Pumpset: ಮಧ್ಯರಾತ್ರಿ ಪಂಪ್ ಸೆಟ್ ಕಳ್ಳತನಕ್ಕೆ ಬಂದಿದ್ದ ತಂಡ, ಓರ್ವ ಸೆರೆ, ಇಬ್ಬರು ಪರಾರಿ

Team Udayavani, Mar 30, 2024, 1:19 PM IST

Muddebihala: ಮಧ್ಯರಾತ್ರಿ ಪಂಪೆಸೆಟ್ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯನ್ನು ಹಿಡಿದ ರೈತರು

ಮುದ್ದೇಬಿಹಾಳ : ರೈತರ ಪಂಪಸೆಟ್ ಕಳ್ಳತನ ಮಾಡುತ್ತಿದ್ದ ತಂಡದ ಓರ್ವ ಸದಸ್ಯನನ್ನು ಮಧ್ಯರಾತ್ರಿ ರೈತರೆ ಹಿಡಿದು, ಕಟ್ಟಿಹಾಕಿ ಬೆಳಿಗ್ಗೆ ಪೊಲೀಸರಿಗೊಪ್ಪಿಸಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಹುಲಗಬಾಳ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಅಡವಿ ಹುಲಗಬಾಳ ಕೆರೆ, ಜಮೀನುಗಳಲ್ಲಿನ ಕೊಳವೆ ಭಾವಿ, ತೆರೆದ ಭಾವಿ ಮುಂತಾದವುಗಳಿಗೆ ರೈತರು ತಮ್ಮ ಹೊಲಕ್ಕೆ ನೀರು ಪಡೆದುಕೊಳ್ಳಲು ಪಂಪಸೆಟ್ ಅಳವಡಿಸಿದ್ದಾರೆ. ಮೇಲಿಂದ ಮೇಲೆ ಪಂಪಸೆಟ್ ಕಳ್ಳತನವಾಗುತ್ತಿದ್ದವು. ಆದರೆ ಕಳ್ಳರು ಸಿಕ್ಕಿಬಿದ್ದಿರಲಿಲ್ಲ. ಶುಕ್ರವಾರ ಮಧ್ಯರಾತ್ರಿ ರೈತನೊಬ್ಬ ಆರೋಗ್ಯ ಸಮಸ್ಯೆಯಿಂದಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವಾಗ ಸೇತುವೆ ಹತ್ತಿರ ಯಾರೋ ಓಡಾಡಿದಂತಾಗಿದೆ. ಈ ವೇಳೆ ಕೆಲ ರೈತರನ್ನು ಕರೆದು ಹುಡುಕಾಡಿದಾಗ ಒಬ್ಬ ಸೇತುವೆ ಕೆಳಗೆ ಅಡಗಿ ಕುಳಿತಿರುವುದನ್ನು ಕಂಡು ಹೋಗಿ ಹಿಡಿದಿದ್ದಾರೆ. ಇನ್ನಿಬ್ಬರು ಸ್ಥಳದಿಂದ ಓಡಿ ಪರಾರಿಯಾಗಿದ್ದಾರೆ. ಸಿಕ್ಕಿಬಿದ್ದ ಯುವಕನನ್ನು ಅಲ್ಲೇ ಇದ್ದ ಕಂಬಕ್ಕೆ ಕಟ್ಟಿಹಾಕಿ ಇನ್ನಿಬ್ಬರಿಗಾಗಿ ಹುಡುಕಾಡುವಷ್ಟರಲ್ಲಿ ಬೆಳಗಾಗಿತ್ತು. ಸಿಕ್ಕ ಒಬ್ಬ ಯುವಕನನ್ನು ಪೊಲೀಸರಿಗೆ ಒಪ್ಪಿಸಲು 112ಗೆ ಕರೆ ಮಾಡಿದ್ದಾರೆ.

ಯುವಕನನ್ನು ಪೊಲೀಸರಿಗೆ ಒಪ್ಪಿಸುವುದಕ್ಕೂ ಮುನ್ನ ಗ್ರಾಮವ್ಯಾಪ್ತಿಯ ತಾಳಿಕೋಟೆ ಪೊಲೀಸ್ ಠಾಣೆಯ ಪಿಎಸೈ ಅವರನ್ನು ಸ್ಥಳಕ್ಕೆ ಕರೆಸುವಂತೆ ರೈತರು ಪಟ್ಟು ಹಿಡಿದರು. ಇದರಿಂದ ಕೆಲಕಾಲ ಗೊಂದಲ ನಿರ್ಮಾಣಗೂಂಡು 112 ಸಿಬ್ಬಂದಿ ಹಾಗೂ ರೈತರ ಮಧ್ಯೆ ವಾಗ್ವಾದ ನಡೆಯಿತು. ಈ ಸಂದರ್ಭ ರೈತರು ಮಾತನಾಡಿ ಬಹಳ ದಿನಗಳಿಂದ ರೈತರ ಪಂಪಸೆಟ್ಗಳು ರಾತ್ರೋರಾತ್ರಿ ಕಳ್ಳತನ ಆಗುತ್ತಿದ್ದವು , ಗೋನಾಳ ಗ್ರಾಮದ ಪಂಪಸೆಟ್ ದುರಸ್ತಿ ಮಾಡುವ ವ್ಯಕ್ತಿಯ ಮನೆ ಮುಂದೆ ರಿಪೇರಿಗಾಗಿ ಇಟ್ಟಿದ್ದ ಪಂಪಸೆಟ್ ಗಳು ಕಳ್ಳತನವಾಗಿದ್ದವು.

ಅಡವಿ ಹುಲಗಬಾಳ, ಅಡವಿ ಸೋಮನಾಳ, ಗೋನಾಳ ಎಸ್ ಹೆಚ್, ಕವಡಿಮಟ್ಟಿ , ಜಲಪೂರ ,ಸುತ್ತಲಿನ ರೈತರಿಗೆ ಇದರಿಂದ ಸಾಕಷ್ಟು ತೊಂದರೆ ಆಗಿತ್ತು. ಹಲವು ಬಾರಿ ಪೂಲೀಸರ ಗಮನಕ್ಕೆ ತಂದರೂ, ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈಗ ರೆಡ್ ಹ್ಯಾಂಡ್ ಆಗಿ ಕಳ್ಳ ಸಿಕ್ಕಿಬಿದ್ದಿದ್ದಾನೆ. ಇವನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದರೆ ಇವರ ತಂಡದ ಮಾಹಿತಿ ಸಿಗುತ್ತದೆ. ಹಾಗಾಗಿ ಪಿಎಸೈ ಇಲ್ಲಿಗೆ‌ ಬರಲೇಬೇಕೆಂದು ಒತ್ತಾಯಿಸಿದರು.

ಪಿಎಸೈ ಎಸ್ಎಸ್ಎಲ್ ಸಿ ಪರೀಕ್ಷೆ ಹಾಗೂ ಚುನಾವಣಾ ಕರ್ತವ್ಯದಲ್ಲಿ ಇರುವುದರಿಂದ 112 ದಲ್ಲಿ ಕಳ್ಳನನ್ನು ಕಳಿಸಲು ತಿಳಿಸಿದ ಮೇಲೆ ಗ್ರಾಮಸ್ಥರು ಸಹಕರಿಸಿದರು. ಕಳ್ಳನನ್ನು 112 ವಾಹನದಲ್ಲಿ ಕೂರಿಸಿ ಬೇರೆ ವಾಹನದಲ್ಲಿ ಹಿಂಬಾಲಿಸಿ ಪೊಲೀಸ್ ಠಾಣೆಗೆ ತೆರಳಿದರು .

ಕಳ್ಳನನ್ನು ಅಮೂಲಾಗ್ರವಾಗಿ ವಿಚಾರಿಸಿ ಕಳ್ಳತನವಾದ ಪಂಪಸೆಟ್ ಗಳನ್ನು ಮರಳಿ ಕೊಡಿಸಬೇಕೆಂದು ರೈತರು ಒತ್ತಾಯಿಸಿದರು. ಘಟನಾ ಸ್ಥಳದಲ್ಲಿ ಕಳ್ಳರು ವಿದ್ಯುತ್ ಸಂಪರ್ಕದ ಕೇಬಲ್ ಕತ್ತರಿಸಿದ್ದ, ಪಂಪಸೆಟ್ ಸ್ಟಾರ್ಟರ್ ಬಾಕ್ಸ್ ಪ್ರತ್ಯೇಕಿಸಿ ಇಟ್ಟಿದ್ದು ಪತ್ತೆಯಾಗಿದೆ.

ಇದನ್ನೂ ಓದಿ: Haveri; ಮೋದಿ ಪ್ರಮಾಣ ವಚನ ಸ್ವೀಕರಿಸಿ 3 ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬೊಮ್ಮಾಯಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.