Kannada Cinema: ‘ಸಿಂಹದ ಗುಹೆ’ ಮರ್ಡರ್ ಮಿಸ್ಟ್ರಿ
Team Udayavani, Apr 1, 2024, 6:12 PM IST
‘ಸಿಂಹದ ಗುಹೆ’ ಎಂಬ ಸಿನಿಮಾವೊಂದು ಆರಂಭವಾಗಿದೆ. ಎಸ್ಜಿಆರ್ ಈ ಸಿನಿಮಾದ ನಿರ್ದೇಶಕರು. ಚಿತ್ರದಲ್ಲಿ ರವಿ ಶಿರೂರು, ನಿವಿಷ್ಕಾ ಪಾಟೀಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರದ ಬಗ್ಗೆ ಮಾತನಾಡುವ ಎಸ್ ಜಿಆರ್,”ಇದೊಂದು ಸಸ್ಪೆನ್ಸ್, ಕ್ರೈಂ, ಮರ್ಡರ್ ಮಿಸ್ಟ್ರಿ ಸಿನಿಮಾ. ಜಾಗರಹಳ್ಳಿ ಎಂಬ ಊರಿನ ಮನೆಯೊಂದರ ಮುಂದೆ ಬಹುತೇಕ ಚಿತ್ರದ ಕಥೆ ನಡೆಯುತ್ತದೆ. ಸಿಂಹಗುಹೆ ಎನ್ನುವುದು ಆ ಮನೆಯ ಹೆಸರು. ನಾಯಕ ಕೂಡ ವಿಷ್ಣು ಅಭಿಮಾನಿ. ಹಾಸನ, ಸಕಲೇಶಪುರ, ಮೂಡಿಗೆರೆ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಿದ್ದೇವೆ. ನನ್ನ ಹಿಂದಿನ ಚಿತ್ರಗಳಿಗೆ ಕೆಲಸಮಾಡಿದ ಮಹೇಂದರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮೇ ಅಥವಾ ಜುಲೈ ಮೊದಲ ವಾರ ಸಿನಿಮಾ ಬಿಡುಗಡೆ ಮಾಡುವ ಯೋಚನೆ ಇದೆ’ ಎಂದರು.
ನಾಯಕ ರವಿ ಶಿರೂರ್ ಕೂಡಾ ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. “ಅಭಿನಯ ದೊಂದಿಗೆ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದೇನೆ. ಹಳ್ಳಿಯಲ್ಲಿ ಟ್ಯಾಂಕರ್ ಓಡಿಸಿಕೊಂಡಿರುವ ಹುಡುಗನ ಪಾತ್ರ ನನ್ನದು. ಆ ಹಳ್ಳಿಯಲ್ಲಿ ಒಂದು ಮರ್ಡರ್ ನಡೆದಾಗ ಅದು ಈ ಹುಡುಗನನ್ನು ಹೇಗೆ ಎಲ್ಲೆಲ್ಲಿಗೆ ಕರೆದುಕೊಂಡು ಹೋಯಿತು ಎಂಬುದನ್ನು ಚಿತ್ರದ ಮೂಲಕ ಹೇಳಿದ್ದೇವೆ’ ಎನ್ನುವುದು ರವಿ ಮಾತು.
ಚಿತ್ರದಲ್ಲಿ ನಾಯಕಿಯಾಗಿರುವ ನಿವಿಶ್ಕಾ ಪಾಟೀಲ್, “ಇದೇ ನನ್ನ ಮೊದಲ ಚಿತ್ರ. ಇದರ ನಂತರ ನಾಲ್ಕು ಸಿನಿಮಾ ಆಯಿತು. ಹಾಗಾಗಿ ನನಗೆ ಈ ಚಿತ್ರ ತುಂಬಾ ಮುಖ್ಯ’ ಎಂದರು. ಮತ್ತೂಬ್ಬ ನಾಯಕಿ ಅನುರಾಧ ಕೂಡಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.
ಸಂಗೀತ ನಿರ್ದೇಶಕ ಸತೀಶ್ ಆರ್ಯನ್ ಮಾತನಾಡಿ, “ಚಿತ್ರದಲ್ಲಿ 4 ಹಾಡುಗಳಿವೆ. ನಾನೂ 2 ಹಾಡುಗಳನ್ನು ಹಾಡಿ ದ್ದೇನೆ’ ಎಂದರು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ನಟ ಅನಿರುದ್ಧ್ ಚಿತ್ರಕ್ಕೆ ಶುಭಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..
Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ
Seetha Payana: ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್ ಹೀರೋ
Chethan Kumar: ನಟ ಚೇತನ್ ವಿರುದ್ಧದ ವಾರಂಟ್ ಹಿಂಪಡೆದ ಕೋರ್ಟ್
Actor Darshan: ಅ.22ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.