Kadaba; ಕಾಂಗ್ರೆಸ್ ಸಭೆಯಲ್ಲಿ ಗದ್ದಲ: ಸಭೆಯಿಂದ ನಿರ್ಗಮಿಸಿದ ಮುಸ್ಲಿಂ ಮುಖಂಡರು
Team Udayavani, Mar 31, 2024, 6:56 AM IST
ಕಡಬ: ಪ್ರಮುಖ ಸ್ಥಾನಮಾನಗಳನ್ನು ನೀಡುವ ವೇಳೆ ಮುಸ್ಲಿಂ ಸಮುದಾಯವನ್ನು ಅವಗಣಿಸಲಾಗಿದೆ ಎಂದು ಮುಸ್ಲಿಂ ಮುಖಂಡರು ಶನಿವಾರ ಜರಗಿದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಪಕ್ಷದಲ್ಲಿ ತಮ್ಮ ಸಮುದಾಯದ ಮುಖಂಡರನ್ನು ಅವಗಣಿಸಲಾಗಿದೆ ಎಂದು ಸಭೆ ಆರಂಭವಾಗುವ ಮುನ್ನ ಜಿಲ್ಲಾ ಮುಖಂಡರ ಜತೆೆ ಮುಸ್ಲಿಂ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ಆ ವೇಳೆ ಸಭಾಂಗಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ 5 ಲಕ್ಷ ಮಂದಿ ನಮ್ಮ ಸಮುದಾಯದವರಿದ್ದಾರೆ. ಹಿಂದಿನಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದರೂ, ನಮ್ಮ ಮುಖಂಡರಿಗೆ ಯಾವುದೇ ಪ್ರಮುಖ ಸ್ಥಾನಮಾನ ಸಿಗುತ್ತಿಲ್ಲ. ಕೇವಲ ಮತಯಾಚನೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಕೆಲವು ಮುಸ್ಲಿಂ ಸಮುದಾಯದ ಕಾರ್ಯಕರ್ತರು ಆಕ್ರೋಶವ್ಯಕ್ತಪಡಿಸಿದರು.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ, ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ಹಾಗೂ ಇತರ ಮುಖಂಡರು ಮನವೊಲಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಬದಲಾಗಿ ತಮಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟಿಸಿ ಮುಸ್ಲಿಂ ಸಮುದಾಯದ ಪ್ರಮುಖರಾದ ಅಶ್ರಫ್ ಶೇಡಿಗುಂಡಿ, ಕೆ.ಎಂ.ಹನೀಫ್, ಫಝಲ್ ಕೋಡಿಂಬಾಳ, ಎ.ಎಸ್.ಶರೀಫ್, ಶಾಕಿರ್ ಪಿಲ್ಯ ಮುಂತಾದವರ ನೇತೃತ್ವದಲ್ಲಿ ಹಲವು ಮಂದಿ ಮುಸ್ಲಿಂ ಸಮುದಾಯದವರು ಸಭಾಂಗಣದಿಂದ ಹೊರನಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.