Mallikarjun Kharge ವಿರುದ್ಧವೂ ಚುನಾವಣ ಆಯೋಗಕ್ಕೆ ಬಿಜೆಪಿ ದೂರು
Team Udayavani, Apr 3, 2024, 11:22 PM IST
ಬೆಂಗಳೂರು: ಬಿಜೆಪಿ ಮತ್ತು ಆರ್ಎಸ್ಎಸ್ ವಿಷವಿದ್ದಂತೆ. ಅದರ ರುಚಿ ನೋಡಬೇಡಿ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ನೀಡಿದೆ.
ಖರ್ಗೆಯವರು ತಮ್ಮ ಹೇಳಿಕೆ ಮೂಲಕ ಮತದಾರರನ್ನು ನಮ್ಮ ಪಕ್ಷದ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡಿದ್ದಾರೆ ಎಂದು ಆಕ್ಷೇಪಿಸಲಾಗಿದೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಚುನಾವಣ ಪ್ರಚಾರದಿಂದ ಕೂಡಲೇ ನಿರ್ಬಂ ಧಿಸಬೇಕು ಎಂದು ಆಗ್ರಹಿಸಲಾಗಿದೆ.
ಪ್ರಧಾನಿಯವರ ಫೋಟೊ ಬಳಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವ ಯುವ ಕಾಂಗ್ರೆಸ್ನ ಮೀಡಿಯ ಪ್ಯಾನೆಲಿಸ್ಟ್ ಅಕ್ಷತಾ ರವಿಕುಮಾರ್ ಅವರ ಎಕ್ಸ್ (ಟ್ವಿಟ್ಟರ್) ಖಾತೆಯನ್ನು ಕೂಡಲೇ ನಿರ್ಬಂಧಿ ಸುವಂತೆ ಇನ್ನೊಂದು ಮನವಿಯಲ್ಲಿ ಆಗ್ರಹಿಸಿದೆ. ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.