Himachal Pradesh; 6 ಬಂಡಾಯ ಕಾಂಗ್ರೆಸ್ ಶಾಸಕರು, 3 ಪಕ್ಷೇತರರು ಬಿಜೆಪಿ ಸೇರ್ಪಡೆ
Team Udayavani, Mar 23, 2024, 9:07 PM IST
ಹೊಸದಿಲ್ಲಿ: ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್ ಬಂಡಾಯ ಶಾಸಕರೊಂದಿಗೆ ಮೂವರು ಸ್ವತಂತ್ರ ಶಾಸಕರು ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಂಡಾಯ ಕಾಂಗ್ರೆಸ್ ಶಾಸಕರು ವಿಪ್ ಉಲ್ಲಂಘಿಸಿದ ಕಾರಣಕ್ಕಾಗಿ ಅನರ್ಹಗೊಳಿಸಲಾಗಿತ್ತು. ಮೂವರು ಪಕ್ಷೇತರರಾದ ಆಶಿಶ್ ಶರ್ಮ (ಹಮೀರ್‌ಪುರ), ಹೋಶಿಯಾರ್ ಸಿಂಗ್ (ಡೆಹ್ರಾ) ಮತ್ತು ಕೆ.ಎಲ್. ಠಾಕೂರ್ (ನಲಗಢ) ಶುಕ್ರವಾರ ವಿಧಾನಸಭೆ ಕಾರ್ಯದರ್ಶಿ ಯಶ್ ಪಾಲ್ ಶರ್ಮ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಶನಿವಾರ ಬಿಜೆಪಿ ಸೇರಿದ್ದಾರೆ.ಮೂವರೂ 2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದ ಕಾರಣಕ್ಕೆ ಬಂಡಾಯವೆದ್ದು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದರು.
ಆರು ಕಾಂಗ್ರೆಸ್ ಶಾಸಕರ ಅನರ್ಹತೆಯೊಂದಿಗೆ, 68 ಸದಸ್ಯರ ವಿಧಾನಸಭೆಯಲ್ಲಿ ಸ್ಪೀಕರ್ ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ ಬಲ 40 ರಿಂದ 34 ಕ್ಕೆ ಇಳಿದಿದೆ. ಬಿಜೆಪಿ 25 ಸದಸ್ಯರನ್ನು ಹೊಂದಿದೆ.
ಬಿಜೆಪಿ ಸೇರಿದ ಶಾಸಕರನ್ನು ಶಿಮ್ಲಾದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಇನ್ನೊಂದೆಡೆ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.
#WATCH | Shimla: Six rebel MLAs and three independent MLAs of Himachal Pradesh who joined BJP, earlier today, were welcomed in Shimla pic.twitter.com/SCT8acrvio
— ANI (@ANI) March 23, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.