Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Team Udayavani, Mar 29, 2024, 10:52 AM IST
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ| ಬೃಜೇಶ್ ಚೌಟ ಅವರು ಎ. 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸುವರು.
ಆ ಸಂದರ್ಭ ರ್ಯಾಲಿ ನಡೆಸುವ ಸಾಧ್ಯತೆ ಇದ್ದು, ತಮಿಳುನಾಡಿನ ಬಿಜೆಪಿ ನಾಯಕ, ಅಣ್ಣಾಮಲೈ ಭಾಗವಹಿಸುವರ ನಿರೀಕ್ಷೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಕ್ಯಾ| ಚೌಟರ ಆಸ್ತಿ ಇಷ್ಟು !
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ 2022-23ರಲ್ಲಿ ವಾರ್ಷಿಕ 6,51,590 ಲಕ್ಷ ರೂ. ಆದಾಯ ಹೊಂದಿ ರುವುದಾಗಿ ಗುರುವಾರ ಮೊದಲ ಸೆಟ್ ನಾಮಪತ್ರ ಸಲ್ಲಿಕೆ ಸಂದರ್ಭ ನೀಡಿರುವ ತಮ್ಮ ಆದಾಯ, ಅಸ್ತಿ ವಿವರವಿರುವ ಅಫಿದವಿತ್‌ನಲ್ಲಿ ತಿಳಿಸಿದ್ದಾರೆ.
27,31,365 ರೂ. ಮೌಲ್ಯದ ಸ್ಥಿರಾಸ್ತಿ ಹಾಗೂ 43.50 ಲ.ರೂ. ಮೌಲ್ಯದ ಚರಾಸ್ತಿಗಳಿದ್ದು 80 ಸಾವಿರ ರೂ. ನಗದು ಹೊಂದಲಾಗಿದೆ. ಕೆನರಾ ಬ್ಯಾಂಕ್‌ನಲ್ಲಿ 9,62,010 ರೂ. ಸಾಲ ಹೊಂದಿದ್ದಾರೆ.
ಮಂಗಳೂರಿನ ಯೂನಿಯನ್ ಬ್ಯಾಂಕ್‌ನಲ್ಲಿ 90,822 ರೂ., ಕೆನರಾ ಬ್ಯಾಂಕ್‌ನಲ್ಲಿ 42,618 ರೂ., ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ 499 ರೂ. ಹಾಗೂ ಕೆನರಾ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಇದೆ. ಒಲಿವರ್ ಸ್ಟೀಲ್ ಸೊಲ್ಯೂಷನ್ಸ್‌ನಲ್ಲಿ 7,20,425 ರೂ. ಹೂಡಿಕೆ ಮಾಡಿದ್ದಾರೆ.
2019ರಲ್ಲಿ 8,15,001 ರೂ. ಮೌಲ್ಯದ ಟೊಯಟಾ ಇನ್ನೋವಾ ಹೊಂದಿದ್ದಾರೆ. 9 ಲಕ್ಷ ರೂ. ಮೌಲ್ಯದ 137 ಗ್ರಾಂ ಚಿನ್ನ ಇದೆ. ಉಳ್ಳಾಲ ತಾಲೂಕಿನ ತಲಪಾಡಿಯಲ್ಲಿ ಐದು ಕಡೆ ಒಟ್ಟು 152 ಸೆಂಟ್ಸ್ ಕೃಷಿ ಭೂಮಿ ಹೊಂದಿದ್ದು, ಇದರ ಪ್ರಸಕ್ತ ಮಾರುಕಟ್ಟೆ ಮೌಲ್ಯ 43.50 ಲ.ರೂ. ಆಗಿದೆ.
ಕ್ಯಾ| ಚೌಟ ಮೇಲೆ 2017ರಲ್ಲಿ ಮೈಸೂರಿನ ನಂಜನಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಸ್ತುತ ಹೈಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿದೆ.
ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ ಕ್ಯಾ| ಚೌಟ 2002 ರಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ, ಬಳಿಕ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಿಂದ ತರಬೇತಿ ಪಡೆದು 2003ರಿಂದ 2010ರ ವರೆಗೆ ಗೂರ್ಖ ರೈಫಲ್ಸ್ ರೆಜಿಮೆಂಟ್‌ನಲ್ಲಿ ಆರ್ಮಿ ಅಧಿಕಾರಿಯಾಗಿದ್ದರು. ನಿವೃತ್ತರಾದ ಬಳಿಕ 2014ರಲ್ಲಿ ಇಂದೋರ್‌ನ ಐಐಎಂನಲ್ಲಿ ಪದವಿ ಪಡೆದಿದ್ದಾರೆ. ಅವಿವಾಹಿತರಾಗಿದ್ದು, ವಾಟ್ಸ್‌ಆ್ಯಪ್, ಎಕ್ಸ್, ಇನ್ಸ್ಟಾಗ್ರಾಮ್, ಫೇಸ್‌ಬುಕ್, ಯುಟ್ಯೂಬ್‌ಗಳಲ್ಲಿ ಖಾತೆ ಹೊಂದಿದ್ದಾರೆ.
ಎ. 2ರಂದು ಹೆಗ್ಡೆ, ಎ. 3ರಂದು ಕೋಟ ನಾಮಪತ್ರ ಸಲ್ಲಿಕೆ
ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಎ. 3ರಂದು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಎ. 2ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೂ ಪೂರ್ವದಲ್ಲಿ ಕಡಿಯಾಳಿಯ ಬಿಜೆಪಿ ಕಚೇರಿ ಆವರಣದಲ್ಲಿ ಸಮಾವೇಶ ನಡೆಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.