Lok Sabha Poll:ಮುಜಾಫರ್ ಪುರ್ ಬಿಜೆಪಿ ಸಂಸದ ನಿಶಾದ್ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ
ಬಿಜೆಪಿ ನನ್ನ ಒಂದು ಮಾತು ಕೇಳದೇ ನನಗೆ ಟಿಕೆಟ್ ನಿರಾಕರಿಸಿದೆ
Team Udayavani, Apr 2, 2024, 5:11 PM IST
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ನಡುವೆಯೇ ಬಿಹಾರದ ಮುಜಾಫರ್ ಪುರ್ ಕ್ಷೇತ್ರದ ಸಂಸದ ಅಜಯ್ ನಿಶಾದ್ ಮಂಗಳವಾರ (ಏ.02) ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷದ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದು, ಬಿಜೆಪಿಗೆ ದೊಡ್ಡ ಹಿನ್ನಡೆಯಾದಂತಾಗಿದೆ.
ಇದನ್ನೂ ಓದಿ:Ram Navami: ಎರಡು ಐಪಿಎಲ್ ಪಂದ್ಯಗಳ ದಿನಾಂಕ ಬದಲಾವಣೆ ಮಾಡಿದ ಬಿಸಿಸಿಐ
2024ರ ಲೋಕಸಭಾ ಚುನಾವಣೆಯಲ್ಲಿ ನಿಶಾದ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು, ಅಸಮಾಧಾನಕ್ಕೆ ಕಾರಣವಾಗಿತ್ತು. ಬಿಜೆಪಿಯ ನಡವಳಿಕೆಯಿಂದ ಆಘಾತವಾಗಿದ್ದು, ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿರುವುದಾಗಿ ನಿಶಾದ್ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ರಾಜೀನಾಮೆ ನೀಡಿದ ಅಜಯ್ ನಿಶಾದ್ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. “ನಾನು ಕೆಲವರ ಅಹಂಕಾರವನ್ನು ಮುರಿಯಬೇಕಾಗಿದೆ. ಈ ಮೂಲಕ ನಾನು ನನ್ನ ಗೌರವವನ್ನು ಮರಳಿ ಪಡೆಯಬೇಕಾಗಿದೆ ಎಂದು ನಿಶಾದ್ ಹೇಳಿದರು.
ಸಾಯುವ ಕೊನೆಯ ಹಂತದಲ್ಲಿಯೂ ನಿನ್ನ ಕೊನೆಯ ಆಸೆ ಏನು ಅಂತ ಕೇಳುತ್ತಾರೆ. ಆದರೆ ಬಿಜೆಪಿ ನನ್ನ ಒಂದು ಮಾತು ಕೇಳದೇ ನನಗೆ ಟಿಕೆಟ್ ನಿರಾಕರಿಸಿದೆ. ನನಗೆ ಟಿಕೆಟ್ ಇಲ್ಲ ಎಂಬ ವಿಷಯ ಪತ್ರಿಕೆಯಲ್ಲಿ ಓದಿದ ನಂತರವೇ ತಿಳಿಯಿತು ಎಂದು ನಿಶಾದ್ ಅಸಮಾಧಾನ ಹೊರಹಾಕಿದ್ದಾರೆ.
2014ರಿಂದ ಮುಜಾಫರ್ ಪುರ್ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಅಜಯ್ ನಿಶಾದ್ ಸತತವಾಗಿ ಗೆಲುವು ಸಾಧಿಸಿದ್ದರು. 2014ರಲ್ಲಿ ನಿಶಾದ್ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಅಖಿಲೇಶ್ ಪ್ರಸಾದ್ ಸಿಂಗ್ ಅವರನ್ನು 2ಲಕ್ಷ ಮತಗಳಿಂದ ಪರಾಭವಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.