Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು


Team Udayavani, Mar 29, 2024, 3:36 PM IST

18-

ಕನ್ನಡ ಸಾಹಿತ್ಯಲೋಕದಲ್ಲೇ ಅತ್ಯಂತ ಪಾರದರ್ಶಕ ಸ್ಪರ್ಧೆ ಮತ್ತು ಪುರಸ್ಕಾರವಾದ ಬುಕ್ ಬ್ರಹ್ಮ ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ ಮತ್ತು ಕಾದಂಬರಿ ಪುರಸ್ಕಾರ- 2024ಕ್ಕೆ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.

ಈ ಸ್ಪರ್ಧೆಯಲ್ಲಿ ರೂ. 2 ಲಕ್ಷ 69 ಸಾವಿರ ಬಹುಮಾನವನ್ನೂ ಘೋಷಿಸಲಾಗಿದೆ.

ಬುಕ್ ಬ್ರಹ್ಮ “ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆʼ ಹಾಗೂ 2023ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿಗೆ ಪುರಸ್ಕಾರ ನೀಡಲು ನಿರ್ಧರಿಸಿದೆ.

2023ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಒಂದು ಲಕ್ಷದಲ್ಲಿ 75 ಸಾವಿರ ರೂ. ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ವಿತರಿಸಲಾಗುತ್ತದೆ.

ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂ. ಬಹುಮಾನ ನೀಡಲಾಗುವುದು. ಈ ಪೈಕಿ 3 ಸಾವಿರ ರೂ. ಲೇಖಕರಿಗೆ ಹಾಗೂ 2 ಸಾವಿರ ರೂ.ಗಳನ್ನು ಪ್ರಕಾಶಕರಿಗೂ ನೀಡಲಾಗುವುದು.

ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಕಥೆಗೆ 50 ಸಾವಿರ ರೂ. ನಗದು ಬಹುಮಾನ ಇರಲಿದೆ. ದ್ವೀತಿಯ ಸ್ಥಾನ ಪಡೆಯುವ ಕಥೆಗೆ 25 ಸಾವಿರ ರೂ., ತೃತೀಯ ಸ್ಥಾನಕ್ಕೆ 15 ಸಾವಿರ ರೂ. ನಗದು ಬಹುಮಾನ ಇರಲಿದೆ.

ಉಳಿದಂತೆ ಐದು ಕಥೆಗಳಿಗೆ ತಲಾ 5 ಸಾವಿರ ನಗದನ್ನು ಒಳಗೊಂಡ ಸಮಾಧಾನಕರ ಬಹುಮಾನ ಹಾಗೂ ಅಂತಿಮ ಸುತ್ತಿಗೆ ಆಯ್ಕೆಯಾಗುವ ಉಳಿದ 17 ಕಥೆಗಳಿಗೆ ತಲಾ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ. ಆಯ್ಕೆಯಾದ ಈ 25 ಕಥೆಗಳನ್ನು ಒಳಗೊಂಡ ಪುಸ್ತಕ ಪ್ರಕಟಿಸಲಾಗುತ್ತದೆ.

ಬುಕ್ ಬ್ರಹ್ಮ ಕಾದಂಬರಿ ಪುರಸ್ಕಾರ 2024ರ ನಿಯಮಗಳು:

  1. ಕಾದಂಬರಿಯು ಸ್ವತಂತ್ರವಾಗಿರಬೇಕು ಮತ್ತು 2023ರಲ್ಲಿ ಮೊದಲ ಮುದ್ರಣಗೊಂಡಿರಬೇಕು.
  2. ಅನುವಾದ ಹಾಗೂ ಭಾಷಾಂತರಗೊಂಡ ಕಾದಂಬರಿಗಳನ್ನು ಪರಿಗಣಿಸುವುದಿಲ್ಲ.
  3. ಸ್ಪರ್ಧೆಗೆ ಲೇಖಕರು/ ಪ್ರಕಾಶಕರು ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಕಳುಹಿಸಬೇಕು.
  4. ತೀರಪುಗಾರರ ನಿರ್ಣಯವೇ ಅಂತಿಮ.
  5. ಕಾದಂಬರಿಗಳನ್ನು ಕಳುಹಿಸಲು 2024ರ ಮೇ 1 ಕೊನೆಯ ದಿನ.
  6. ಕನ್ನಡದ ಪ್ರಮುಖ ಕಾದಂಬರಿಕಾರರು ಹಾಗೂ ವಿಮರ್ಶಕರು ಸ್ಪರ್ಧೆಯ ನಿರ್ಣಾಯಕರಾಗಿರುತ್ತಾರೆ.
  7. ಆಯ್ಕೆಗೆ ಸಂಬಂಧಿಸಿದಂತೆ ‘ಬುಕ್ ಬ್ರಹ್ಮ’ ಆಡಳಿತ ಮಂಡಳಿಯ ನಿರ್ಣಯವೇ ಅಂತಿಮ.
  8. ಜುಲೈ 2024ರ 1ರ ಮಂಗಳವಾರ ಅಂತಿಮ ಸುತ್ತನ್ನು ಪ್ರವೇಶಿಸುವ 5 ಕಾದಂಬರಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು.
  9. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂ. ಬಹುಮಾನ ನೀಡಲಾಗುವುದು. ಈ ಪೈಕಿ 3 ಸಾವಿರ ರೂ. ಲೇಖಕರಿಗೆ ಹಾಗೂ 2 ಸಾವಿರ ರೂ.ಳನ್ನು ಪ್ರಕಾಶಕರಿಗೂ ನೀಡಲಾಗುವುದು.
  10. 2024ರ ಆಗಸ್ಟ್ 9,10,11 ರಂದು ನಡೆಯಲಿರುವ ಬುಕ್ ಬ್ರಹ್ಮ ಸಾಹಿತ್ಯ ಉತ್ಸವದಲ್ಲಿ ಪುರಸ್ಕೃತರ ಘೋಷಣೆ ಮತ್ತು ಪ್ರಶಸ್ತಿ ವಿತರಣೆ ಮಾಡಲಾಗುವುದು.
  11. ಬುಕ್‌ಬ್ರಹ್ಮ ಪ್ರೈವೇಟ್ ಲಿಮಿಟೆಡ್ (Book Brahma Private Ltd) ಫರ್ಬೆಂಡನ್‌ ಕಮ್ಯುನಿಕೇಷನ್ ಪ್ರೈವೇಟ್ ಲಿಮಿಟೆಡ್ (Verbinden Communication Private Limited) ಸಂಸ್ಥೆಗಳ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.
  12. ಅಂತಿಮ ಸುತ್ತಿಗೆ ಆಯ್ಕೆಯಾದ ಕಾದಂಬರಿಕಾರರು ಬಹುಮಾನ ವಿತರಣಾ ಸಮಾರಂಭದಲ್ಲಿ ತಪ್ಪದೇ ಭಾಗವಹಿಸಬೇಕು.
  13. ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ-ಕನ್ನಡ ಮೂರನೇ ಮಹಡಿ, ಆರ್. ಕೆ ಕಾಂಪ್ಲೆಕ್ಸ್, ಕೆಎಸ್‌ಎಸ್‌ಐಡಿಸಿ ಆವರಣ ಎಲೆಕ್ಟ್ರಾನಿಕ್ಸ್ ಸಿಟಿ ಮೊದಲ ಹಂತ, ಬೆಂಗಳೂರು- 560 100 ವಿಳಾಸಕ್ಕೆ ಮೇ 1 ರೊಳಗೆ ಕಳುಹಿಸಬೇಕು.

ಹೆಚ್ಚಿನ ವಿವರಗಳಿಗೆ 78926 08118 ಸಂಪರ್ಕಿಸಬಹುದು.

ಬುಕ್ ಬ್ರಹ್ಮ ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ-2024ರ ನಿಯಮಗಳು:

  1. ಕಥೆಯು ಸ್ವತಂತ್ರವಾಗಿರಬೇಕು. ಅನುವಾದ, ಅನುಕರಣವಾಗಿರಬಾರದು.
  2. ಕಥೆಯು ಅಪ್ರಕಟಿತವಾಗಿರಬೇಕು. ಮುದ್ರಣ ಅಥವಾ ಯಾವುದೇ ವಿದ್ಯುನ್ಮಾನ ಮಾಧ್ಯಮ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರಬಾರದು.
  3. ಕಥೆಗೆ ಯಾವುದೇ ರೀತಿಯ ಪದ ಮಿತಿ ಇರುವುದಿಲ್ಲ.
  4. ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ವಯಸ್ಸಿನ ನಿರ್ಬಂಧವಿಲ್ಲ.
  5. ಹಸ್ತಪ್ರತಿ ಅಥವಾ ಟೈಪ್ ಮಾಡಿದ ಕಥೆಯಿರುವ ಪುಟಗಳಲ್ಲಿ ತಮ್ಮ ಹೆಸರನ್ನು ದಾಖಲಿಸಬಾರದು. ಕಥೆ ಮುಗಿದ ನಂತರ ಪ್ರತ್ಯೇಕ ಪುಟದಲ್ಲಿ ತಮ್ಮ ಹೆಸರು, ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆ ಇರಬೇಕು.
  6. ಕಥೆಗಾರರು ನಿಬಂಧನೆಗಳಿಗೆ ಒಪ್ಪಿದ ಮತ್ತು ಸಹಿ ಮಾಡಿದ ಪ್ರತ್ಯೇಕ ಒಂದು ಪತ್ರ ಇಡಬೇಕು.
  7. ಬುಕ್‌ಬ್ರಹ್ಮ ಪ್ರೈವೇಟ್ ಲಿಮಿಟೆಡ್ (Book Brahma Private Ltd) ಫರ್ಬೆಂಡನ್‌ ಕಮ್ಯುನಿಕೇಷನ್ ಪ್ರೈವೇಟ್ ಲಿಮಿಟೆಡ್ (Verbinden Communication Private Limited) ಸಂಸ್ಥೆಗಳ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.
  8. ಕನ್ನಡದ ಪ್ರಮುಖ ಕಥೆಗಾರರು/ ವಿಮರ್ಶಕರು ಸ್ಪರ್ಧೆಯ ನಿರ್ಣಾಯಕರಾಗಿರುತ್ತಾರೆ.
  9. ಆಯ್ಕೆಗೆ ಸಂಬಂಧಿಸಿದಂತೆ ‘ಬುಕ್ ಬ್ರಹ್ಮ’ ಆಡಳಿತ ಮಂಡಳಿಯ ನಿರ್ಣಯವೇ ಅಂತಿಮ.
  10. ಕಥೆಗಳನ್ನು ಕಳುಹಿಸಲು 2024ರ ಮೇ. 1 ಕೊನೆಯ ದಿನ.
  11. 2024ರ ಜುಲೈ 1 ರಂದು ಅಂತಿಮ ಸುತ್ತನ್ನು ಪ್ರವೇಶಿಸುವ 25 ಕಥೆಗಳ ಪಟ್ಟಿಯನ್ನು ಪ್ರಕಟಿಸಲಾಗುವುದು.
  12. 2024ರ ಆಗಸ್ಟ್ 9,10,11ರಂದು ನಡೆಯಲಿರುವ ಬುಕ್ ಬ್ರಹ್ಮ ಸಾಹಿತ್ಯ ಉತ್ಸವದಲ್ಲಿ ಅಂತಿಮ ಸುತ್ತಿಗೆ ಆಯ್ಕೆಯಾದ ಕಥೆಗಳ ಘೋಷಣೆ ಮತ್ತು ಪ್ರಶಸ್ತಿ ವಿತರಣೆ ಮಾಡಲಾಗುವುದು.
  13. ಅಂತಿಮ ಸುತ್ತಿಗೆ ಆಯ್ಕೆಯಾದ 25 ಕಥೆಗಳನ್ನು ಪುಸ್ತಕದ ರೂಪದಲ್ಲಿ ಪ್ರಕಟಿಸಲಾಗುತ್ತದೆ. ಈ 25 ಕಥೆಗಳ ಪೈಕಿ ಬಹುಮಾನ ಪಡೆಯದೇ ಉಳಿಯುವ 17 ಕಥೆಗಳಿಗೆ ತಲಾ 2 ಸಾವಿರ ರೂ. ಗೌರವಧನ ನೀಡಲಾಗುವುದು. ಈ ಎಲ್ಲಾ 25 ಕಥೆಗಳ ಹಕ್ಕುಸ್ವಾಮ್ಯ ಕಥೆಗಾರರು ಮತ್ತು ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಇಬ್ಬರಿಗೂ ಜಂಟಿಯಾಗಿ (ಶೇಕಡಾ 50) ಸೇರಿರುತ್ತದೆ.
  14. ಅಂತಿಮ ಸುತ್ತಿಗೆ ಆಯ್ಕೆಯಾದ ಕಥೆಗಾರರು ಬಹುಮಾನ ವಿತರಣಾ ಸಮಾರಂಭದಲ್ಲಿ ತಪ್ಪದೇ ಭಾಗವಹಿಸಬೇಕು.
  15. ಒಬ್ಬರು ಒಂದು ಕಥೆಯನ್ನು ಮಾತ್ರ ಕಳಿಸಬೇಕು. ಕಾದಂಬರಿ ಸ್ಪರ್ಧೆಗೆ ಪುಸ್ತಕ ಕಳುಹಿಸಿದವರೂ ಕೂಡ ಕಥೆಗಳನ್ನು ಕಳುಹಿಸಬಹುದು.
  16. ಕಥೆಗಳನ್ನು ಈ-ಮೇಲ್ ಮೂಲಕ (ನುಡಿ/ಯೂನಿಕೋಡ್ ಫಾಂಟ್ ಬಳಸಿ ಟೈಪ್ ಮಾಡಿದ ಪ್ರತಿ) [email protected] ಅಥವಾ ಹಸ್ತಪ್ರತಿಯನ್ನು ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ ಕನ್ನಡ ಮೂರನೇ ಮಹಡಿ, ಆರ್.ಕೆ ಕಾಂಪ್ಲೆಕ್ಸ್, ಕೆಎಸ್‌ಎಸ್‌ಐಡಿಸಿ ಆವರಣ ಎಲೆಕ್ಟ್ರಾನಿಕ್ಸ್ ಸಿಟಿ, ಮೊದಲ ಹಂತ, ಬೆಂಗಳೂರು– 560 100 ಕ್ಕೆ ಕಳುಹಿಸಿಕೊಡಬಹುದು.

ಹೆಚ್ಚಿನ ವಿವರಗಳಿಗೆ 78926 08118 ಸಂಪರ್ಕಿಸಬಹುದು ಅಥವಾ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ : https://www.bookbrahma.com/news/2024ne-salina-bookbrahma-katha-spardhe-kadambari-puraskarakke-ahvana ತಿಳಿದು ಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.