ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Team Udayavani, Mar 26, 2024, 2:44 PM IST
ಬೀದರ್: ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್) ಕುರಿ ತಿಂದ ಕಾರಣ ಮನನೊಂದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋಕುಳ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ
ಗ್ರಾಮದ ನಿವಾಸಿ ಪೂಜಾ ಮಾರುತಿ ಮೇತ್ರೆ (14) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಗ್ರಾಮದ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಈ ವಿದ್ಯಾರ್ಥಿನಿಯ ಪ್ರವೇಶ ಪತ್ರವನ್ನು ಸೋಮವಾರ ರಾತ್ರಿ ಕುರಿ ತಿಂದು ಹಾಕಿತು. ಇದರಿಂದ ಆತಂಕಗೊಂಡು ಈಕೆ ಶಾಲೆಯ ಮುಖ್ಯ ಗುರುಗಳ ಹೆಸರಿನಲ್ಲಿ ಒಂದು ಪತ್ರ ಬರೆದಿದ್ದು, ʼನನ್ನ ಪರೀಕ್ಷೆ ಪ್ರವೇಶ ಪತ್ರ ಕಳೆದ ಕಾರಣ ನನಗೆ ಶಾಲೆಗೆ ಬರಲು ಆಗಲ್ಲ. ನಾನು ಸತ್ತು ಹೋಗುತ್ತಿದ್ದೇನೆ. ನನ್ನನ್ನು ಕ್ಷಮಿಸಿ ಬಿಡಿʼ ಎಂದು ವಿವರಿಸಿದ್ದಾಳೆ.
ಅಣ್ಣನ ಕೈಗೆ ಪತ್ರವನ್ನು ಕೊಟ್ಟು ಸಂಜೆ 7 ಗಂಟೆ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದು ಬಳಿಕ ಸ್ಥಳೀಯರು ಹುಡುಕಾಟ ಆರಂಭಿಸಿದ್ದಾರೆ. ರಾತ್ರಿ 11.30ರ ಸುಮಾರಿಗೆ ಈಕೆ ತನ್ನ ಸಂಬಂಧಿಕರ ಜಮೀನಿನಲ್ಲಿಯ ಬಾವಿಯಲ್ಲಿ ಅಳುತ್ತ ಕುಳಿತಿರುವುದು ಕೇಳಿ ಬಳಿಕ ಆಕೆಯನ್ನು ರಕ್ಷಣೆ ಮಾಡಿ ಬಾವಿಯಿಂದ ಮೇಲೆ ತರಲಾಯಿತು.
ಸುಮಾರು 30 ಅಡಿಗಳಷ್ಟು ಆಳವಾಗಿರುವ ಬಾವಿಯಲ್ಲಿ ನೀರು ಕಡಿಮೆ ಇರುವ ಕಾರಣ ಜೀವಕ್ಕೆ ತೊಂದರೆಯಾಗಿಲ್ಲ. ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಮಂಗಳವಾರ ಎಂದಿನಂತೆ ಪರೀಕ್ಷೆಗೆ ಹಾಜರಾಗಿದ್ದಾಳೆ.
ಇದನ್ನೂ ಓದಿ: Punjab: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧೆ, ಮೈತ್ರಿ ಇಲ್ಲ: ಜಾಖರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.