EC; ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಬಂದವು 79,000 ದೂರುಗಳು!
Team Udayavani, Mar 30, 2024, 6:25 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾಗಿರುವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯನ್ನು ಪತ್ತೆಹಚ್ಚಿ ವರದಿ ಮಾಡುವುದಕ್ಕೆ ದೇಶದ ಪ್ರಜೆಗಳೇ ಮುಂದಾಗಿದ್ದಾರೆ. ಚುನಾವಣೆ ಆಯೋಗದ (ಇ.ಸಿ) ಸಿ-ವಿಜಿಲ್ ಆ್ಯಪ್ ಈ ಅಪರಾಧ ಪತ್ತೆಗೆ ಜನರ ಕೈಯಲ್ಲಿರುವ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ. ಇದರ ಮೂಲಕ ಈಗಾಗಲೇ ಬರೋಬ್ಬರಿ 79,000 ದೂರುಗಳು ದಾಖಲಾಗಿವೆ.
ಹೌದು, ಚುನಾವಣೆ ಆಯೋಗವು ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳನ್ನು ನಾಗರಿಕರೇ ದಾಖಲಿಸಲು ಅನುವಾಗುವಂತೆ ಸಿ-ವಿಜಿಲ್ ಎನ್ನುವ ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ. ಇದೇ ಆ್ಯಪ್ಲಿಕೇಶನ್ ಮೂಲಕ ಮಾದರಿ ನೀತಿ ಸಂಹಿತೆ ಜಾರಿ ಆದಾಗಿನಿಂದ ಈವರೆಗೆ 79,000 ದೂರುಗಳು ದಾಖಲಾಗಿವೆ ಎಂದು ಚುನಾವಣೆ ಆಯೋಗವೇ ಮಾಹಿತಿ ನೀಡಿದೆ. ಈ ಪೈಕಿ ಶೇ.99ರಷ್ಟು ದೂರುಗಳನ್ನು ಈಗಾಗಲೇ ಪರಿಶೀಲಿಸಿ ಬಗೆಹರಿಸಲಾಗಿದೆ. ಅದರಲ್ಲಿಯೂ ಶೇ.89ರಷ್ಟು ದೂರುಗಳನ್ನು 100 ನಿಮಿಷಗಳ ಒಳಗಾಗಿ ಬಗೆಹರಿಸಲಾಗಿದೆ ಎಂದು ಚುನಾವಣೆ ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ದಾಖಲಾದ ದೂರುಗಳ ಪೈಕಿ 58,500 ದೂರುಗಳು ಕಾನೂನುಬಾಹಿರವಾಗಿ ಬ್ಯಾನರ್‌ಗಳನ್ನು ಹಾಕಿದ್ದಕ್ಕೆ ಸಂಬಂಧಿಸಿದೆ. 1,400 ದೂರುಗಳು ಹಣ, ಉಡುಗೊರೆ ಮತ್ತು ಮದ್ಯ ವಿತರಣೆಗೆ ಸಂಬಂಧಿಸಿದ್ದಾಗಿದೆ. 2,454 ದೂರುಗಳು ಪ್ರಚಾರಕ್ಕಾಗಿ ಸಾರ್ವಜನಿಕ ಸ್ಥಳಗಳನ್ನು ವಿರೂಪಗೊಳಿಸಿದ್ದಕ್ಕೆ ಸಂಬಂಧಿಸಿವೆ. 535 ಪ್ರಕರಣಗಳನ್ನು ಮತಹಾಕುವಂತೆ ಬೆದರಿಸಿದ್ದಕ್ಕಾಗಿ ದಾಖಲಿಸಲಾಗಿದೆ. ಈ ಪೈಕಿ 529 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಇನ್ನು 1000 ಪ್ರಕರಣಗಳು ಅವಧಿ ಮೀರಿ ಸ್ಪೀಕರ್‌ಗಳ ಬಳಕೆಗೆ ಸಂಬಂಧಿಸಿದ್ದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.