![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 24, 2024, 1:28 PM IST
ಬೆಳಗಾವಿ: ಗಣಪತಿಯ ಪೂಜೆ ನಂತರ ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆ ಮಾಡಿ ಬೃಹತ್ ಬೈಕ್ ಜಾಥಾ ಮೂಲಕ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭಾನುವಾರ ತಮ್ಮ ಚುನಾವಣಾ ಪ್ರಚಾರಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತು ಹಲವಾರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಹಿಂಡಲಗಾದ ಗಣಪತಿ ಮಂದಿರಕ್ಕೆ ತೆರಳಿದ ಮೃಣಾಲ್ ಹೆಬ್ಬಾಳಕರ್ ಗಣಪತಿ ಗೆ ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ನಮ್ಮ ಕುಟುಂಬದ ಸಂಪ್ರದಾಯದಂತೆ ಯಾವುದೇ ಕೆಲಸ ಮಾಡುವ ಮುನ್ನ ಗಣೇಶನಿಗೆ ಪೂಜೆ ಸಲ್ಲಿಸುತ್ತೇವೆ. ಅದೇ ರೀತಿ ಪೂಜೆ ಮಾಡಿ, ಪ್ರಚಾರ ಆರಂಭಿಸಿದ್ದೇವೆ. ನಮ್ಮ ದೃಷ್ಟಿಯಲ್ಲಿ ಪ್ರತಿಯೊಬ್ಬ ಮತದಾರ ಕೂಡ ನಿರ್ಣಾಯಕ. ಕಳೆದ 10 ವರ್ಷದಿಂದ ನಾನು ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ವಿರೋಧ ಪಕ್ಷಗಳ ಬಗ್ಗೆ ಮಾತನಾಡದೆ, ನಮ್ಮ ಕೆಲಸವನ್ನು ಮಾಡುತ್ತಾ ಹೋಗುತ್ತೇವೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ ವಿರೋಧ ಪಕ್ಷದವರು ಏನು ಮಾಡುತ್ತಿದ್ದಾರೆ ಎನ್ನುವ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಕೆಲಸ ನಾವು ಮಾಡುತ್ತೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದಕ್ಕೆ ಹೋಗುತ್ತೇವೆ. ಬೇರೆಯವರ ತಂತ್ರ, ಕುತಂತ್ರಗಳ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.