ಚುನಾವಣಾ ಆಯೋಗದ ನಿಯಮದಂತೆ ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಲಿ : ಭೂಬಾಲನ್
Team Udayavani, Mar 30, 2024, 5:05 PM IST
ವಿಜಯಪುರ : ಚುನಾವಣಾ ಆಯೋಗದ ನಿಯಮದಂತೆ ಲೋಕಸಭೆ ಚುನಾವಣೆಯನ್ನು ಪಾರದರ್ಶಕ ಮತ್ತು ಮುಕ್ತ, ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂದಿ ತಮಗೆ ವಹಿಸಿರುವ ಕಾರ್ಯಗಳನ್ನು ಕಡ್ಡಾಯವಾಗಿ ಅಚ್ಚುಕಟ್ಟುತನದಿಂದ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಲಾರಿ ಭೂಬಾಲನ್ ಸೂಚಿಸಿದರು.
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಚುನಾವಣೆ ಕರ್ತವ್ಯಕ್ಕೆ ನಿಯೋಜಿತ ನೊಡಲ ಅಧಿಕಾರಿಗಳೊಂದಿಗೆ ವಿಡೀಯೋ ಸಂವಾದ ಸಭೆಯಲ್ಲಿ ಈ ಸೂಚನೆ ನೀಡಿದ ಜಿಲ್ಲಾಧಿಕಾರಿ,ಚುನಾವಣೆ ನೀತಿ ಸಂಹಿತೆಯನ್ನು ಮೀರಿದ ದೂರುಗಳು ಸಿ-ವಿಜಿಲ್ ಆ್ಯಪ್‍ನಲ್ಲಿ ದಾಖಲಾದರೆ 100 ನಿಮಿಷದೊಳಗೆ ಪರಿಹರಿಸಲು ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದಕ್ಕಾಗಿ ಚುನಾವಣೆಯಲ್ಲಿ ಯಾವುದೇ ರೀತಿಯಲ್ಲಿ ಅಕ್ರಮಗಳು ನಡೆಯದಂತೆ ತಡೆಗಟ್ಟಲು ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. 24*7 ಸಿಸಿ ಕೆಮೆರಾಗಳು ಕಾರ್ಯ ನಿರ್ವಹಿಸುತ್ತಿರಬೇಕು ಎಂದು ಸೂಚಿಸಿದರು.
ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಅಕ್ರಮ ಹಣ ಸಾಗಾಟ ಮತ್ತು ಉಚಿತ ಉಡುಗರೆ ಸಾಗಾಟ, ಹಂಚಿಕೆ ನಡೆಸದಂತೆ ಇಂತ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಬೇಕು. ಜಿಲ್ಲೆಯಲ್ಲಿರುವ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಚುಣಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯೊಂದಿಗೆ ಕ್ರೀಯಾತ್ಮಕ ಕಾರ್ಯಚಟುವಟಿಕೆ ಹಮ್ಮಿಕೊಂಡು ಕಾರ್ಯಕ್ರಮಗಳನ್ನು ರೂಪಿಸಬೇಕು. ಯಾವುದೇ ಕಾರಣಕ್ಕು ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಇದೇ ಸಂರ್ದಭದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ 1 ನೇ ಹಂತದ ತರಬೇತಿ ನೀಡುವ, ಅಂಚೆ ಮತಪತ್ರಗಳ ಕಾರ್ಯಗಳ ಬಗ್ಗೆ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ತಂಡಗಳಿಗೆ ವಾಹನ ಹಂಚಿಕೆ ಕುರಿತು ಚರ್ಚಿಸಲಾಯಿತು.
ಚುನಾವಣಾ ಟೆಂಡರ್ ಹಾಗೂ ಚುನಾವಣಾ ವೀಕ್ಷಕರಿಗೆ ಸೌಲಭ್ಯ ಕಲ್ಪಿಸಿದ ಬಗ್ಗೆ, ಚುನಾವಣೆಗೆ ಸಂಬಂದಿಸಿದ ವಿವಿಧ ದೂರಗಳ ವಿಲೇವಾರಿ ಕುರಿತು ಚರ್ಚಿಸಲಾಯಿತು.
ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.