SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Team Udayavani, Mar 28, 2024, 1:41 PM IST
ಮಹಾರಾಷ್ಟ್ರ: 10 ನೇ ತರಗತಿ ಪರೀಕ್ಷೆ ನಡೆಯುವ ವೇಳೆ ಉತ್ತರ ಪತ್ರಿಕೆಯನ್ನು ತೋರಿಸಲಿಲ್ಲ ಎಂದು ಕೋಪಗೊಂಡ ಮೂವರು ವಿದ್ಯಾರ್ಥಿಗಳು ತಮ್ಮ ಸಹಪಾಠಿಗೆ ಚೂರಿಯಿಂದ ಇರಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭೀವಂಡಿಯಲ್ಲಿ ನಡೆದಿದೆ.
ಘಟನೆ ಮಂಗಳವಾರ ನಡೆದಿದ್ದು, ಚಾಕು ಇರಿತಕ್ಕೊಳಗಾದ ವಿದ್ಯಾರ್ಥಿ ಗಾಯಗೊಂಡಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಹೇಳಲಾಗಿದೆ.
ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲಿ, ಸಂತ್ರಸ್ತ ವಿದ್ಯಾರ್ಥಿ ತನ್ನ ಉತ್ತರ ಪತ್ರಿಕೆಯನ್ನು ಆರೋಪಿ ವಿದ್ಯಾರ್ಥಿಗಳಿಗೆ ತೋರಿಸಲು ನಿರಾಕರಿಸಿದ್ದಾನೆ ಇದರಿಂದ ಕುಪಿತಗೊಂಡ ಮೂವರು ಪರೀಕ್ಷಾ ಕೊಠಡಿಯಿಂದ ಹೊರ ಬಂದ ಕೂಡಲೇ ಆತನನ್ನು ತಡೆದು ಥಳಿಸಿದ್ದಾರೆ ಬಳಿಕ ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ಸಾಗಿದ್ದಾನೆ ಅಲ್ಲದೆ ಜೀವಾಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ.
ಮೂವರು ಅಪ್ರಾಪ್ತ ಆರೋಪಿಗಳ ವಿರುದ್ಧ ಭಿವಂಡಿಯ ಶಾಂತಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 324 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಇದನ್ನೂ ಓದಿ: Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.