Water shortage: ಪಬ್ಲಿಕ್‌ ಟಾಯ್ಲೆಟ್‌ಗೂ ತಟ್ಟಿದ ನೀರಿನ ಬರ


Team Udayavani, Mar 27, 2024, 11:23 AM IST

Water shortage: ಪಬ್ಲಿಕ್‌ ಟಾಯ್ಲೆಟ್‌ಗೂ ತಟ್ಟಿದ ನೀರಿನ ಬರ

ಬೆಂಗಳೂರು:  ಉದ್ಯಾನ ನಗರಿಯಲ್ಲಿನ ಸಾರ್ವ ಜನಿಕ, ಇ-ಶೌಚಾಲಯಗಳಲ್ಲಿ ತಿಂಗಳಿನಿಂದ ನೀರಿನ ಅಭಾವ ಸೃಷ್ಟಿಯಾಗಿದ್ದು, ವೃದ್ಧರು, ಮಹಿಳೆಯರು

ಹೌದು! ನಗರದಲ್ಲಿ ದಿನದಿಂದ ದಿನಕ್ಕೆ ಜಲಕ್ಷಾಮ ಹೆಚ್ಚಾಗುತ್ತಿದ್ದು, ಐಷಾರಾಮಿ ಹೋಟೆಲ್‌, ಬೃಹತ್‌ ಅಪಾರ್ಟ್‌ಮೆಂಟ್‌ಗಳಲ್ಲಿ ಅನಗತ್ಯ ನೀರು ಪೋಲಾಗದಂತೆ ಕ್ರಮವಹಿಸಲು ಜಲಮಂಡಳಿಯು ಆದೇಶ ನೀಡಿದ್ದು, ನೀರನ್ನು ಸಂರಕ್ಷಿಸಲು ನಾನಾ ಪ್ರಯತ್ನಗಳನ್ನು ಮಾಡುತ್ತಿದೆ. ಜತೆಗೆ ಸಾರ್ವಜನಿಕರಲ್ಲೂ ನೀರನ್ನು ಸಾಧ್ಯವಾದಷ್ಟು ಕಡಿಮೆ ಬಳಸಿ ಎಂದು ಮನವಿ ಕೂಡ ಮಾಡಿಕೊಂಡಿದೆ. ಆದರೂ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಇದೀಗ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಗೂ ನೀರು ಸಿಗದಂತಹ ದುಸ್ಥಿತಿ ಎದುರಾಗಿದೆ.

ರಾಜ್ಯ ರಾಜಧಾನಿಯ 243 ವಾರ್ಡ್‌ ವ್ಯಾಪ್ತಿಯಲ್ಲಿ ಒಟ್ಟು 803 ಶೌಚಾಲಯಗಳಿದ್ದು, ಅದರಲ್ಲಿ 360 ಸಾರ್ವಜನಿಕ, ಆರು ಸಮುದಾಯ, 229 ಇ- ಶೌಚಾಲಯ, 17 ಮಾಡ್ಯುಲರ್‌, 10 ಬಯಲು ಮಲ ವಿಸರ್ಜನೆ ಮುಕ್ತ ಮತ್ತು 181 ಪೌರಕಾರ್ಮಿಕರ ಶೌಚಾಲಯಗಳಿವೆ ಎನ್ನುತ್ತವೆ ಬಿಬಿಎಂಪಿ ಮೂಲಗಳು. ಇದರಲ್ಲಿ ಬಹುತೇಕ ಶೌಚಾಲಯಗಳು ಒಂದಲ್ಲ ಒಂದು ಕಾರಣದಿಂದಾಗಿ ಈಗಾಗಲೇ ಮೂಲೆ ಸೇರಿವೆ. ಇದೀಗ, ಉಳಿದ ಕೆಲ ಶೌಚಾಲಯಗಳ ನಿರ್ವಹಣೆಗೂ ನೀರಿನ ಬರ ಬಂದಿದೆ. “ಕೊನೆಗೂ ನಿಮ್ಮ ನಿರೀಕ್ಷೆಗೂ ಮೀರಿ ಶುಚಿಯಾಗಿರುವ ಶೌಚಾಲಯವನ್ನು ಇಲ್ಲಿ ಕಾಣಿರಿ’ ಎಂಬ ಟ್ಯಾಗ್‌ ಲೈನ್‌ ಹೊಂದಿರುವ ಆಧುನಿಕ ಇ ಟ್ಲಾಯೆಟ್‌ಗಳನ್ನೇ ಸ್ವತ್ಛಗೊಳಿಸಲು ನೀರಿಲ್ಲದ ಕಾರಣ, ಕೆಲವು ಇ-ಟಾಯ್ಲೆಟ್‌ಗಳ ಮುಂದೆ “ನೋ ವಾಟರ್‌ ಫಾರ್‌ ಇ ಟಾಯ್ಲೆಟ್‌’ ಎಂಬ ಬೋರ್ಡ್‌ಗಳು ಕಂಡುಬಂದರೆ, ಇನ್ನೂ ಕೆಲ ಪ್ರದೇಶಗಳಲ್ಲಿನ ಸಾರ್ವಜನಿಕ ಶೌಚಾಲಯಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೆಲವೆಡೆ ವಾಟರ್‌ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.

ನಗರದಲ್ಲಿ 200ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿರುವ ಇ-ಶೌಚಾಲಯಗಳಲ್ಲಿ ಕೇವಲ 160 ಇ-ಶೌಚಾಲ ಯಗಳಿಗೆ ಟೆಂಡರ್‌ ಕರೆದಿದ್ದು, ಅವುಗಳಲ್ಲಿಯೂ ನಾನಾ ಸಮಸ್ಯೆಗಳನ್ನು ಕಾಣಬಹುದಾಗಿದೆ. ಟೆಂಡರ್‌ ತೆಗೆದುಕೊಂಡಿರುವ ಗುತ್ತಿಗೆದಾರರು ಇ-ಟಾಯ್ಲೆಟ್‌ಗಳ ನಿರ್ವಹಣೆಗೆ ಮುಂದಾಗಿದ್ದು, ಈಗಾಗಲೇ ತಾಂತ್ರಿಕ ದೋಷ ಸೇರಿದಂತೆ ನಾನಾ ಸಮಸ್ಯೆಗಳನ್ನು ಸರಿಪಡಿಸಲಾಗುತ್ತಿದ್ದು, ಮುಂದಿನ ಒಂದು ತಿಂಗಳೊಳಗಾಗಿ ಎಲ್ಲಾ ಇ-ಟಾಯ್ಲೆಟ್‌ಗಳು ಸಂಪೂರ್ಣವಾಗಿ ಕಾರ್ಯಾಚರಣೆ ಮಾಡಲಿವೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸುತ್ತಾರೆ.

ಕೆಲ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಯಥೇತ್ಛವಾಗಿ ಕಂಡುಬಂದಿದೆ. ಅಂತಹ ಪ್ರದೇಶಗಳಲ್ಲಿನ ಇ-ಶೌಚಾಲ ಯಗಳ ನಿರ್ವಹಣೆಗೆ ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ.-ಪ್ರವೀಣ್‌ ಲಿಂಗಯ್ಯ, ಬಿಬಿಎಂಪಿ ಮುಖ್ಯ ಇಂಜಿನಿಯರ್‌  

– ಭಾರತಿ ಸಜ್ಜನ್‌

ಟಾಪ್ ನ್ಯೂಸ್

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

1-weewq

Ranji; ಬಂಗಾಲ ಬಿಗಿ ಹಿಡಿತ : ಇನ್ನಿಂಗ್ಸ್‌ ಜಯದತ್ತ ಮುಂಬಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.