CM Siddaramaiah ತವರಲ್ಲಿ ಇಂದು ರಾಜಕೀಯ ಶಕ್ತಿ ಪ್ರದರ್ಶನ
ಮೈಸೂರಲ್ಲಿ ಕಾಂಗ್ರೆಸ್ ಬಲ ಪ್ರದರ್ಶನ, ಸಿಎಂ, ಡಿಸಿಎಂ ಭಾಗಿ ; ಸಮನ್ವಯ ಸಭೆಯಲ್ಲಿ ಎಚ್‌ಡಿಕೆ, ಬಿವೈವಿ ಭಾಗಿ
Team Udayavani, Mar 26, 2024, 10:53 PM IST
ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರು ಲೋಕಸಭಾ ಕ್ಷೇತ್ರ ರಾಜ್ಯದಲ್ಲಿ ಹೈವೋಲ್ಟೆàಜ್ ಕ್ಷೇತ್ರವಾಗಿ ಮಾರ್ಪಟ್ಟಿದೆ. ಬುಧವಾರ ಒಂದೇ ದಿನ ಕಾಂಗ್ರೆಸ್ ಮತ್ತು ಮೈತ್ರಿ ಪಕ್ಷದ ಘಟಾನುಘಟಿ ನಾಯಕರು ಮೈಸೂರಲ್ಲಿ ಪ್ರತ್ಯೇಕವಾಗಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಈಗಾಗಲೇ ಮೈಸೂರಿನಲ್ಲಿ ಬೀಡು ಬಿಟ್ಟಿರುವ ಸಿದ್ದರಾಮಯ್ಯ ಅವರು ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲು ಪೂರಕ ವಾತವಾರಣ ಸೃಷ್ಟಿ ಮತ್ತು ಅದಕ್ಕೆ ಬೇಕಾದ ವೇದಿಕೆ ಸಜ್ಜುಗೊಳಿಸುವಲ್ಲಿ ನಿರತರಾಗಿದ್ದಾರೆ. ಈಗಾಗಲೇ ಆಪರೇಷನ್ ಹಸ್ತಕ್ಕೆ ಮುಂದಾಗಿರುವ ಕಾಂಗ್ರೆಸ್ ನಾಯಕರು ಮೈಸೂರು ಭಾಗದಲ್ಲಿ ಲಿಂಗಾ ಯತ, ಬ್ರಾಹ್ಮಣ ಸುಮುದಾಯದ ಪ್ರಮುಖ ಮುಖಂಡರನ್ನು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇತ್ತ ಮೈತ್ರಿ ಪಕ್ಷಗಳ ನಾಯಕರು ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಹೆಸರಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಹೊಂದಾಣಿಕೆ ತರಲು ಮುಂದಾಗಿದ್ದಾರೆ.
ಬುಧವಾರ ಬೆಳಗ್ಗೆ ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾವೇಶ ಆಯೋಜಿಸಿದ್ದು ಇದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕರು ಪಾಲ್ಗೊಳ್ಳಲಿ ದ್ದಾರೆ. ಬಿಎಸ್‌ವೈ ಆಪ್ತ ವಲಯದಲ್ಲಿ ಗುರುತಿಸಿ ಕೊಂಡಿದ್ದ ಬ್ರಾಹ್ಮಣ ಸಮುದಾಯದ ಎಚ್.ವಿ. ರಾಜೀವ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರು ತ್ತಿದ್ದಾರೆ. ಇವರ ಜತೆ ಜೆಡಿಎಸ್ ಮುಖಂಡರೂ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಮೈತ್ರಿ ಪಕ್ಷಗಳ ಪ್ರತಿತಂತ್ರ
ಬಿಜೆಪಿ ಮತ್ತು ಜೆಡಿಎಸ್ ಪ್ರಮುಖ ನಾಯಕರನ್ನು ಸೆಳೆಯುತ್ತಿರುವ ಕಾಂಗ್ರೆಸ್‌ಗೆ ಹಾಗೂ ಒಕ್ಕಲಿಗ ಸಮುದಾಯದ ಮತಗಳು ವಿಭಜನೆ ಆಗದಂತೆ ತಡೆಯಲು ಮೈತ್ರಿ ಪಕ್ಷ ಪ್ರತಿತಂತ್ರ ಹೆಣೆಯುತ್ತಿದ್ದು ಸ್ವತಃ ಮಾಜಿ ಸಿಎಂ ಕುಮಾರಸ್ವಾಮಿ ಅಖಾಡಕ್ಕಿಳಿಯುತ್ತಿದ್ದಾರೆ. ಬುಧವಾರ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೈಸೂರಿಗೆ ಆಗಮಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಕುಮಾರಸ್ವಾಮಿ ಅವರು ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಬಳಿಕ ವಿಜಯೇಂದ್ರ ಜತೆಗೂಡಿ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆಸಲಿದ್ದಾರೆ. ಈ ಮೂಲಕ ಎರಡೂ ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಹೊಂದಾಣಿಕೆಯ ಬೆಸುಗೆ ಹಾಕಲು ಮುಂದಾಗಿದ್ದಾರೆ.
-ಸತೀಶ್ ದೇಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.