Earthquake;ತೈವಾನ್ ಪೂರ್ವದಲ್ಲಿ 7.5 ತೀವ್ರತೆಯ ಭೂಕಂಪ: ಸುನಾಮಿ ಎಚ್ಚರಿಕೆ
Team Udayavani, Apr 3, 2024, 7:56 AM IST
ತೈಪೆ: ತೈವಾನ್‌ನ ಪೂರ್ವದಲ್ಲಿ ಬುಧವಾರ ಬೆಳಗ್ಗೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇದು ದ್ವೀಪ ರಾಷ್ಟ್ರ, ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್‌ನ ಕೆಲವು ಭಾಗಗಳಿಗೆ ಸುನಾಮಿ ಎಚ್ಚರಿಕೆಗಳನ್ನು ನೀಡಲು ಪ್ರೇರೇಪಿಸಿತು.
ಭೂಕಂಪವು ಅಲ್ಲಿನ ಸ್ಥಳೀಯ ಸಮಯ 8 ಕ್ಕೆ ಸ್ವಲ್ಪ ಮೊದಲು ಸಂಭವಿಸಿದೆ, ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ತೈವಾನ್‌ನ ಹುವಾಲಿಯನ್ ಸಿಟಿಯಿಂದ ದಕ್ಷಿಣಕ್ಕೆ 18 ಕಿಲೋಮೀಟರ್, 34.8 ಕಿಮೀ ಆಳದಲ್ಲಿ ಕೇಂದ್ರಬಿಂದು ಇದೆ ಎಂದು ತಿಳಿಸಿದೆ.
ಜಪಾನ್‌ನ ಹವಾಮಾನ ಸಂಸ್ಥೆಯು ಮಿಯಾಕೊಜಿಮಾ ದ್ವೀಪ ಸೇರಿದಂತೆ ಈ ಪ್ರದೇಶದಲ್ಲಿನ ದೂರದ ಜಪಾನಿನ ದ್ವೀಪಗಳಿಗೆ ಮೂರು ಮೀಟರ್‌ಗಳಷ್ಟು (10 ಅಡಿ) ಎತ್ತರದ ಸುನಾಮಿ ಅಲೆಗಳ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.
ಕಟ್ಟಡಗಳು ಕುಸಿದಿರುವ ವಿಡಿಯೋ ಗಳು ಸಾಮಾಜಿಕ ತಾಣದಲ್ಲಿ ಕಂಡು ಬಂದಿದ್ದು ಸಾವು ನೋವಿನ ಬಗ್ಗೆ ಇನ್ನಷ್ಟೇ ವಿವರಗಳು ಲಭ್ಯವಾಗಬೇಕಿದೆ.
#WATCH | A very shallow earthquake with a preliminary magnitude of 7.5 struck in the ocean near Taiwan. Japan has issued an evacuation advisory for the coastal areas of the southern prefecture of Okinawa after the earthquake triggered a tsunami warning. Tsunami waves of up to 3… pic.twitter.com/2Q1gd0lBaD
— ANI (@ANI) April 3, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.