Arunachal Pradesh ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಕೇರಳದ ಮೂವರು; ಮಾಟಮಂತ್ರವೇ ಕಾರಣ?


Team Udayavani, Apr 3, 2024, 1:02 PM IST

Crime: ಹೊಟೇಲ್‌ವೊಂದರಲ್ಲಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾದ ಕೇರಳ ದಂಪತಿ, ಸ್ನೇಹಿತೆ

ಇಟಾನಗರ(ಅರುಣಾಚಲ ಪ್ರದೇಶ): ಕೇರಳದ ದಂಪತಿ ಹಾಗೂ ಅವರ ಸ್ನೇಹಿತೆ ಅರುಣಾಚಲ ಪ್ರದೇಶದ ಹೊಟೇಲ್‌ ವೊಂದರಲ್ಲಿ ಅನುಮಾನಾಸ್ಪದವಾಗಿ‌ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮೃತರನ್ನು ಕೊಟ್ಟಾಯಂ ಜಿಲ್ಲೆಯ ಆಯುರ್ವೇದ ವೈದ್ಯರಾದ ನವೀನ್ ಥಾಮಸ್, ಅವರ ಪತ್ನಿ ದೇವಿ ಬಿ ಎಂದು ಗುರುತಿಸಲಾಗಿದೆ. ಮೂರನೇ ವ್ಯಕ್ತಿಯನ್ನು ಶಾಲಾ ಶಿಕ್ಷಕಿ ಹಾಗೂ ತಿರುವನಂತಪುರಂ ನಿವಾಸಿ ಆರ್ಯ ಬಿ ನಾಯರ್ (29) ಎಂದು ಗುರುತಿಸಲಾಗಿದೆ.

ಈ ಸಂಬಂಧ ಕೇರಳ ಪೊಲೀಸರು ಮಂಗಳವಾರ(ಏ.2 ರಂದು) ತನಿಖೆಗೆ ಅರುಣಾಚಲ ಪ್ರದೇಶಕ್ಕೆ ತೆರಳಿದ್ದಾರೆ ಎಂದು ವರದಿ ತಿಳಿಸಿದೆ.

ಮಾರ್ಚ್‌ 28 ರಂದು ಈ ಮೂವರು ಹೊಟೇಲ್‌ ಗೆ ಚೆಕ್‌ ಇನ್‌ ಆಗಿದ್ದರು. ಚೆಕ್‌ ಇನ್‌ ಆದಾಗಿನಿಂದ ಕೋಣೆಯ ಹೊರಗೆ ಬಾರದಿರುವ ಕಾರಣಕ್ಕೆ ಸಿಬ್ಬಂದಿ ಏ.1 ರಂದು ಅವರ ರೂಮ್‌ ನತ್ತ ಹೋಗಿದ್ದು, ಅಲ್ಲಿ ಮೂವರು ಶವವಾಗಿ ಪತ್ತೆಯಾಗಿದ್ದಾರೆ.

ಆರ್ಯ ಬಿ ನಾಯರ್ ಬೆಡ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ಮಣಿಕಟ್ಟಿನ ಗಾಯವಾಗಿದೆ. ದೇವಿ ಅವರ ಕುತ್ತಿಗೆ ಮತ್ತು ಮಣಿಕಟ್ಟಿಗೆ ತೀವ್ರ ಗಾಯಗಳಾಗಿದ್ದು, ಅವರು ನೆಲದ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನವೀನ್ ಥಾಮಸ್ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ಮಣಿಕಟ್ಟಿನ ಮೇಲೆ ಗಾಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಜಿಲ್ಲಾ ಪೊಲೀಸ್ ತಂಡ ಮತ್ತು ವಿಧಿವಿಜ್ಞಾನ ತಜ್ಞರು ಘಟನಾ ಸ್ಥಳಕ್ಕೆ ತೆರಳಿ, ಸಾಕ್ಷ್ಯಗಳನ್ನು ಸಂಗ್ರಹಿಸುವ ಮೂಲಕ ತನಿಖೆ ಆರಂಭಿಸಿದ್ದಾರೆ.

ವಿವಾಹಿತ ದಂಪತಿ ಮತ್ತು ಮಹಿಳೆಯ ಮೂವರ ನಡವಳಿಕೆಯಲ್ಲಿ ಅಸಹಜತೆ ಇದೆ ಎಂದು ತೋರುತ್ತಿದೆ ಆದರೆ ಅವರ ಮೊಬೈಲ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಪರಿಶೀಲಿಸುವವರೆಗೆ ಯಾವುದನ್ನೂ ನಿರ್ಣಾಯಕವಾಗಿ ಹೇಳಲಾಗುವುದಿಲ್ಲ ಎಂದು ತಿರುವನಂತಪುರಂ ನಗರ ಪೊಲೀಸ್ ಕಮಿಷನರ್ ಸಿ ನಾಗರಾಜು ಹೇಳಿದ್ದಾರೆ.

ಇದರ ಹಿಂದೆ ಮಾಟಮಂತ್ರ ಇದೆ ಎಂದು ಹೇಳಲಾಗುತ್ತಿದ್ದು, ಆದರೆ ಪೊಲೀಸರು ಸಾಕ್ಷ್ಯವನ್ನೆಲ್ಲಾ ತರಿಸಿಕೊಂಡು ನೋಡಿದ ಮೇಲೆಯೇ ತನಿಖೆಯ ಬಳಿಕವಷ್ಟೇ ಅವರು, ಯಾಕೆ ಹೊಟೇಲ್‌ಗೆ ಹೋದರು, ಇದಕ್ಕೆ ಕಾರಣವೇನು, ಹೇಗೆ ಸಾವನ್ನಪ್ಪಿದ್ದಾರೆ ಎನ್ನುವುದನ್ನು ಹೇಳಲು ಸಾಧ್ಯವೆಂದು ಪೊಲೀಸರು ಹೇಳಿದ್ದಾರೆ.

ದಂಪತಿಗೆ 13 ವರ್ಷಗಳ ಹಿಂದೆ ವಿವಾಹವಾಗಿದ್ದು, ಆಗಾಗ ತಂದೆ-ತಾಯಿಯನ್ನು ಭೇಟಿ ಮಾಡಲು ಬರುತ್ತಿದ್ದರು ಎಂದು ವರದಿ ತಿಳಿಸಿದೆ.

ಆರ್ಯ ಅವರ ಸಂಬಂಧಿಕರು ತಿರುವನಂತಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಆ ಬಳಿಕ ಕೇರಳದ ಪೊಲೀಸರು ನವೀನ್ ಮತ್ತು ದೇವಿಯೊಂದಿಗೆ ಆರ್ಯ ಅರುಣಾಚಲ ಪ್ರದೇಶಕ್ಕೆ ಹೋಗುವ ಮೊದಲು ಗುವಾಹಟಿಗೆ ತೆರಳಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.