D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಮತ್ತು ಕುಟುಂಬದವರು ಎಲ್ಲಿದ್ದರು?

Team Udayavani, Mar 28, 2024, 5:37 PM IST

1-a-DK-SHI

ರಾಮನಗರ: “ಕೋವಿಡ್ ಸಮಯದಲ್ಲಿ ಜನರು ಕಷ್ಟಕ್ಕೆ ಸಿಲುಕಿದ್ದಾಗ ಅವರ ಪರವಾಗಿ ನಿಂತಿದ್ದು ಡಿ.ಕೆ. ಸುರೇಶ್. ಅದು ಮಾನವೀಯತೆ, ಹೃದಯವಂತಿಕೆಯಲ್ಲವೇ? ಆ ಸಮಯದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿ ಹೋಗಿದ್ದರು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ ಕೆ ಸುರೇಶ್ ಅವರು ಗುರುವಾರ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, “ನನಗೆ ಕುಮಾರಸ್ವಾಮಿ ಅವರ ವಿಚಾರ ಮಾತನಾಡಲು ಇಷ್ಟವಿಲ್ಲ. ಆದರೂ ಅವರಿಗೆ ಒಂದು ವಿಚಾರ ಕೇಳಬಯಸುತ್ತೇನೆ. ನೀವು ಈ ಜಿಲ್ಲೆಯ ಕ್ಷೇತ್ರವೊಂದರ ಶಾಸಕರು. ಕೋವಿಡ್ ಬಂದಾಗ ಈ ಭಾಗದ ಬಡವರ ರಕ್ಷಣೆಗೆ ನೀವು ಯಾರಾದರೂ ಒಬ್ಬರು ಮುಂದೆ ಬಂದರಾ? ಇಲ್ಲ.ಆದರೆ, ಡಿ.ಕೆ ಸುರೇಶ್ ಅವರು ಪ್ರತಿ ಕುಟುಂಬಕ್ಕೆ ಆಹಾರ ಪದಾರ್ಥ, ಮೆಡಿಕಲ್ ಕಿಟ್ ವಿತರಿಸಿದರು. ರೈತರಿಗೆ ಮಾರುಕಟ್ಟೆ ಇಲ್ಲದಾಗ, ರೈತರು ಬೆಳೆದ ತರಕಾರಿಗಳನ್ನು ಅವರ ಜಮೀನಿನಿಂದ ಖರೀದಿ ಮಾಡಿದರು. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ತರಕಾರಿ ಖರೀದಿಸಿ ಅದನ್ನು ಜನಸಾಮಾನ್ಯರಿಗೆ ಉಚಿತವಾಗಿ ಹಂಚಿದ್ದಾರೆ. ಆ ಮೂಲಕ ರೈತರು ಹಾಗೂ ಬಡವರನ್ನು ರಕ್ಷಣೆ ಮಾಡಿದ್ದಾರೆ’ ಎಂದರು.

ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ ಸುರೇಶ್ ಪಿಪಿಇ ಕಿಟ್ ಧರಿಸಿ ಅನಾಥ ಶವಗಳ ಅಂತ್ಯ ಸಂಸ್ಕಾರ ಮಾಡಿದರು. ಇನ್ನು ಕೋವಿಡ್ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ಇದ್ದಾಗ, ಸುರೇಶ್ ಅವರು ತಾವೇ ಖುದ್ದಾಗಿ ಪಿಪಿಇ ಕಿಟ್ ಧರಿಸಿ ಕೋವಿಡ್ ವಾರ್ಡ್ ಒಳಗೆ ಹೋಗಿ, ಸೋಂಕಿತರ ಸಮಸ್ಯೆ ಆಲಿಸಿದರು. ಅವರಿಗೆ ಧೈರ್ಯ ತುಂಬಿದರು. ಇದು ಮಾನವೀಯತೆ ಅಲ್ಲವೇ? ಇದು ಹೃದಯವಂತಿಕೆಯಲ್ಲವೇ? ಕುಮಾರಣ್ಣ ಆಗ ಎಲ್ಲಿ ಹೋಗಿದ್ದರು? ಅವರ ಅಭ್ಯರ್ಥಿ ಎಲ್ಲಿ ಹೋಗಿದ್ದರು? ಅವರ ಕುಟುಂಬ ಎಲ್ಲಿ ಹೋಗಿತ್ತು? ಎಂದು ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿ ಡಾ. ಸಿ. ಎನ್. ಮಂಜುನಾಥ್ ಅವರ ಅಭ್ಯರ್ಥಿತನಕ್ಕೆ ಸವಾಲೆಸೆದರು.

ಟಾಟಾ ಬೈ ಬೈ ಹೇಳಿ

ದಳದ ಅಭ್ಯರ್ಥಿಯನ್ನು ಬಿಜೆಪಿ ಚಿಹ್ನೆಯಲ್ಲಿ ನಿಲ್ಲಿಸಿದ್ದು, ಅದರ ಬಗ್ಗೆ ನಾನು ಈಗ ಚರ್ಚೆ ಮಾಡುವುದಿಲ್ಲ. ದಳ ಈಗ ಎಲ್ಲಿದೆ? ಕುಮಾರಣ್ಣ ಇದೇ ಜಿಲ್ಲೆಯಿಂದ 2 ಬಾರಿ ಮುಖ್ಯಮಂತ್ರಿಯಾಗಿ ಈಗ ಈ ಜಿಲ್ಲೆ ಬಿಟ್ಟು ಮಂಡ್ಯಕ್ಕೆ ಹೋಗುತ್ತಿದ್ದಾರೆ. ನೀವು ಅವರಿಗೆ ಟಾಟಾ ಗುಡ್ ಬೈ ಹೇಳಬೇಕು. ನೀವು ಯಾರಿಗೆ ಅಧಿಕಾರ ಕೊಟ್ಟಿದ್ದೀರಿ ಅವರು ನಿಮ್ಮನ್ನು ನಂಬದೇ ಪಕ್ಕದ ಕ್ಷೇತ್ರಕ್ಕೆ ಹೋಗಿದ್ದಾರೆ ಎಂದರು.

ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮೇಲೆ ಆ ಪಕ್ಷದ ನಾಯಕರಿಗೆ ನಂಬಿಕೆ ಇಲ್ಲ. ನಿಮ್ಮ ಪರವಾಗಿ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಅಧಿಕಾರ ನಮ್ಮ ಕೈಯಲ್ಲಿದೆ, ನಿಮ್ಮ ರಕ್ಷಣೆ ನಾವು ಮಾಡುತ್ತೇವೆ. ನೀವು ನಮ್ಮ ಜತೆ ಕೈಜೋಡಿಸಿ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕಮಲ ಉದುರಿಹೋಯಿತು, ತೆನೆಯೊತ್ತ ಮಹಿಳೆ ತೆನೆ ಎಸೆದು ಬಿಜೆಪಿ ಸೇರಿಕೊಂಡಳು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು ಎಂದರು.

ಟಾಪ್ ನ್ಯೂಸ್

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.