ಪತಿಯನ್ನು ಕೊಂದವರಿಗೆ 50,000 ರೂ. ನೀಡುತ್ತೇನೆ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ ಪತ್ನಿ
Team Udayavani, Mar 31, 2024, 3:42 PM IST
ಲಕ್ನೋ: ತನ್ನ ಪತಿಯನ್ನು ಕೊಂದವರಿಗೆ 50,000 ರೂಪಾಯಿ ಬಹುಮಾನವನ್ನು ನೀಡುವುದಾಗಿ ಪತ್ನಿಯೊಬ್ಬಳು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಘೋಷಿಸಿದ್ದಾಳೆ ಎಂದು ಪತಿ ಆರೋಪಿಸಿ ದೂರು ದಾಖಲಿಸಿರುವ ಘಟನೆ ಆಗ್ರಾದ ಬಹ್ ಜಿಲ್ಲೆಯಲ್ಲಿ ನಡೆದಿದೆ.
ಪತ್ನಿ ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿದ ಬಳಿಕ, ಪತ್ನಿಯ ಸ್ನೇಹಿತರೊಬ್ಬರಿಂದ ಬೆದರಿಕೆಯ ಕರೆಯೊಂದು ಬಂದ ಬಳಿಕ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನಲ್ಲಿ ಏನಿದೆ?:
ಜುಲೈ 9, 2022 ರಂದು ಮಧ್ಯಪ್ರದೇಶದ ಭಿಂಡ್‌ನ ಹಳ್ಳಿಯೊಂದರ ಮಹಿಳೆಯನ್ನು ನಾನು ವಿವಾಹವಾದೆ. ಸ್ವಲ್ಪ ಸಮಯದ ನಂತರ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯಗಳು ಉಂಟಾಯಿತು. ಐದು ತಿಂಗಳ ನಂತರ ಡಿಸೆಂಬರ್ 2022 ರಲ್ಲಿ, ಪತ್ನಿ ಬಹ್‌ನಲ್ಲಿರುವ ನನ್ನ ಮನೆಯನ್ನು(ಗಂಡನ ಮನೆ) ತೊರೆದು ತನ್ನ ಹೆತ್ತವರ ಮನೆಗೆ ಹಿಂದಿರುಗಿದಳು. ಅಂದಿನಿಂದ ಆಕೆ ತನ್ನ ಪೋಷಕರೊಂದಿಗೆ ನೆಲೆಸಿದ್ದಾಳೆ.
ಡಿಸೆಂಬರ್ 21, 2023 ರಂದು ಭಿಂಡ್‌ನಿಂದ ಹಿಂದಿರುಗುತ್ತಿದ್ದಾಗ ಅತ್ತೆ ಮನೆಯವರು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಇದಾದ ಕೆಲವೇ ದಿನಗಳಲ್ಲಿ ನನ್ನ ಪತ್ನಿ ತನ್ನ ಪತಿಯನ್ನು ಕೊಲ್ಲುವ ವ್ಯಕ್ತಿಗೆ 50,000 ರೂ. ಬಹುಮಾನ ನೀಡುವುದಾಗಿ ವಾಟ್ಸಾಪ್ ಸ್ಟೇಟಸ್ ನ್ನು ಹಂಚಿಕೊಂಡಿದ್ದಾಳೆ ಎಂದು ದೂರಿನಲ್ಲಿ ಪತಿ ಹೇಳಿದ್ದಾರೆ.
ಪಕ್ಕದ ಮನೆಯಲ್ಲಿ ವಾಸವಾಗಿರುವ ಬಾಡಿಗೆದಾರನ ಜತೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ. ಅವರ ಮದುವೆಯ ಆರಂಭದಿಂದಲೂ ಎಲ್ಲಾ ವಿವಾದಗಳಿಗೆ ಏಕೈಕ ಕಾರಣ ಈ ಅಕ್ರಮ ಸಂಬಂಧ ಎಂದು ಅವರು ಹೇಳಿದ್ದಾರೆ.
“ಆಕೆಯ ಪ್ರಿಯಕರ ಕೂಡ ದೂರವಾಣಿ ಕರೆ ಮೂಲಕ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಅವರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.
ಇದೀಗ ದೂರು ಬಂದ ಬಳಿಕ ಮಹಿಳೆ ಭಿಂಡ್‌ನ ಪೊಲೀಸ್ ಠಾಣೆಯಲ್ಲಿ ಜೀವನಾಂಶ ದಾವೆ ಹೂಡಿದ್ದಾರೆ. ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಬಹ್ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.