ಸಿರುಗುಪ್ಪ: ಶುದ್ಧ ನೀರಿನ ಘಟಕಗಳಿಗೆ ನಿರ್ವಹಣೆ ಕೊರತೆ!
Team Udayavani, Mar 30, 2024, 5:45 PM IST
ಉದಯವಾಣಿ ಸಮಾಚಾರ
ಸಿರುಗುಪ್ಪ: ನಗರದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ಧೇಶದಿಂದ ನಿರ್ಮಿಸಲಾಗಿರುವ ಘಟಕಗಳು ನಿರ್ವಹಣೆ ಇಲ್ಲದೆ ಹಾಳಾಗಿವೆ. ನಗರದ 31 ವಾರ್ಡ್‌ಗಳ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಐದಾರು ವಾರ್ಡ್‌ಗಳಿಗೆ ಒಂದೊಂದರಂತೆ ಒಟ್ಟು 6 ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದೆ. ಆದರೆ ಅವುಗಳಲ್ಲಿ ಒಂದು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 5 ಘಟಕಗಳು ಸ್ಥಗಿತಗೊಂಡಿವೆ.
ಘಟಕಗಳಿಗೆ ನೀರು ಪೂರೈಕೆ ಮಾಡಲೆಂದು ಹಾಕಲಾಗಿದ್ದ ಬೋರ್‌ವೆಲ್‌ಗಳಲ್ಲಿಯೇ ಸಂಪೂರ್ಣವಾಗಿ ನೀರು ಬತ್ತಿ ಹೋಗಿದ್ದು,
ಇದೇ ಘಟಕಗಳ ಸ್ಥಗಿತಕ್ಕೆ ಮುಖ್ಯ ಕಾರಣವೆಂದು ಅಧಿಕಾರಿಗಳು ತಿಳಿಸಿದ್ದಾರೆ. ಕಡಿಮೆ ದರದಲ್ಲಿ ಸ್ಥಳಿಯವಾಗಿಯೇ ಶುದ್ಧ ಕುಡಿಯುವ ನೀರೊದಗಿಸುವ ಉದ್ದೇಶದಿಂದ ನಿರ್ಮಾಣವಾದ ಐದು ಘಟಕಗಳು ಸ್ಥಗಿತಗೊಂಡಿದ್ದು, ನಗರದ ನೀಲಕಂಠೇಶ್ವರ ದೇವಸ್ಥಾನದ ಹತ್ತಿರ ಇರುವ ಸರ್ಕಾರಿ ಶುದ್ಧ ಕುಡಿಯುವ ನೀರಿನ ಒಂದು ಘಟಕ ಮಾತ್ರ ಕಾರ್ಯನಿರ್ವಹಿಸುತ್ತಿದೆ.
ನಮ್ಮ ವಾರ್ಡ್‌ನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ ಯಾವುದೇ ಪ್ರಯೋಜನವಿಲ್ಲ, ಸದ್ಯ ಘಟಕ ಸ್ಥಗಿತಗೊಂಡಿದ್ದು, ಕುಡಿಯುವ ನೀರನ್ನು ಬೇರೆಡೆಯಿಂದ ತರುವುದು ಅನಿವಾರ್ಯವಾಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಬಳಕೆ ಹೆಚ್ಚಾಗಿರುತ್ತದೆ ಎಂದು 23ನೇ ವಾರ್ಡ್ ನಿವಾಸಿಗಳಾದ ಮಹಾಲಕ್ಷ್ಮೀ, ಸುಜಾತ, ಸರಳಮ್ಮ, ಬಾಬು, ಬಾಷಾ ಆರೋಪಿಸಿದ್ದಾರೆ.
ದೂರು ಬಂದರೆ ಮಾತ್ರ ರಿಪೇರಿ
ಇರುವ 6 ಶುದ್ಧ ನೀರಿನ ಘಟಕಗಳಲ್ಲಿ 5 ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಗಮನಕ್ಕಿದೆ. ಆದರೆ, ಸಾರ್ವಜನಿಕರಿಂದ ಯಾವುದೇ ದೂರು ಬಂದಿಲ್ಲ ಎಂಬ ಒಂದೇ ಕಾರಣಕ್ಕೆ ಇಲಾಖೆ ಅಧಿಕಾರಿಗಳು ಸ್ಥಗಿತಕೊಂಡ ಘಟಕಗಳ ದುರಸ್ತಿ ಕುರಿತು ತಲೆಕೆಡಿಸಿಕೊಂಡಿಲ್ಲ ಎಂಬುದು ಆಶ್ಚರ್ಯವಾದರೂ ಸತ್ಯ.
ನಗರದಲ್ಲಿ ಒಟ್ಟು 6 ಶುದ್ಧ ಕುಡಿಯುವ ನೀರನ ವ್ಯಕ್ತಪಡಿಸಿದ್ದಾರೆ. ಘಟಕಗಳಿದ್ದು, ಇದರಲ್ಲಿ 5 ಬೋರ್ ನೀರಿನ ಕೊರತೆಯಿಂದ ಸ್ಥಗಿತಗೊಂಡಿವೆ. ನಗರಸಭೆ ವತಿಯಿಂದ ಯಾವುದೇ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿಲ್ಲ.
ಗಂಗಾಧರಗೌಡ, ಎಇಇ ನಗರಸಭೆ
ಈ ಹಿಂದೆ ನಗರದಲ್ಲಿ ಸರ್ಕಾರದಿಂದ 6 ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದೆ. ಇವುಗಳಲ್ಲಿ 5 ಘಟಕಗಳು
ಕಾರ್ಯನಿರ್ವಹಿಸುತ್ತಿಲ್ಲ, ಈ ಬಗ್ಗೆ ಸಾರ್ವಜನಿಕರಿಂದ ಯಾವುದೇ ದೂರು ನಮ್ಮ ಇಲಾಖೆಗೆ ಬಂದಿಲ್ಲ, ದೂರು ನೀಡಿದರೆ
ಪರಿಶೀಲಿಸಲಾಗುವುದು.
ರವೀಂದ್ರ ನಾಯ್ಕ, ಎಇಇ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
*ಆರ್.ಬಸವರೆಡ್ಡಿ ಕರೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.