JD(S) ; ಎಚ್.ಡಿ.ಕುಮಾರಸ್ವಾಮಿ ಅವರಿಗಿಂತ ಪತ್ನಿಯೇ ಸಿರಿವಂತೆ
37.48 ಕೋಟಿ ಮೌಲ್ಯದ ಕೃಷಿ ಭೂಮಿ.... ಮೂರು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ...
Team Udayavani, Apr 4, 2024, 8:08 PM IST
ಮಂಡ್ಯ : ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರದ ಜತೆಗೆ ಸಲ್ಲಿಸಿದ ಅಫಿಡವಿಟ್ ಪ್ರಕಾರ ಪತ್ನಿ ಅನಿತಾ ಅವರ ಆಸ್ತಿ ಸೇರಿ ಒಟ್ಟು 217.21 ಕೋಟಿ ರೂಪಾಯಿ ಮೌಲ್ಯದ ಸಿರಿ ಸಂಪತ್ತು ಹೊಂದಿದ್ದಾರೆ.
ಮಾಜಿ ಶಾಸಕಿಯಾಗಿರುವ ಅನಿತಾ ಅವರು ಕುಮಾರಸ್ವಾಮಿ ಅವರಿಗಿಂತ ಶ್ರೀಮಂತರಾಗಿದ್ದು, ಒಟ್ಟು ಆಸ್ತಿ 154.39 ಕೋಟಿ ರೂ.ಆಸ್ತಿ ಮೌಲ್ಯ ಹೊಂದಿದ್ದು, ಕುಮಾರಸ್ವಾಮಿ ಅವರ ಒಟ್ಟು ಆಸ್ತಿ 54.65 ಕೋಟಿ ರೂ. ಆಗಿದೆ. HUF (ಹಿಂದೂ ಅವಿಭಜಿತ ಕುಟುಂಬ) ನಿಂದ ಅವರ ಹೆಸರಿನಲ್ಲಿ ಸುಮಾರು 8.17 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.
65 ರ ಹರೆಯದ ಮಾಜಿ ಮುಖ್ಯಮಂತ್ರಿ, ಬಿಎಸ್ಸಿ ಪದವೀಧರರು, ಸಮಾಜ ಸೇವಕ, ರಾಜಕಾರಣಿ ಮತ್ತು ಕೃಷಿಕ ಎಂದು ಘೋಷಿಸಿಕೊಂಡಿದ್ದಾರೆ.
ಅನಿತಾ ಅವರು ವ್ಯಾಪಾರ ಮತ್ತು ಬಾಡಿಗೆ ಆದಾಯವನ್ನು ಹೊಂದಿದ್ದಾರೆ. ನಿಖಿಲ್ ಮತ್ತು ಕೋ ಹೆಸರಿನಲ್ಲಿ ಪೆಟ್ರೋಲ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ವ್ಯಾಪಾರದಲ್ಲಿ ತೊಡಗಿರುವ ಉದ್ಯಮಿಯಾಗಿದ್ದು, ಕಸ್ತೂರಿ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾಗಿದ್ದಾರೆ.
ಕುಮಾರಸ್ವಾಮಿ ಅವರ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಅವರು ಯಾವುದೇ ಕಾರು ಹೊಂದಿಲ್ಲ, ಆದರೆ 12.55 ಲಕ್ಷ ಮೌಲ್ಯದ ಟ್ರ್ಯಾಕ್ಟರ್ ಹೊಂದಿದ್ದಾರೆ, ಆದರೆ ಅನಿತಾ ಅವರು ನಿಖಿಲ್ ಮತ್ತು ಕಂಪನಿಯಿಂದ 11.15 ಲಕ್ಷ ರೂ. ಮೌಲ್ಯದ ಕಾರು ಹೊಂದಿದ್ದಾರೆ.
ಕುಮಾರಸ್ವಾಮಿ ಬಳಿ 47.06 ಲಕ್ಷ ಮೌಲ್ಯದ ಚಿನ್ನ ಮತ್ತು 2.60 ಲಕ್ಷ ಮೌಲ್ಯದ ವಜ್ರ, ಅನಿತಾ ಬಳಿ ಕ್ರಮವಾಗಿ 2.41 ಕೋಟಿ ಮೌಲ್ಯದ ಚಿನ್ನ ಮತ್ತು 33.09 ಲಕ್ಷ ರೂ.ಮೌಲ್ಯದ ವಜ್ರವಿದೆ ಎಂದು ಘೋಷಿಸಿದ್ದಾರೆ. 37.48 ಕೋಟಿ ಮೌಲ್ಯದ ಕೃಷಿ ಭೂಮಿ ಮತ್ತು ಜೆಪಿ ನಗರ ಮೂರನೇ ಹಂತದಲ್ಲಿ 6.46 ಕೋಟಿ ರೂ.ಮೌಲ್ಯದ ನಿವಾಸ. ಎಚ್‌ಯುಎಫ್‌ನಿಂದ ವಾಣಿಜ್ಯ ಕಟ್ಟಡದಲ್ಲಿ ಕುಮಾರಸ್ವಾಮಿ ಅವರ ಪಾಲು ಸುಮಾರು 6.97 ಕೋಟಿ ರೂ. ಆಗಿದೆ. ಅನಿತಾ ಅವರು 28.38 ಕೋಟಿ ರೂ ಮೌಲ್ಯದ ಕೃಷಿ ಭೂಮಿಯನ್ನು ಹೊಂದಿದ್ದು, 35.69 ಕೋಟಿ ರೂ ಮೌಲ್ಯದ ಎರಡು ವಾಣಿಜ್ಯ ಕಟ್ಟಡಗಳನ್ನು ಹೊಂದಿದ್ದಾರೆ ಎಂದು ಅಫಿಡವಿಟ್ ನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.