BJD: ಪಟ್ಟಿ ಬಿಡುಗಡೆ ಮಾಡಿದ ಬಿಜೆಡಿ… ಹಾಕಿ ತಾರೆ ದಿಲೀಪ್ ಟಿರ್ಕಿ ಲೋಕಸಭೆ ಅಭ್ಯರ್ಥಿ
Team Udayavani, Mar 27, 2024, 9:36 PM IST
ಭುವನೇಶ್ವರ್: ಲೋಕಸಭೆಗೆ 9 ಮತ್ತು ವಿಧಾನಸಭೆಗೆ 72 ಅಭ್ಯರ್ಥಿಗಳ ಪಟ್ಟಿಯನ್ನು ಬಿಜು ಜನತಾ ದಳ(ಬಿಜೆಡಿ) ನಾಯಕ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಿಕ್ ಬುಧವಾರ ಬಿಡುಗಡೆ ಮಾಡಿದ್ದಾರೆ.
ಖ್ಯಾತ ಹಾಕಿ ಆಟಗಾರ ದಿಲೀಪ್ ಟಿರ್ಕಿ ಅವರಿಗೆ ಸುರೇಂದ್ರಗಢ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ. 1995ರಿಂದ 2010ರ ವರೆಗೆ ಅವರು, ಭಾರತೀಯ ಹಾಕಿ ತಂಡದಲ್ಲಿ ಪ್ರಮುಖ ಆಟಗಾರರಾಗಿದ್ದರು.
ಒಡಿಶಾದಲ್ಲಿ 21 ಲೋಕಸಭೆ ಹಾಗೂ 147 ವಿಧಾನಸಭಾ ಕ್ಷೇತ್ರಗಳಿದ್ದು, ಮೇ 13, 20, 25 ಮತ್ತು ಜೂ. 1ರಂದು ಚುನಾವಣೆ ನಡೆಯಲಿದೆ. ಸಿಎಂ ನವೀನ್ ಪಟ್ನಾಯಿಕ್ ಗಂಜಾಮ್ ಜಿಲ್ಲೆಯ ಹಿಂಜಿಲಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. 72 ಅಭ್ಯರ್ಥಿಗಳ ಪೈಕಿ 13 ಹೊಸ ಮುಖಗಳಿದ್ದು, 12 ಮಹಿಳಾ ಅಭ್ಯರ್ಥಿಗಳಿದ್ದಾರೆ. ಸಚಿವ ಸಂಪುಟದ ಬಹುತೇಕರು ಟಿಕೆಟ್ ಪಡೆದಿದ್ದಾರೆ. ಲೋಕಸಭೆ ಚುನಾವಣೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಣಬ್ ಪ್ರಕಾಶ್ ದಾಸ್ ಸಂಭಲ್ಪುರ್ನಲ್ಲಿ ಬಿಜೆಪಿಯ ಧರ್ಮೇಂದ್ರ ಪ್ರಧಾನ್ ವಿರುದ್ಧ ಕಣಕ್ಕಿಳಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.