Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Team Udayavani, Mar 27, 2024, 5:43 PM IST
ರಾಮನಗರ: ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಬಹಳ ಉತ್ಸಾಹದಿಂದ ನನಗೆ ಬೆಂಬಲ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಹಲವು ಕಾರ್ಯಕರ್ತರು ಆ ಪಕ್ಷಗಳನ್ನು ತೊರೆದು ನಮ್ಮ ಪಕ್ಷ ಸೇರುತ್ತಿದ್ದಾರೆ. ಇದರಿಂದಾಗಿ ನಮಗೆ ಮತ್ತಷ್ಟು ಶಕ್ತಿ ಹೆಚ್ಚಾಗಿದೆ ಎಂದರು.
ನಾಳೆ ನಾಮಪತ್ರ ಸಲ್ಲಿಕೆ: ನಾಮಪತ್ರ ಸಲ್ಲಿಕೆ ವಿಚಾರವಾಗಿ ಕೇಳಿದಾಗ, “ನಾಳೆ ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ, ಗೃಹ ಸಚಿವ ಪರಮೇಶ್ವರ್ ಅವರು ಕೂಡ ಆಗಮಿಸಲಿದ್ದಾರೆ. ಅದೇ ರೀತಿ ಸಾರ್ವಜನಿಕರಿಗೂ ಆಹ್ವಾನ ನೀಡಿ, ನನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ್ದೇನೆ” ಎಂದು ತಿಳಿಸಿದರು.
ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಪಕ್ಷ ಸೇರ್ಪಡೆಯಾಗುವ ಸುದ್ದಿ ಹರಿದಾಡುತ್ತಿದೆ ಎಂದು ಕೇಳಿದಾಗ, “ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡಲಿದ್ದಾರೆ. ಅವರು ಬಹಳ ದಿನಗಳಿಂದ ಪಕ್ಷ ಸೇರುವುದಾಗಿ ಹೇಳುತ್ತಿದ್ದಾರೆ. ಅವರ ಸ್ವಯಂ ತೀರ್ಮಾನದ ಬಗ್ಗೆ ಜಿಲ್ಲೆಯ ಮುಖಂಡರು ಹಾಗೂ ನಾಯಕರ ಜತೆ ಚರ್ಚೆ ಮಾಡಿ ಅವರ ಅಭಿಪ್ರಾಯದ ಮೇರೆಗೆ ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.
ಕೋಲಾರದಲ್ಲಿ ಮುನಿಯಪ್ಪ ಅವರ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂಬ ಆಗ್ರಹದೊಂದಿಗೆ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ರಾಜೀನಾಮೆ ಬೆದರಿಕೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.