Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
Team Udayavani, Mar 28, 2024, 2:58 PM IST
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಾಯಕರಾಗಿ ನಟಿಸಿರುವ “ಆಡುಜೀವಿತಂ'(ಗೋಟ್ ಲೈಫ್) ಚಿತ್ರ ಇಂದು ತೆರೆ ಕಾಣುತ್ತಿದೆ. ಹೊಂಬಾಳೆ ಫಿಲಂಸ್ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ.
ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ ಪೃಥ್ವಿರಾಜ್ ಮಾತನಾಡಿ, “ನನಗೆ ವಿಜಯ್ ಕಿರಗಂದೂರ್ ಅವರು ಆತ್ಮೀಯ ಸ್ನೇಹಿತರು. ನಮ್ಮ ಆಡುಜೀವಿತಂ ಚಿತ್ರವನ್ನು ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಇನ್ನು ಬ್ಲೆಸ್ಸಿ ಅವರು ಗೋಟ್ ಲೈಫ್ ಚಿತ್ರ ಮಾಡಬೇಕೆಂದು ಕೊಂಡಿದ್ದು 2008 ರಲ್ಲಿ. ಚಿತ್ರೀಕರಣ ಆರಂಭವಾಗಿದ್ದು 2018 ರಲ್ಲಿ. ಈ ಚಿತ್ರಕ್ಕಾಗಿ ಹದಿನಾರು ವರ್ಷಗಳ ಪರಿಶ್ರಮವಿದೆ. ನಾನು ಈ ಚಿತ್ರಕ್ಕಾಗಿ 31 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದೇನೆ. ಇದು ಬೆನ್ಯಾಮಿನ್ ಅವರು ಬರೆದಿರುವ ಆಡುಜೀವಿತಂ ಕಾದಂಬರಿ ಆಧಾರಿತ ಚಿತ್ರ. ಈ ಜನಪ್ರಿಯ ಕಾದಂಬರಿ ಈವರೆಗೂ 251 ಬಾರಿ ಮುದ್ರಣವಾಗಿದೆ. ನಜೀಬ್ ಎಂಬುವವರ ಜೀವನದ ನೈಜ ಕಥೆ ಆಧರಿಸಿದೆ. ಅಮಲಾ ಪೌಲ್, ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಸಂಗೀತ ನೀಡಿದ್ದಾರೆ’ ಎಂದರು.
ಚಿತ್ರ ಮಲಯಾಳಂ, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ಎಲ್ಲರೂ ನೋಡಿ ಎನ್ನುವುದು ನಿರ್ದೇಶಕ ಬ್ಲೆಸ್ಸಿ ಮಾತು. ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಸಹ ಈ ಚಿತ್ರದಲ್ಲಿ ನಟಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.