38 ಸ್ಥಾನ ಗೆದ್ದವರಿಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದು ವಿಷವೇ?: ಡಿಕೆಶಿ
Team Udayavani, Mar 31, 2024, 11:24 PM IST
ಬೆಂಗಳೂರು: ಕೇವಲ 38 ಸ್ಥಾನ ಗೆದ್ದವರಿಗೆ ಐದು ವರ್ಷ ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದು ವಿಷವೇ? ಅವರಿಗೆ ಹೆಗಲುಗೊಟ್ಟು ಹಗಲಿರುಳು ಹೋರಾಡಿದ್ದು ವಿಷವೇ? ಅಮೃತ ಕೊಟ್ಟವರಿಗೆ ವಿಷ ಕೊಟ್ಟರು ಎನ್ನುತ್ತಾರೆ. ನಾವೆಲ್ಲಿ ಬೆನ್ನಿಗೆ ಚೂರಿ ಹಾಕಿದ್ದೇವೆ? ನಾನು ಏನು ಮಾಡಿದ್ದೇನೆ ಎಂಬುದು ಜೆಡಿಎಸ್ ಕಾರ್ಯಕರ್ತರಿಗೆ ಗೊತ್ತಿದೆ…
-ಜೆಡಿಎಸ್ ನಾಯಕರ ಬೆನ್ನಿಗೆ ಚೂರಿ ಹಾಕಿದರು ಎಂಬ ಆರೋಪಕ್ಕೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ಇದು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರಕಾರವನ್ನು ಬೀಳಿಸಿದ ಬಿಜೆಪಿ ನಾಯಕರ ಜತೆಗೆ ತಬ್ಟಾಡುತ್ತಿದ್ದಾರೆ. ಇದನ್ನು ಆ ಮತದಾರರೇ ತೀರ್ಮಾನ ಮಾಡಬೇಕು ಎಂದರು.
ಜೆಡಿಎಸ್ ಕಾರ್ಯಕರ್ತರು ಅತಂತ್ರ ಸ್ಥಿತಿ ತಲುಪಿದ್ದಾರೆ. ಅಲ್ಲಿನ ಜನಕ್ಕೆ ಡಿ.ಕೆ.ಸುರೇಶ್ ಏನು ಎಂಬುದು ಗೊತ್ತಿದೆ. ಅಮಿತ್ ಶಾ ಬಂದರೆ ಬಲ ಬರಬಹುದು ಎಂದು ಮಾಡುತ್ತಿದ್ದಾರೆ.
ಇಬ್ಬರೂ ಸೇರಿ ಕಾರ್ಯಕರ್ತರ ಸಭೆ ಯಾಕೆ ಮಾಡಲಿಲ್ಲ? ಇವರಿಬ್ಬರೂ ಒಂದಾದ ತತ್‌ಕ್ಷಣ ಕಾರ್ಯಕರ್ತರು ಒಂದಾಗುತ್ತಾರಾ? ರಾಮನಗರ ಹಾಗೂ ಮಂಡ್ಯ ಜಿಲ್ಲೆ ರಾಜಕಾರಣ ನೋಡಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ ಬಾರಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಡಿದ ಮಾತು, ಹೇಳಿದ ವಿಚಾರ, ನಡೆದುಕೊಂಡ ರೀತಿ ನೋಡಿದರೆ ಈಗ ಪರಿಸ್ಥಿತಿ ಬದಲಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ನಿಖೀಲ್ ಪರ ಪ್ರಚಾರ ಮಾಡುವಂತೆ ಚಲುವರಾಯಸ್ವಾಮಿಗೆ ಆಹ್ವಾನ ನೀಡಿ ಎಂದು ಹೇಳಿದೆ. ಅನಿತಾ ಕುಮಾರಸ್ವಾಮಿ ಕೂಡ ಚಲುವರಾಯಸ್ವಾಮಿ ಮನೆಗೆ ಹೋಗಲು ಸಿದ್ಧರಿದ್ದರು. ಆದರೆ ಕುಮಾರಸ್ವಾಮಿ ಅವರು ಚಲುವರಾಯಸ್ವಾಮಿ ಮನೆಗೆ ಹೋಗುವುದು ಬೇಡ ಎಂದಿದ್ದರು. ಈಗ ಕುಮಾರಸ್ವಾಮಿ ಎಲ್ಲರ ಮನೆಗೆ ಹೋಗಲು ಸಿದ್ಧ ಎಂದು ಹೇಳುತ್ತಿದ್ದಾರೆ. ಅವರಲ್ಲಿ ಆಗಿರುವ ಪರಿವರ್ತನೆಯಿಂದ ಬಹಳ ಸಂತೋಷವಾಗಿದೆ ಎಂದು ಹೇಳಿದರು.
ಬಿಜೆಪಿ ದುರ್ಬಲ ತಂತ್ರಗಾರಿಕೆ
ಬಿಜೆಪಿ ಈಗ ಗೊಂದಲದ ಗೂಡಾಗಿದೆ. ಸದಾನಂದ ಗೌಡ, ನಳಿನ್ ಕುಮಾರ್ ಕಟೀಲು, ಪ್ರತಾಪಸಿಂಹ ಸಹಿತ ನಮ್ಮ ವಿರುದ್ಧ ಹೋರಾಟ ಮಾಡಿದವರನ್ನು ಏಕಾಏಕಿ ಕೈಬಿಟ್ಟಿದ್ದಾರೆ. 40 ವರ್ಷ ರಾಜಕಾರಣ ಮಾಡಿಕೊಂಡು ಬಂದವರನ್ನು ಈ ರೀತಿ ಕೈಬಿಟ್ಟರೆ ಹೇಗೆ? ಬಿಜೆಪಿ ದುರ್ಬಲ ತಂತ್ರಗಾರಿಕೆ ಮಾಡಿದೆ. ನಮ್ಮ ಪಕ್ಷ ಭವಿಷ್ಯದಲ್ಲಿ 30-40 ವರ್ಷಗಳ ಕಾಲ ರಾಜಕಾರಣ ಮಾಡಬಲ್ಲ ಯುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ಇವರು ರಾಜಕೀಯವಾಗಿ ಪಕ್ಷಕ್ಕೆ ಅಡಿಪಾಯ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಪ್ಪ-ಮಗಳನ್ನು ದೂರ ಮಾಡಿದ ಅಪವಾದ ಬೇಡ
ನಿಶಾ ಯೋಗೇಶ್ವರ ನಮ್ಮ ಮನೆ ಮಗಳಂತೆ. ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ರಾಜಕೀಯಕ್ಕೆ ಅಪ್ಪ-ಮಗಳನ್ನು ದೂರ ಮಾಡಿದ ಅಪವಾದ ಬೇಡ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಆಕೆ ವಿವಾಹವಾಗಿ ಬೇರೆ ಕುಟುಂಬಕ್ಕೆ ಸೇರಿದ್ದರೆ ನಾವು ಇಷ್ಟು ಆಲೋಚನೆ ಮಾಡುತ್ತಿರಲಿಲ್ಲ. ಹೀಗಾಗಿ ನಾನು, ನನ್ನ ಸಹೋದರ ಈ ವಿಚಾರವಾಗಿ ಬಹಳ ತಾಳ್ಮೆಯಿಂದ ಆಲೋಚನೆ ಮಾಡುತ್ತಿದ್ದೇವೆ. ನಿಶಾ ದೊಡ್ಡ ಧೈರ್ಯ ಮಾಡಿರುವಂತೆ ಕಾಣು
ತ್ತಿದೆ. ಕಾಂಗ್ರೆಸ್‌ನಲ್ಲೇ ಕೆಲಸ ಮಾಡುತ್ತೇನೆ ಎಂದು ಆಕೆ ತೀರ್ಮಾನಿಸಿದರೆ ಆಕೆಯನ್ನು ಹೊರದಬ್ಬಲು ಆಗುವುದಿಲ್ಲ. ಹೀಗಾಗಿ ಸ್ಥಳೀಯ ನಾಯಕರ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.