![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 1, 2024, 4:25 PM IST
ಕೊಪ್ಪಳ: ದೇಶಕ್ಕೆ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಲು ಕ್ಷೇತ್ರದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುವೆ ಎಂದು ಬಿಜೆಪಿ ಟಿಕೆಟ್ ವಂಚಿತ ಸಂಸದ ಸಂಗಣ್ಣ ಕರಡಿ ಅವರು ಹೇಳಿದರು.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ನಾಯಕರ ಮೇಲೆ ಭರವಸೆ ಇಟ್ಟುಕೊಂಡು ಪ್ರಚಾರಕ್ಕೆ ಹೋಗುತ್ತಿದ್ದೇನೆ. ಕುಷ್ಟಗಿಯಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗುತ್ತೇನೆ. ನನಗೆ ಟಿಕೆಟ್ ಕೈತಪ್ಪಿದ್ದರ ಬಗ್ಗೆ ಮರುಪರಿಶೀಲನೆ ಮಾಡಬೇಕು, ರಾಜ್ಯಸಭಾ ಸದಸ್ಯತ್ವ ನೀಡಬೇಕು. ವಿಧಾನಪರಿಷತ್ ಸದಸ್ಯತ್ವ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದರು. ಈ ನಂತರದಲ್ಲಿ ಎರಡು ಬಾರಿ ಮುಖಂಡರು ಸಭೆ ನಡೆಸಿದ್ದಾರೆ. ರಾಜ್ಯಕ್ಕೆ ಅಮಿತ್ ಶಾ ಬರಲಿದ್ದಾರೆ. ಅವರೊಂದಿಗೆ ಮಾತನಾಡುತ್ತೇನೆ ಎಂದು ವರಿಷ್ಠರು ಹೇಳಿದ್ದಾರೆ. ನನಗೆ ಭರವಸೆ ಇದೆ. ಭರವಸೆಯ ಮೇಲೆ ಜೀವನ ನಡೆಸಬೇಕು ಎಂದರು.
ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ನಾನು ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇನೆ. ನಾನು ಪ್ರಚಾರ ಮಾಡುವುದನ್ನು ಎದೆಬಗೆದು ತೋರಿಸಲು ಆಗುವುದಿಲ್ಲ. ಈ ಬಾರಿ ಹಲವು ಸಂಸದರಿಗೆ ಟಿಕೆಟ್ ತಪ್ಪಿಸಲಾಗಿದೆ. ಯುವಕರಿಗೆ ಟಿಕೆಟ್ ನೀಡಬೇಕು. ಯುವಕರಿಗೆ ಅವಕಾಶ ನೀಡಬೇಕೆಂಬ ಕಾರಣಕ್ಕೆ ಹೈಕಮಾಂಡ್ ತೀರ್ಮಾನಿಸಿರಬಹುದು. ನಾನು ಸಂಪೂರ್ಣವಾಗಿ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ. ಟಿಕೆಟ್ ವಂಚಿತವಾದ ನಂತರ ಸಹಜವಾಗಿ ಕಾಂಗ್ರೆಸ್ ಪಕ್ಷದವರು ಮಾತನಾಡಿದ್ದಾರೆ. ಆದರೆ ನಾನು ಈಗ ಬಿಜೆಪಿಯಲ್ಲಿಯೇ ಇದ್ದು ಪ್ರಚಾರ ಮಾಡುತ್ತೇನೆ ಎಂದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.