Sumalatha Ambareesh:ಮಂಡ್ಯ ಕ್ಷೇತ್ರದ ಕುತೂಹಲಕ್ಕೆ ತೆರೆ,ಬೆಂಬಲಿಗರ ಸಭೇಲಿ ನಿರ್ಧಾರ ಘೋಷಣೆ
ನನ್ನ ನಿರ್ಧಾರವನ್ನು ತಿಳಿಸಬೇಕಾದ ಅವಶ್ಯಕತೆ ಇದೆ
Team Udayavani, Apr 3, 2024, 1:15 PM IST
ಮಂಡ್ಯ: ಕಳೆದ ಬಾರಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ(sumalatha ambareesh) ಸುಮಲತಾ ಅಂಬರೀಶ್, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧೆ ಮಾಡದೇ, ಎನ್ ಡಿಎ ಮೈತ್ರಿ ಅಭ್ಯರ್ಥಿಯಾದ ಎಚ್.ಡಿ.ಕುಮಾರಸ್ವಾಮಿಗೆ ಬೆಂಬಲ ನೀಡುವುದಾಗಿ ಬುಧವಾರ (ಏಪ್ರಿಲ್ 03) ಘೋಷಿಸಿದ್ದಾರೆ.
ಇದನ್ನೂ ಓದಿ:Arunachal Pradesh ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಕೇರಳದ ಮೂವರು; ಮಾಟಮಂತ್ರವೇ ಕಾರಣ?
ಮಂಡ್ಯದಲ್ಲಿ(Mandya) ನಡೆದ ಬೆಂಬಲಿಗರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸುಮಲತಾ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ ಎಂದು ಹೇಳುವ ಮೂಲಕ ಜಿದ್ದಾಜಿದ್ದಿನ ಕಣದಿಂದ ಹಿಂದೆ ಸರಿದಂತಾಗಿದೆ.
ಬೆಂಬಲಿಗರ ಸಭೆಗೂ ಮುನ್ನ ಸುಮಲತಾ ಅಂಬರೀಶ್ ಅವರು ಕಾಳಿಕಾಂಬ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್, ಅಭಿಷೇಕ್ ಅಂಬರೀಶ್ ಜತೆಗಿದ್ದರು.
ಕಳೆದ ಚುನಾವಣೆ ಒಂದು ರೀತಿಯ ಸವಾಲು ಒಡ್ಡಿದ್ದರೆ, ಈ ಬಾರಿಯದ್ದು ಮತ್ತೊಂದು ತೆರನಾದ ಸವಾಲಾಗಿದೆ. ಕೆಲವರು ಪಕ್ಷೇತರವಾಗಿ ಸ್ಪರ್ಧಿಸಿ ಎಂದು ಸಲಹೆ ನೀಡಿದ್ದರು. ಬಿಜೆಪಿ(BJP) ಕೂಡಾ ನನಗೆ ಹಲವಾರು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆಫರ್ ನೀಡಿತ್ತು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೊಬ್ಬರು ಸುಮಲತಾ ಅವಶ್ಯಕತೆ ನಮಗಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ನಾನು ನನ್ನ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕಾದರೆ, ನನ್ನ ನಿರ್ಧಾರವನ್ನು ತಿಳಿಸಬೇಕಾದ ಅವಶ್ಯಕತೆ ಇದೆ ಎಂದು ಸುಮಲತಾ ಹೇಳಿದರು.
ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ, ನನ್ನ ಬೆಂಬಲಿಗರ ಜತೆ ನಾನು ಸದಾ ಇರುತ್ತೇನೆ. ಅಧಿಕಾರ ಬರುತ್ತೆ, ಹೋಗುತ್ತೆ. ಅದು ಶಾಶ್ವತವಲ್ಲ, ಆದರೆ ಪ್ರೀತಿ ಮುಖ್ಯ. ನಾನು ಪಕ್ಷೇತರ ಸಂಸದೆಯಾದರು ಕೂಡಾ ನಾಲ್ಕು ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ್ದು ಬಿಜೆಪಿ ಪಕ್ಷ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಹೀಗಾಗಿ ನಾನು ಶೀಘ್ರದಲ್ಲೇ ಬಿಜೆಪಿ ಪಕ್ಷ ಸೇರಲು ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸುಮಲತಾ ಅವರು ಘೋಷಿಸುವ ಮೂಲಕ ಮಂಡ್ಯ ಕ್ಷೇತ್ರದ ರಾಜಕೀಯ ಅಖಾಡದಲ್ಲಿನ ಕುತೂಹಲಕ್ಕೆ ತೆರೆ ಬಿದ್ದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.