Belagavi: ಹಿಂಡಲಗಾ ಕೇಂದ್ರ ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ
Team Udayavani, Mar 31, 2024, 10:51 AM IST
ಬೆಳಗಾವಿ: ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ 150 ಪೊಲೀಸರು ಮಾ.31ರ ರವಿವಾರ ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದರು.
ಹಿಂಡಲಗಾ ಜೈಲಿಗೆ ಆಗಮಿಸಿದ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ನೇತೃತ್ವದಲ್ಲಿ150 ಪೊಲೀಸರು ದಾಳಿ ನಡೆಸಿ ತಪಾಸಣೆ ಮಾಡಿದರು.
ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಿಂಡಲಗಾ ಜೈಲಿನ ಮೇಲೆ ಕಮೀಷನರ್ ಮಾರ್ಗದರ್ಶನದಲ್ಲಿ ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಬೆಳಂಬೆಳಗ್ಗೆ ನಡೆದಿದೆ.
ಡಿಸಿಪಿಗೆ ನಗರದ 5 ವಿಭಾಗದ ಎಸಿಪಿಗಳು ಸಾಥ್ ನೀಡಿದರು. ಎರಡೂವರೆ ಗಂಟೆಗಳ ಕಾಲ ಜೈಲಿನಲ್ಲಿ ತಪಾಸಣೆ ನಡೆಸಲಾಯಿತು. ಈ ಹಿಂದೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕಿರಿಗೆ ಬೆಳಗಾವಿ ಹಿಂಡಲಗಾ ಜೈಲಿನಿಂದ ಜೀವ ಬೆದರಿಕೆ ಕರೆ ಮಾಡಿದ್ದ ಆರೋಪವೂ ಇದೆ.
ಡಿಸಿಪಿ ರೋಹನ್ ಜಗದೀಶ್ ಮಾತನಾಡಿ, ನಮ್ಮ ಎಸಿಪಿಗಳು ಐದು ಜನ ಇನ್ಸ್ಪೆಕ್ಟರ್ 150 ಸಿಬ್ಬಂದಿಗಳು ತಪಾಸಣೆ ಮಾಡಿದ್ದೇವೆ. ಶ್ವಾನದಳದೊಂದಿಗೆ ಬಂದು ಇಡೀ ಜೈಲು ತಪಾಸಣೆ ಮಾಡಿದ್ದೇವೆ. ಜೈಲಿನೊಳಗೆ ವಾಸ್ತವತೆ ಏನಿದೆ ಎಂದು ತಿಳಿಯಲು ತಪಾಸಣೆ ಮಾಡಿದ್ದೇವೆ. ತಂಬಾಕು, ಬೀಡಿ ಸಿಗರೇಟು ಸಣ್ಣ ಪುಟ್ಟ ಚಾಕಗಳು ಒಳಗಡೆ ಸಿಕ್ಕಿವೆ. ಭದ್ರತೆ ಇದ್ದರೂಒಳಗೆ ಇಂಥವೆಲ್ಲ ಏಕೆ ಹೋಗ್ತಿದೆ ತನಿಖೆ ಮಾಡಬೇಕಾಗಿದೆ. ಸದ್ಯಕ್ಕೆ ಮೊಬೈಲ್ ಗಳು ಯಾವುದೇ ಸಿಕ್ಕಿಲ್ಲ ಮೊಬೈಲ್ ಚಾರ್ಜರ್ಗಳು ಸಿಕ್ಕಿವೆ. ಬ್ಲೂಟೂತ್ ಡಿವೈಸ್ ಗಳು ಸಿಕ್ಕಿವೆ ಅದನ್ನ ನಮ್ಮ ವಶಕ್ಕೆ ತೆಗೆದುಕೊಂಡಿದ್ದೆವೆ ಎಂದು ರೋಹನ್ ಜಗದೀಶ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.