ಎಲ್ಲ ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ಮೇಕೆದಾಟು ಸೇರಿಸಿ: ದೇವೇಗೌಡ ಸಲಹೆ
ಈ ಮೂಲಕ ಡಿಎಂಕೆ ಪ್ರಣಾಳಿಕೆಗೆ ಸಡ್ಡು ಹೊಡೆಯಲು ಮಾಜಿ ಪ್ರಧಾನಿ ಕರೆ
Team Udayavani, Mar 24, 2024, 9:48 PM IST
ಬೆಂಗಳೂರು: ತಮಿಳುನಾಡಿನ ಮುಖ್ಯಮಂತ್ರಿ ತಮ್ಮ ಪಕ್ಷ (ಡಿಎಂಕೆ)ದ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಗೆ ಆಸ್ಪದ ನೀಡುವುದಿಲ್ಲ ಎಂದು ಹೇಳಿರುವುದನ್ನು ಜೆಡಿಎಸ್ ಖಂಡಿಸುತ್ತದೆ. ಜೆೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವ ಭರವಸೆಯನ್ನು ಸೇರಿಸಲಿದೆ. ಕಾಂಗ್ರೆಸ್, ಬಿಜೆಪಿ ಸೇರಿ ಇತರ ಪಕ್ಷಗಳು ಸಹ ಮೇಕೆದಾಟು ಯೋಜನೆ ಜಾರಿಗೊಳಿಸುವುದಾಗಿ ತಮ್ಮ ಪ್ರಣಾಳಿಕೆಯಲ್ಲಿ ಪ್ರಕಟಿಸಲಿ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.
ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಡಿಎಂಕೆಯ ಇಂತಹ ಬೆದರಿಕೆಗಳಿಗೆ ಯಾವುದೇ ರೀತಿಯ ಭಯ ಪಡಬೇಕಾಗಿಲ್ಲ. ಚುನಾವಣೆ ಮುಗಿದ ಮೇಲೆ ಮೇಕೆದಾಟು ಅಣೆಕಟ್ಟು ಕಟ್ಟಲು ನಾನೊಬ್ಬನೇ ಅಲ್ಲ, ರಾಜ್ಯ ಸರಕಾರ, ಮುಖ್ಯಮಂತ್ರಿಗಳು, ಬಿಜೆಪಿ ನಾಯಕರಾದ ಯಡಿಯೂರಪ್ಪ ಸಮೇತ ಹೋರಾಟ ಮಾಡೋಣ. ಅದಕ್ಕೂ ಮೊದಲು ಮೇಕೆದಾಟು ಕಟ್ಟುವುದನ್ನು ಪ್ರಣಾಳಿಕೆಯಲ್ಲಿ ಹಾಕೋಣ. ಡಿಎಂಕೆ ಮಿತ್ರಪಕ್ಷವಾದ ಕಾಂಗ್ರೆಸ್ ಮೇಕೆದಾಟು ಯೋಜನೆ ಬೆಂಬಲಿಸಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಲಿ ಎಂದು ಆಗ್ರಹಿಸಿದರು.
ತಮಿಳುನಾಡು ಪರ ವಕೀಲ ಶೇಖರ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸುವಾಗ ಮೇಕೆದಾಟು ಅಣೆಕಟ್ಟು ಕಟ್ಟಲಿ. ನಮ್ಮದೇನೂ ಅಭ್ಯಂತರ ಇಲ್ಲ ಎಂದು ಹೇಳಿದ್ದಾರೆ. ಅದರಿಂದ ನಾನು ರಾಜ್ಯ ಸರಕಾರಕ್ಕೆ ಮನವಿ ಮಾಡುತ್ತೇನೆ. ಡಿಎಂಕೆ ಅವರು ಪ್ರಣಾಳಿಕೆಯಲ್ಲಿ ಮೇಕೆದಾಟು ವಿರೋಧಿ ನಿಲುವು ಪ್ರಕಟಿಸಿದಂತೆ, ಇವರು ಕೂಡ ಪ್ರಣಾಳಿಕೆಯಲ್ಲಿ ಮೇಕೆದಾಟು ಪರವಾಗಿ ನಿಲುವು ಪ್ರಕಟಿಸಲಿ ಎಂದರು.
ಮೇಕೆದಾಟು ಯೋಜನೆಯಿಂದ ಐದು ಸಾವಿರ ಎಕರೆ ಮುಳುಗಡೆ ಆಗಲ್ಲ. ಈ ಅಂಶವನ್ನು ಪರಿಸರ ತಜ್ಞರು ಅರ್ಥ ಮಾಡಿಕೊಳ್ಳಬೇಕು. ಅಧಿಕಾರಿಗಳು, ನೀರಾವರಿ ತಜ್ಞರು ಮೇಕೆದಾಟು ಯೋಜನೆಯಿಂದ 30 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ. ಈ ಯೋಜನೆಯ ಬಗ್ಗೆ 2018ರಲ್ಲಿಯೇ ಕೇಂದ್ರ ಸರಕಾರ ಈ ಯೋಜನೆಯ ಕಾರ್ಯ ಸಾಧ್ಯತೆಯ ವರದಿಯನ್ನು ಕೇಂದ್ರೀಯ ಜಲ ಆಯೋಗಕ್ಕೆ ಸಲ್ಲಿಸಿತ್ತು. ಈ ವರದಿಯನ್ನು ಒಪ್ಪಿದ ನಂತರ ಸಮಗ್ರ ಯೋಜನಾ ವರದಿ ಸಲ್ಲಿಸುವಂತೆ ರಾಜ್ಯಕ್ಕೆ ಸೂಚಿಸಿತ್ತು. ಅದರಂತೆ 2019ರಲ್ಲಿ ರಾಜ್ಯ ಸರಕಾರ ವರದಿ ಸಲ್ಲಿಸಿದೆ. ಇದಕ್ಕೆ ಪ್ರಧಾನಮಂತ್ರಿಗಳು ಅನುಮತಿ ಕೊಡಿಸಬೇಕು ಹಾಗೂ ಈ ಮೇಕೆದಾಟು ಯೋಜನೆ ವಿಷಯದಲ್ಲಿ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಮಾಡಿದರು.
ಪ್ರಧಾನಿ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಅವರಿಗೆ ವಿವರವಾಗಿ ಮೇಕೆದಾಟು ಯೋಜನೆ ಬಗ್ಗೆ ಪತ್ರ ಬರೆದಿದ್ದೇನೆ. ಬೆಂಗಳೂರಿಗೆ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಗೆ ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟಿರುವುದಾಗಿ ಹೇಳಿದರು.
ರಾಜಕೀಯ ಬೆರೆಸಬೇಡಿ
ನೀರಿಲ್ಲದೆ ಜನರು ಮನೆ ಬಿಟ್ಟು ಹೋಗುತ್ತಿದ್ದಾರೆ. ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜಕೀಯ ಅನಗತ್ಯ. ಯಾರೂ ಇದರಲ್ಲಿ ರಾಜಕೀಯ ಬೆರೆಸಬೇಡಿ. ಕುಡಿಯುವ ನೀರಿಗೆ ಮೊದಲ ಆದ್ಯತೆ ಕೊಡಬೇಕು.
ಮಾನವೀಯತೆಯಿಂದ ಮೇಕೆದಾಟು ಬಗ್ಗೆ ಎಲ್ಲರೂ ಯೋಚನೆ ಮಾಡಬೇಕು. ಇಲ್ಲಿ ರಾಜ್ಯ ಸರಕಾರದ ವೈಫಲ್ಯ ಅಂತಲ್ಲ. ತಮಿಳುನಾಡು ರಾಜ್ಯದವರು ಪ್ರತೀದಿನ ಕೋರ್ಟಿಗೆ ಪಿಟಿಷನ್ ಹಾಕುತ್ತಿದ್ದಾರೆ ಎಂದು ದೇವೇಗೌಡರು ತಿಳಿಸಿದರು. ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಕುಡಿಯುವ ನೀರಿಲ್ಲ ಎಂಬ ಕಾರಣಕ್ಕೆ ಮನೆಗಳಿಗೆ ಬೀಗ ಹಾಕಿ ಜನ ವಲಸೆ ಹೋಗಿದ್ದಾರೆ. ಈ ಭೀಕರ ಸಮಸ್ಯೆಗೆ ಪರಿಹಾರ ಒದಗಿಸಲು ರಾಜ್ಯ ಸರಕಾರದಿಂದ ಸಾಧ್ಯವಾಗಿಲ್ಲ. ಹೀಗಾಗಿ ಜನರು ತಮ್ಮ ಮನೆಗಳಿಗೆ ಬೀಗ ಹಾಕಿ ಬೇರೆ ಊರುಗಳಿಗೆ ಹೋಗುತ್ತಿದ್ದಾರೆ ಎಂದು ಮಾಜಿ ಪ್ರಧಾನಿಗಳು ವಿವರಿಸಿದರು.
ಬಾಂಧವ್ಯ ಬೆಸೆದಿದ್ದ ಬಿಎಸ್‌ವೈ
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ತಮಿಳುನಾಡಿನ ಜತೆ ಸಂಬಂಧ ವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ, ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳನ್ನು ಸ್ಥಾಪಿಸಿ ಒಳ್ಳೆಯ ಬಾಂಧವ್ಯಕ್ಕೆ ನಾಂದಿ ಹಾಡಿದ್ದರು. ಎರಡೂ ರಾಜ್ಯಗಳ ಸಂಬಂಧದ ವಿಚಾರದಲ್ಲಿ ಅದೊಂದು ಒಳ್ಳೆಯ ಸಂದರ್ಭ ಎಂದು ದೇವೇಗೌಡರು ಉಲ್ಲೇಖಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.