Mysore: ಮುಖ್ಯಮಂತ್ರಿ, ಕಾಂಗ್ರೆಸ್ ಬಗ್ಗೆ ಮಾತನಾಡಲಾರೆ: ಯದುವೀರ್
Team Udayavani, Mar 30, 2024, 6:50 AM IST
ಮೈಸೂರು: ಮುಖ್ಯಮಂತ್ರಿ ಹುದ್ದೆಗೆ ತನ್ನದೇ ಆದ ಮಹತ್ವವಿದೆ. ಮುಖ್ಯಮಂತ್ರಿಗಳ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಯಾರನ್ನೂ ನಾನು ವೈಯಕ್ತಿಕವಾಗಿ ಟೀಕಿಸುವುದಿಲ್ಲ ಎಂದು ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಯದುವೀರ್ ಒಡೆಯರ್ ಬಗ್ಗೆ ಕಾಂಗ್ರೆಸ್ ನಾಯಕರು ಮೃದು ಧೋರಣೆ ಹೊಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ನವರು ನನ್ನ ಬಗ್ಗೆ ಮೃದು ಧೋರಣೆ ತಳೆದಿರುವ ಕುರಿತು ಏನನ್ನೂ ಹೇಳುವುದಿಲ್ಲ. ಯಾರ ಬಗ್ಗೆಯೂ ನಾನು ವೈಯಕ್ತಿಕ ಟೀಕೆ ಮಾಡುವುದಿಲ್ಲ ಎಂದರು. ಇದುವರೆಗೆ ನನಗೆ ಏನು ಸಿಕ್ಕಿರಲಿಲ್ಲವೋ ಅದು ಕಳೆದ 15 ದಿನಗಳಿಂದ ಸಿಗುತ್ತಿದೆ. ಜನರು ತೋರುತ್ತಿರುವ ಕಾಳಜಿಗೆ ನಾನು ಆಭಾರಿ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.