Tragedy: ಅಮೆರಿಕದಲ್ಲಿ ರಸ್ತೆ ಅಪಘಾತ; ಭಾರತೀಯ ಮೂಲದ ತಾಯಿ ಮಗಳು ಮೃತ್ಯು… ತಂದೆ ಮಗ ಗಂಭೀರ
ಹುಟ್ಟುಹಬ್ಬದ ಸಂಭ್ರಮದಲ್ಲಿ ದೇವಸ್ಥಾನಕ್ಕೆ ತೆರಳುವ ವೇಳೆ ಅವಘಡ
Team Udayavani, Apr 3, 2024, 2:41 PM IST
ನ್ಯೂಯಾರ್ಕ್: ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ತಾಯಿ ಮತ್ತು ಮಗಳು ಮೃತ ಪಟ್ಟು ತಂದೆ ಮತ್ತು ಮಗ ಗಾಯಗೊಂಡಿರುವ ಘಟನೆ ಅಮೆರಿಕದ ಒರೆಗಾನ್ ಸಿಟಿಯಲ್ಲಿ ನಡೆದಿದೆ.
ಒರೆಗಾನ್ ಸ್ಟೇಟ್ ಪೋಲೀಸ್ ಪ್ರಕಾರ ಕಾರು ಸಿಗ್ನಲ್ ಜಂಪ್ ಮಾಡಿರುವುದೇ ಈ ಅವಘಡಕ್ಕೆ ಕಾರಣ ಎಂದು ಹೇಳಿದ್ದಾರೆ.
ಮೃತರು ಮೂಲತಃ ಆಂಧ್ರಪ್ರದೇಶದ ಕೊನಕಂಚಿ ಗ್ರಾಮದವರಾದ ಗೀತಾಂಜಲಿ (32) ಹಾಗು ಆಕೆಯ ಪುತ್ರಿ ಹನಿಕಾ (5) ಎಂದು ಹೇಳಲಾಗಿದೆ, ಘಟನೆಯಲ್ಲಿ ಪತಿ ಹಾಗೂ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಭಾನುವಾರ ಗೀತಾಂಜಲಿ ಅವರ ಹುಟ್ಟುಹಬ್ಬ ಇದ್ದ ಕಾರಣ ಮನೆಮಂದಿ ದೇವಸ್ಥಾನಕ್ಕೆ ಭೇಟಿ ನೀಡುವ ಉದ್ದೇಶ ಹೊಂದಿದ್ದರು ಹಾಗಾಗಿ ಕುಟುಂಬ ಸದಸ್ಯರು ತಮ್ಮ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿದ್ದಾರೆ, ಈ ವೇಳೆ ಕಾರು ದಕ್ಷಿಣ ಮೆರಿಡಿಯನ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಂದರ್ಭ ಸಿಗ್ನಲ್ ಜಂಪ್ ಮಾಡಿದ್ದಾರೆ ಈ ವೇಳೆ ಇನ್ನೊಂದು ಕಾರು ಇವರ ಕಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಮಗಳು ಸ್ಥಳದಲ್ಲೇ ಮೃತಪಟ್ಟರೆ ಮೂವರು ಗಂಭೀರ ಗಾಯಗೊಂಡಿದ್ದರು ಕೂಡಲೇ ಅವರನ್ನು ಏರ್ ಲಿಫ್ಟ್ ಮಾಡಿ ಆಸ್ಪತ್ರೆಗೆ ದಾಖಲಿಸಿದರೂ ಗೀತಾಂಜಲಿ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ, ಸದ್ಯ ತಂದೆ ಹಾಗೂ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗೀತಾಂಜಲಿ ಮತ್ತು ಅವರ ಪತಿ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿದ್ದು ಸುಮಾರು 10 ವರ್ಷಗಳಿಂದ ಯುಎಸ್‌ನಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: LS Polls: ನಮ್ಮ ಗೆಲುವು ನೂರಕ್ಕೆ ನೂರು ಗ್ಯಾರಂಟಿ: ರೋಡ್ ಶೋ ನಡೆಸಿ ಸಿಎಂ ಹೇಳಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.