Koratagere: ನಾಲ್ವರು ವನ್ಯಜೀವಿ ಬೇಟೆಗಾರರ ಬಂಧನ: 7 ಕಾಡು ಹಂದಿಗಳ ರಕ್ಷಣೆ!
Team Udayavani, Apr 4, 2024, 7:46 PM IST
ಕೊರಟಗೆರೆ: ಸುರಪುರ ಅರಣ್ಯದಲ್ಲಿ ಅಕ್ರಮವಾಗಿ ಕಾಡಿನ ಹಂದಿಗಳನ್ನು ಬೇಟೆಯಾಡಿ ಯಾದಗಿರಿಯಿಂದ ಕೊರಟಗೆರೆ ಪಟ್ಟಣಕ್ಕೆ ತಂದು ಮಾರಾಟಕ್ಕೆ ಯತ್ನಿಸುವ ವೇಳೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ 4 ಮಂದಿ ಆರೋಪಿಗಳನ್ನು ಬಂಧಿಸಿ, 7 ಕಾಡುಹಂದಿಗಳ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.
ಖಚಿತ ಮಾಹಿತಿ ಆಧರಿಸಿ ರವಿ.ಸಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಕೊರಟಗೆರೆ ಪಟ್ಟಣದ ವಿನಾಯಕ ನಗರದ ಮಾರುತಿ ಎಂಬಾತನ ಅಂಗಡಿಯಲ್ಲಿ ಮಾರಾಟಕ್ಕೆ ಯತ್ನಿಸುವ ವೇಳೆ ಬೊಲೆರೋ ವಾಹನ ವಶಕ್ಕೆ ಪಡೆದಿದ್ದಾರೆ. ಕೊರಟಗೆರೆ ಅರಣ್ಯ ಇಲಾಖೆಯಲ್ಲಿ 5 ಮಂದಿ ಆರೋಪಿಗಳ ಮೇಲೆ ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೂಲ್‌ಪೇಟೆಯ ಸುರೇಶ(28), ಕೊಪ್ಪಳ ಜಿಲ್ಲೆ ಕೊಪ್ಪಳ ತಾಲೂಕಿನ ಗಾಂಧಿನಗರದ ಮಂಜುನಾಥ(28), ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ರಂಗಮಪೇಟೆಯ ಪರಶುರಾಮ(22), ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ವಿನಾಯಕ ನಗರದ ಮಾರುತಿ(39) ಬಂಧಿತರು ಇನ್ನೋರ್ವ ದೂಲ್‌ಪೇಟೆಯ ಆರೋಪಿ ಭೀಮಾ(38)ನಿಗೆ ಶೋಧ ಕಾರ್ಯ ನಡೆದಿದೆ.
ತುಮಕೂರು ಉಪಅರಣ್ಯ ಸಂರಕ್ಷಣಾಧಿಕಾರಿ ಅನುಪಮ.ಹೆಚ್, ಮಧುಗಿರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಮಾರ್ಗದರ್ಶನದಲ್ಲಿ ಕೊರಟಗೆರೆ ವಲಯ ಅರಣ್ಯಾಧಿಕಾರಿ ರವಿ.ಸಿ, ಉಪ ವಲಯ ಅರಣ್ಯಾಧಿಕಾರಿ ದಿಲೀಪ್‌ಕುಮಾರ್,ಸಿಬಂದಿಗಳಾದ ವಿಜಯಕುಮಾರ್, ಮಂಜುನಾಥ, ಚಾಂದುಪಾಷ, ಕಾವ್ಯಶ್ರೀ, ನರಸರಾಜು, ಬಾಬು ಸೇರಿದಂತೆ ಇತರರು ದಾಳಿಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.