ಟು ನಗದು ದೋಚಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಇದ್ದರೂ ವಿಟ್ಲ ಪೇಟೆಯಲ್ಲೇ ಕಳ್ಳರ ಕೈಚಳಕ ತೋರಿಸಿ, ಪರಾರಿಯಾಗಿರುವುದು ಆಶ್ಚರ್ಯಕರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.