Shirva ಆರೋಗ್ಯ ಮಾತಾ ದೇವಾಲಯ: ಗರಿಗಳ ರವಿವಾರ ಆಚರಣೆ
Team Udayavani, Mar 24, 2024, 12:08 PM IST
ಶಿರ್ವ: ಏಸು ಸ್ವಾಮಿ ಜೆರುಸಲೆಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಪ್ರಪಂಚದಾದ್ಯಂತ ಕ್ರೈಸ್ತ ಸಮುದಾಯದವರು ಗರಿಗಳ ರವಿವಾರವನ್ನು ಆಚರಿಸುತ್ತಿದ್ದು, ಶಿರ್ವ ಆರೋಗ್ಯ ಮಾತಾ ದೇವಾಲಯದಲ್ಲಿ ಶಿರ್ವ ವಲಯದ ಪ್ರಧಾನ ಧರ್ಮಗುರು ರೆ|ಫಾ|ಡಾ| ಲೆಸ್ಲಿ ಡಿಸೋಜಾಅವರ ನೇತೃತ್ವದಲ್ಲಿ ಪಾಮ್ ಸಂಡೆಯ ಬಲಿಪೂಜೆ ನೆರವೇರಿತು.
ಶಿರ್ವ ಸಂತ ಮೇರಿ ಪ.ಪೂ. ಕಾಲೇಜಿನ ಹಿಲಾರಿ ರಂಗಮಂಟಪದಲ್ಲಿ ಶಿರ್ವ ವಲಯದ ಪ್ರಧಾನ ಧರ್ಮಗುರು ರೆ|ಫಾ|ಡಾ| ಲೆಸ್ಲಿ ಡಿಸೋಜಾ, ಸಹಾಯಕ ಧರ್ಮಗುರುಗಳಾದ ರೆ|ಫಾ|ರೋಲ್ವಿನ್ ಅರಾನ್ಹಾ, ರೆ|ಫಾ|ರೋನ್ಸನ್ ಪಿಂಟೊ, ರೆ|ಫಾ|ಜೇಸನ್ ಲೋಬೋ ಅವರು ಗರಿಗಳ ಆಶೀರ್ವಚನ ನೆರವೇರಿಸಿದ ಬಳಿಕ ಕ್ರೈಸ್ತ ಬಾಂಧವರು ತೆಂಗಿನ ಗರಿಗಳನ್ನು ಹಿಡಿದು ಮೆರವಣಿಗೆಯ ಮೂಲಕ ಚರ್ಚ್ಗೆ ತೆರಳಿದರು.
ಚರ್ಚ್ ಆರ್ಥಿಕ ಮತ್ತು ಪಾಲನ ಮಂಡಳಿಯ ಸದಸ್ಯರು ಮೆರವಣಿಗೆಯ ನೇತೃತ್ವ ವಹಿಸಿದ್ದು ಸುಮಾರು 1,500ಕ್ಕೂ ಹೆಚ್ಚು ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ಅರಾನ್ಹ, ಕಾರ್ಯದರ್ಶಿ ಫ್ಲಾವಿಯಾ ಡಿಸೋಜಾ, ಚರ್ಚ್ ಆಯೋಗದ ಸಂಯೋಜಕಿ ಲೀನಾ ಮಚಾದೋ, ಚರ್ಚ್ ಆರ್ಥಿಕ ಮತ್ತು ಪಾಲನ ಮಂಡಳಿಯ ಸದಸ್ಯರು, ನೇಟಿವಿಟಿ ಕಾನ್ವೆಂಟ್ನ ಧರ್ಮಭಗಿನಿಯರು, ಚರ್ಚ್ನ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಐಸಿವೈಎಂ, ಉಸ್ವಾಸ್ ಮತ್ತು ಸ್ವಾಕ್ ಸಂಘಟನೆಯ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.