ವಡಭಾಂಡ ಬಲರಾಮ ದೇವಸ್ಥಾನ; ಸಂಕರ್ಷಣ ಸಾಲಿಗ್ರಾಮ ಹಸ್ತಾಂತರಿಸಿದ ಪೇಜಾವರ ಶ್ರೀ
ಪ್ರತಿಯೊಬ್ಬರಿಗೂ ರಾಮ ಬಲರಾಮರ ಅನುಗ್ರಹದ ಬಲ ಸದಾ ಇರಲಿ
Team Udayavani, Mar 27, 2024, 3:49 PM IST
ಮಲ್ಪೆ: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ದೇಗುಲ ನಿರ್ಮಾಣ ಮತ್ತು ಪ್ರಾಣಪ್ರತಿಷ್ಠಾಪನೆ ಮತ್ತು ಅದರ ಬಳಿಕ ಉಡುಪಿ ವಡಭಾಂಡೇಶ್ವರದಲ್ಲಿ ಪ್ರಾಚೀನವಾದ ಪೂರ್ವಾವತಾರದಲ್ಲಿ ಲಕ್ಷ್ಮಣನೇ ಆಗಿದ್ದ ಬಲರಾಮರ ಸನ್ನಿಧಿಯ ಪುನರುತ್ಥಾನ ಪುನಃ ಪ್ರತಿಷ್ಠೆಯೂ ಸಂಪನ್ನಗೊಳ್ಳುತ್ತಿರುವುದು ಅತ್ಯಂತ ಅಚ್ಚರಿಯ ಸಂಗತಿಯಾಗಿದ್ದು ಕಾಲವೇ ಈ ಎರಡನ್ನೂ ನಿರ್ಣಯಿಸಿದಂತಿದೆ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.
ಅವರು ಅಯೋಧ್ಯೆಯ ರಾಮನ ಪಾದಮೂಲದಲ್ಲಿಟ್ಟು ಅರ್ಚಿಸಿ ಪೂಜಿಸಿ ತಾವು ತೆಗೆದುಕೊಂಡು ಬಂದ ಭಗವಂತನ ಸಂಕರ್ಷಣ ಸಾಲಿಗ್ರಾಮವನ್ನು ನವೀಕರಣಗೊಂಡ ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನಕ್ಕೆ ಹಸ್ತಾಂತರಿಸಿ ಸಂತಸವನ್ನು ವ್ಯಕ್ತಪಡಿಸಿದರು .
ಇದೊಂದು ಅಪೂರ್ವ ಯೋಗವಾಗಿದ್ದು ಬಲರಾಮನು ತ್ರೇತಾಯುಗದಲ್ಲಿ ಲಕ್ಷ್ಮಣನಾಗಿ ಅವತರಿಸಿದ್ದ. ಭಗವಂತನ
ಸಂಕರ್ಷಣರೂಪವೇ ಆಗಿರುವುದರಿಂದ ಬಲರಾಮನಲ್ಲಿಗೆ ಅಯೋಧ್ಯೆಯಿಂದ ಸಂಕರ್ಷಣ ಸಾಲಿಗ್ರಾಮವನ್ನು ಪೂಜಿಸಿ ತರಲಾಗಿದೆ. ಆ ಹಿನ್ನೆಲೆಯಲ್ಲಿ ರಾಮ ಬಲರಾಮರ ಸನ್ನಿಧಿಗಳ ಪುನರುತ್ಥಾನ ಕಾರ್ಯ ಏಕಕಾಲದಲ್ಲಿ ನಡೆಯುತ್ತಿರುವುದರಿಂದ ದೇಶಕ್ಕೆ ಮಂಗಳವಾಗಲಿದೆ ಎಂದರು .
ಈ ಸತ್ಕಾರ್ಯದಲ್ಲಿ ಕೈ ಜೋಡಿಸಿದ ಪ್ರತಿಯೊಬ್ಬರಿಗೂ ರಾಮ ಬಲರಾಮರ ಅನುಗ್ರಹದ ಬಲ ಸದಾ ಇರಲಿ ಎಂದರು. ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ನಿಮಿತ್ತ ಹಮ್ಮಿಕೊಂಡ ಭಜನೋತ್ಸವಕ್ಕೆ ತಾಳ ಹಿಡಿದು ಭಜನೆ ಮಾಡಿ ಚಾಲನೆ ನೀಡಿದರು .
ದೇವಳದ ತಂತ್ರಿ ಸುಬ್ರಹ್ಮಣ್ಯ ತಂತ್ರಿ, ಪ್ರಧಾನ ಅರ್ಚಕ ಶ್ರೀನಿವಾಸ ಭಟ್, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕಡೆಕಾರ್ ಶ್ರೀಶ ಭಟ್, ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲ ಡಾ| ಸತ್ಯನಾರಾಯಣ ಆಚಾರ್ಯ, ಪೆರಂಪಳ್ಳಿ ವಾಸುದೇವ ಭಟ್, ಮುರಳೀಕೃಷ್ಣರಾವ್ ಬಡಾನಿಡಿಯೂರು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಪ್ರಧಾನ ಕಾರ್ಯರ್ಶಿ ಪ್ರಕಾಶ್ ಜಿ. ಕೊಡವೂರು, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗರಾಜ್ ಮೂಲಿಗಾರ್, ಪ್ರಧಾನ ಕಾರ್ಯದರ್ಶಿ ಶಶಿಧರ ಎಂ. ಅಮೀನ್ ಮತ್ತಿತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.