K. S. Eshwarappa 25 ಸಾವಿರ ಮತ ಪಡೆಯಲಿ: ಮಲ್ಲಿಕಾರ್ಜುನ ಹಕ್ರೆ ಸವಾಲು
Team Udayavani, Mar 23, 2024, 5:46 PM IST
ಸಾಗರ: ತಾವು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ ಜಿಪಂ, ತಾಪಂ, ಗ್ರಾಪಂ ಅಧಿಕಾರದ ಕುತ್ತಿಗೆ ಹಿಸುಕಿದ್ದ ಕೆ.ಎಸ್. ಈಶ್ವರಪ್ಪ ಈಗ ಲೋಕಸಭೆ ಪ್ರವೇಶ ಮಾಡಿ ಇನ್ನಷ್ಟು ವ್ಯವಸ್ಥೆ ಹಾಳು ಮಾಡಲು ಸಜ್ಜಾಗಿದ್ದಾರೆ.ಅವರು ಸ್ಪರ್ಧೆಯಲ್ಲಿ ಕನಿಷ್ಠ 25 ಸಾವಿರ ಮತ ಪಡೆದರೆ ನಾನು ಅವರನ್ನು ಒಬ್ಬ ನಾಯಕ ಎಂದು ಒಪ್ಪಿಕೊಳ್ಳುತ್ತೇನೆ ಎಂದು ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಸವಾಲೆಸೆದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಾಯತ್ ರಾಜ್ ಸಚಿವರಾಗಿ ವ್ಯವಸ್ಥೆಯನ್ನೇ ಹಾಳು ಮಾಡಿರುವ ಈಶ್ವರಪ್ಪ ಚುನಾವಣೆಗೆ ಸ್ಪರ್ಧೆ ಮಾಡಿದರೆ ಜನರೇ ಅವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಹೇಳಿದರು.
ಗ್ರಾಪಂ ಶಾಸನಬದ್ಧ ಅನುದಾನಕ್ಕೆ ಸಚಿವರಾಗಿ ಕೊಡಲಿಪೆಟ್ಟು ಕೊಟ್ಟವರು ಈಶ್ವರಪ್ಪ. ರಾಜ್ಯಮಟ್ಟದಲ್ಲಿ ಸೋಲಾರ್ ಟೆಂಡರ್ ಕರೆದು ಪ್ರತಿ ಗ್ರಾಪಂನಿಂದ 1.25 ಲಕ್ಷ ರೂ. ವಸೂಲಿ ಮಾಡಿದ್ದಾರೆ. ರಾಜ್ಯದ 6,300 ಗ್ರಾಪಂನಿಂದ ತಲಾ 5 ಲಕ್ಷ ರೂ.ನಂತೆ ಹಣ ವಸೂಲಿ ಮಾಡಲಾಗಿದೆ.
ಈಗಾಗಲೇ ಅಳವಡಿಸಿದ್ದ ಸೋಲಾರ್ ಪೂರ್ಣ ಹಾಳಾಗಿದೆ. ಗ್ರಾಪಂಗೆ ಕಸ ವಿಲೇವಾರಿ ಆಟೋ ಟಿಪ್ಪರ್ ಸಹ ಅವರೇ ಸರಬರಾಜು ಮಾಡಿದ್ದಾರೆ. ಇದರಲ್ಲಿಯೂ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದ್ದು ಆಟೋ ಟಿಪ್ಪರ್‌ಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ಇದು ಈಶ್ವರಪ್ಪ ಅವರ ಸಚಿವ ಸ್ಥಾನದ ಸಾಕ್ಷಿಗಳಾಗಿವೆ. ನಾನು ತಾಪಂ ಅಧ್ಯಕ್ಷನಾಗಿದ್ದರಿಂದ ಇದನ್ನು ವಿರೋಧಿಸಿದ್ದರಿಂದ ನಮ್ಮ ತಾಲೂಕಿನ 20ಕ್ಕೂ ಹೆಚ್ಚು ಗ್ರಾಪಂನಿಂದ ಹಣ ಕೊಟ್ಟಿಲ್ಲ ಎಂದರು.
ಪ್ರಕರಣ ಸುಖಾಂತ್ಯ: ಸುಮಾರು ನಾಲ್ಕು ವರ್ಷದ ಹಿಂದೆ ಉಪವಿಭಾಗೀಯ ಆಸ್ಪತ್ರೆಯಲ್ಲಿ ಗುತ್ತಿಗೆ ನೌಕರರ ವಿಷಯಕ್ಕೆ ಸಂಬಂಧಪಟ್ಟಂತೆ ಡಾ| ಪ್ರಕಾಶ್ ಬೋಸ್ಲೆ ತಮ್ಮ ಮೇಲೆ ಹಾಕಿದ್ದ ದಾವೆ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. 13 ಗುತ್ತಿಗೆ ಕಾರ್ಮಿಕರನ್ನು ತೆಗೆದು ಹಾಕಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ನನ್ನ ಮೇಲೆ ಕೇಸ್ ಹಾಕಲಾಗಿತ್ತು. ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದ್ದು ನನ್ನ ಪರವಾಗಿ ತೀರ್ಪು ನೀಡಿದೆ. ನ್ಯಾಯವಾದಿ ಎಂ.ರಾಘವೇಂದ್ರ ನನ್ನ ಪರವಾಗಿ ವಾದ ಮಂಡಿಸಿದ್ದರು ಎಂದು ಹೇಳಿದರು.
ಗೋಷ್ಠಿಯಲ್ಲಿ ಗಣಪತಿ ಹೆನಗೆರೆ, ಸ್ವಾಮಿಗೌಡ, ನಾಗರಾಜ ಮಜ್ಜಿಗೆರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
ಹಿಂದೂ ಅತ್ಯಂತ ಪುರಾತನವಾದ ಧರ್ಮ: ಡಾ.ನಿರ್ಮಲಾ ನಂದನಾಥ ಸ್ವಾಮೀಜಿ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.