Kasaragod: ರಿಯಾಸ್‌ ಮೌಲವಿ ಕೊಲೆ ಪ್ರಕರಣ; ಆರೋಪಿಗಳ ಖುಲಾಸೆ


Team Udayavani, Mar 30, 2024, 7:20 PM IST

Kasaragod: ರಿಯಾಸ್‌ ಮೌಲವಿ ಕೊಲೆ ಪ್ರಕರಣ; ಆರೋಪಿಗಳ ಖುಲಾಸೆ

ಕಾಸರಗೋಡು: ಕೋಲಾಹಲ ಸೃಷ್ಟಿಸಿದ ಕಾಸರಗೋಡು ಹಳೇ ಸೂರ್ಲಿನ ಮದ್ರಸಾ ಅಧ್ಯಾಪಕ ಮೂಲತಃ ಕೊಡಗು ನಿವಾಸಿ ಮೊಹಮ್ಮದ್‌ ರಿಯಾಸ್‌ ಮೌಲವಿ (28) ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ಕಾಸರಗೋಡು ಪ್ರಿನ್ಸಿಪಲ್‌ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.

2017ರ ಮಾರ್ಚ್‌ 20ರಂದು ರಾತ್ರಿ ಹಳೇ ಸೂರ್ಲಿನ ಬಳಿಯಿರುವ ಅವರ ಕೊಠಡಿಗೆ ನುಗ್ಗಿ ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದರು. ಕೇಳುಗುಡ್ಡೆ ಪರಿಸರ ನಿವಾಸಿ ನಿತಿನ್‌ (26), ಕೇಳುಗುಡ್ಡೆ ಗಂಗೆ ಕುಟೀರದ ಅಖೀಲೇಶ್‌ ಆಲಿಯಾಸ್‌ ಅಖೀಲ್‌ (32) ಮತ್ತು ಕೇಳುಗುಡ್ಡೆ ಅಯ್ಯಪ್ಪ ಭಜನ ಮಂದಿರ ಸಮೀಪದ ಅಜೇಶ್‌ ಆಲಿಯಾಸ್‌ ಅಪ್ಪು (27) ಆರೋಪಿಗಳಾಗಿದ್ದರು.

ವಿಚಾರಣೆಯ ಸಂದರ್ಭದಲ್ಲಿ ಪ್ರಾಸಿಕ್ಯೂಶನ್‌ ಪರವಾಗಿ 97 ಮಂದಿಯ ಸಾಕ್ಷಿ ಹೇಳಿಕೆಗಳನ್ನು ನ್ಯಾಯಾಲಯ ದಾಖಲಿಸಿತ್ತು. ಬಂಧಿತರಾದ ಮೂವರು ಆರೋಪಿಗಳಿಗೆ ಜಾಮೀನು ಲಭಿಸದೆ ಆರು ವರ್ಷಗಳಿಂದ ಜೈಲಿನಲ್ಲೇ ಕಳೆದಿದ್ದರು. ಜ್ಯುಡೀಷಿಯಲ್‌ ಕಸ್ಟಡಿಯಲ್ಲೇ ಅವರ ವಿಚಾರಣೆ ನಡೆಸಲಾಗಿತ್ತು.

ಅಂದು ಕಣ್ಣೂರು ಕ್ರೈಂ ಬ್ರಾಂಚ್‌ ಎಸ್‌ಪಿಯಾಗಿದ್ದ ಡಾ| ಎ. ಶ್ರೀನಿವಾಸ್‌ ನೇತೃತ್ವದ ವಿಶೇಷ ತನಿಖಾ ತಂಡ ಆರೋಪಿಗಳನ್ನು ಕೃತ್ಯ ನಡೆದ ಮೂರೇ ದಿನಗಳಲ್ಲಿ ಬಂಧಿಸಿತ್ತು. ಬಳಿಕ 88 ದಿನಗಳೊಳಗಾಗಿ ತನಿಖೆಯನ್ನು ಮುಗಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಆರೋಪಿಗಳು ಕೋಮು ಗಲಭೆ ಸೃಷ್ಟಿಸುವ ಉದ್ದೇಶ ಹೊಂದಿದ್ದರೆಂದು ಪೊಲೀಸರು ತಿಳಿಸಿದ್ದರು.

ಪ್ರಾಸಿಕ್ಯೂಷನ್‌ ಪರವಾಗಿ ಮೊದಲು ಸ್ಪೆಷಲ್‌ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೋಯಿಕ್ಕೋಡ್‌ನ‌ ಎಂ. ಅಶೋಕನ್‌ ವಾದಿಸಿದ್ದರು. ಆದರೆ ಅವರು ಇತ್ತೀಚೆಗೆ ನಿಧನ ಹೊಂದಿದ್ದ ಕಾರಣ ಅವರ ಸಹಾಯಕ ವಕೀಲ ಕೋಯಿಕ್ಕೋಡ್‌ನ‌ ಟಿ. ಶಿಜಿತ್‌ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ವಾದ ಮುಂದುವರಿಸಿದ್ದರು. 2019ರಲ್ಲೇ ಪ್ರಕರಣದ ವಿಚಾರಣೆ ಆರಂಭಗೊಂಡಿದ್ದರೂ ವಿವಿಧ ಕಾರಣಗಳಿಂದಾಗಿ ಪದೇಪದೆ ಮುಂದೂಡಲ್ಪಟ್ಟಿತ್ತು. ಕೊಲೆಗೆ ಬಳಸಲಾದ ಆಯುಧಗಳು ಸಹಿತ 45ರಷ್ಟು ವಸ್ತು ಪುರಾವೆಗಳು ಸೇರಿದಂತೆ ಒಟ್ಟು 215 ಪುರಾವೆಗಳನ್ನು ತನಿಖಾ ತಂಡ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಇದರಲ್ಲಿ ವೈಜ್ಞಾನಿಕ ಹಾಗೂ ಇತರ ಹಲವು ಪುರಾವೆಗಳೂ ಇದ್ದವು.

ಪೊಲೀಸ್‌ ಕಟ್ಟೆಚ್ಚರ:

ಕೊಡಗು ನಿವಾಸಿ ಮೊಹಮ್ಮದ್‌ ರಿಯಾಸ್‌ ಮೌಲವಿ ಕೊಲೆ ಪ್ರಕರಣದ ತೀರ್ಪು ಘೋಷಣೆ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ರಜೆಯಲ್ಲಿರುವ ಎಲ್ಲ ಪೊಲೀಸರನ್ನು ಕರ್ತವ್ಯಕ್ಕೆ ಕರೆಸಿಕೊಳ್ಳಲಾಗಿದೆ. ಎಲ್ಲ ಸೂಕ್ಷ್ಮ ಸಂವೇದಿ ಪ್ರದೇಶಗಳಲ್ಲಿ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ಟಾಪ್ ನ್ಯೂಸ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.