Dandeli: ಈ ಬಾರಿ ಉತ್ತರಕನ್ನಡ ಜಿಲ್ಲೆಯಿಂದಲೇ ಬದಲಾವಣೆ ಆರಂಭ: ಮೋಹನ್ ಹಲವಾಯಿ ವಿಶ್ವಾಸ
Team Udayavani, Mar 30, 2024, 6:02 PM IST
ದಾಂಡೇಲಿ : ಜಿಲ್ಲೆಯಲ್ಲಿ ಐದು ಕಾಂಗ್ರೆಸ್ ಶಾಸಕರಿದ್ದು, ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದ್ದು, ಈ ಬಾರಿ ಉತ್ತರಕನ್ನಡ ಜಿಲ್ಲೆಯಿಂದಲೇ ಬದಲಾವಣೆ ಆರಂಭ ಎಂದು ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ ಹಲವಾಯಿಯವರು ಹೇಳಿದರು.
ಅವರು ಇಂದು ಶನಿವಾರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರ ಗೆಲುವಿನ ಮೂಲಕ ಕೆನರಾ ಲೋಕಸಭಾ ಕ್ಷೇತ್ರ ಮರಳಿ ಕಾಂಗ್ರೆಸ್ ತೆಕ್ಕೆಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳು ಹಾಗೂ ಕೇಂದ್ರದ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗಲಿದೆ. ನಮ್ಮ ನಾಯಕ ಅರ್.ವಿ.ದೇಶಪಾಂಡೆಯವರ ಮಾರ್ಗದರ್ಶನದಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ನಾವೆಲ್ಲರೂ ಒಂದಾಗಿ ಶ್ರಮಿಸುತ್ತೇವೆ. ಮಾ:31 ರಂದು ಸಂಜೆ ಪಕ್ಷದ ಮುಖಂಡರ, ಕಾರ್ಯಕರ್ತರ ಸಭೆಯು ನಗರದ ಕಾರ್ಮಿಕ ಭವನದಲ್ಲಿ ನಡೆಯಲಿದ್ದು, ಈ ಸಭೆಯಲ್ಲಿ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹಾಗೂ ನಾಯಕರಾದ ಆರ್.ವಿ.ದೇಶಪಾಂಡೆಯವರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ಸಿಗೊಳಿಸುವಂತೆ ಮೋಹನ ಹಲವಾಯಿಯವರು ಕರೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯೆ ಯಾಸ್ಮಿನ್ ಕಿತ್ತೂರು, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಕರಿಂ ಅಜ್ರೇಕರ, ಆರ್.ಪಿ.ನಾಯ್ಕ, ಸಾಧಿಕ್ ಮುಕಾಶಿ, ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಪೂಜಾರ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಬಂದಂ, ಯುವ ಕಾಂಗ್ರೆಸ್ ಅಧ್ಯಕ್ಷ ಉಸ್ಮಾನ್ ಮುನ್ನಾ ವಹಾಬ್, ಪಕ್ಷದ ಮುಖಂಡರುಗಳಾದ ದಾದಾಪೀರ್ ನದೀಮುಲ್ಲಾ, ಬಸೀರ್ ಗಿರಿಯಾಳ, ಅನಿಲ್ ದಂಡಗಲ್, ದಿವಾಕರ ನಾಯ್ಕ,ರಿಯಾಜ್ ಬಾಬು ಸೈಯದ್, ರಫೀಕ್ ಖಾನ್, ರಾಮಲಿಂಗ ಜಾಧವ್, ಪ್ರತಾಪ್ ಸಿಂಗ್ ರಜಪೂತ್, ಅಡಿವೆಪ್ಪ ಭದ್ರಕಾಳಿ, ಪ್ರಭುದಾಸ ಎನಿಬೇರಾ, ಜಾಫರ್ ಮಸನಗಟ್ಟಿ, ಕಿರಣ್ ಸಿಂಗ್ ರಜಪೂತ, ಸದ್ದಾಂ ಬಾಳೆಕುಂದ್ರಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.